ಕೇನ್ ವಿಲಿಯಮ್ಸನ್ ಮುಂದಿನ ಟೆಸ್ಟ್ ಆಡುವುದು ಅನುಮಾನ ಎಂದ ನ್ಯೂಜಿಲೆಂಡ್ ಕೋಚ್

ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನಾಡಲು ಇಂಗ್ಲೆಂಡ್ ತಲುಪಿದೆ. ಜೂನ್ 18-22ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಇದಕ್ಕೂ ಮೊದಲೇ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ.
ನ್ಯೂಜಿಲೆಂಡ್‌ನ ಈ ಬೌಲರ್‌ಗೆ ಕೊಹ್ಲಿ ಹೆದರುತ್ತಾರೆ; ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್!
ಈಗಾಗಲೇ ಮೊದಲನೆಯ ಟೆಸ್ಟ್ ಮುಗಿದಿದ್ದು ಡ್ರಾನಲ್ಲಿ ಅಂತ್ಯಗೊಂಡಿದೆ. ಹೀಗಾಗಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳೆರಡೂ ಎರಡನೇ ಪಂದ್ಯವನ್ನು ಗೆಲ್ಲುವ ತವಕದಲ್ಲಿವೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಎರಡನೇ ಟೆಸ್ಟ್ ಗುರುವಾರ ಆರಂಭವಾಗಲಿದ್ದು ಪಂದ್ಯದ ಕುರಿತು ನ್ಯೂಜಿಲೆಂಡ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೀಡ್ ಬೇಸರದ ಸುದ್ದಿಯೊಂದನ್ನು ಹೊರಹಾಕಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ನಲ್ಲಿ ಭಾರತದ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್!
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ತೋರು ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನ್ಯೂಜಿಲೆಂಡ್ ತಂಡದ ಬೌಲರ್ ಮಿಚೆಲ್ ಸ್ಯಾಂಟ್ನರ್ ಅಲಭ್ಯರಾಗಲಿದ್ದಾರೆ ಹಾಗೂ ತಂಡದ ನಾಯಕ ಕೇನ್ ವಿಲಿಯಮ್ಸನ್ ಎಡಗೈಯ ಮೊಣಕೈ ನೋವಿನಿಂದ ಬಳಲುತ್ತಿದ್ದು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುತ್ತಾರೋ ಇಲ್ಲವೋ ಎಂಬ ವಿಷಯ ಬುಧವಾರ ತಿಳಿಯಲಿದೆ ಎಂದು ಗ್ಯಾರಿ ಸ್ಟೀಡ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications