Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Eng vs Pak: ಅಂತಿಮ ಟೆಸ್ಟ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆಲುವಿಗೆ ಸುಲಭ ಸವಾಲು ಪಡೆದ ಇಂಗ್ಲೆಂಡ್!

Eng vs Pak: 3rd Test England need 167 runs to win in last innings, day 3 Highlights

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ 3ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಕೂಡ ಪಾಕಿಸ್ತಾನ ಬಹುತೇಕ ಸೋಲಿನ ಅಂಚಿಗೆ ಬಂದು ನಿಂತಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಪಾಕಿಸ್ತಾನ ಅಂತಿಮ ಪಂದ್ಯದಲ್ಲಿಯೂ ನೀರಸ ಪ್ರದರ್ಶನ ನೀಡಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ ವೈಟ್‌ವಾಶ್ ಅನುಭವಿಸುವತ್ತ ಮುಖಮಾಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 50 ರನ್‌ಗಳ ಹಿನ್ನಡೆ ಅನುಭವಿಸಿದ್ದ ಪಾಕಿಸ್ತಾನ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿತು. ಅದರಲ್ಲೂ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಯುವ ಸ್ಪಿನ್ನರ್ ರೆಹಾನ್ ಅಹ್ಮದ್ ಬೌಲಿಂಗ್ ದಾಳಿಗೆ ಪಾಕಿಸ್ತಾನ ಸಂಪೂರ್ಣವಾಗಿ ತತ್ತರಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕ್ ಪಡೆಯ ವಿರುದ್ಧ ಐದು ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಈ ಯುವ ಆಟಗಾರ ಯಶಸ್ವಿಯಾಗಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ನಾಯಕ ಬಾಬರ್ ಅಜಂ ಹಾಗೂ ಸೌದ್ ಶಕೀಲ್ ಭರ್ಜರಿ ಶತಕದ ಜೊತೆಯಾಟ ನೀಡುವಲ್ಲಿ ಯಶಸ್ವಿಯಾದರು. ಈ ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಈ ಜೋಡಿ ಬೇರ್ಪಟ್ಟ ಬಳಿಕ ಮತ್ತೆ ಪಾಕಿಸ್ತಾನ ಕುಸಿತ ಕಾಣಲು ಆರಂಭಿಸಿತು. ಅಂತಿಮವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 216 ರನ್‌ಗಳನ್ನು ಮಾತ್ರವೇ ಗಳಿಸಲು ಸಾಧ್ಯವಾಯಿತು. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ 167 ರನ್‌ಗಳನ್ನು ಗಳಿಸುವ ಸುಲಭ ಸವಾಲು ದೊರೆತಿದೆ.

ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ 304 ರನ್‌ಗಳನ್ನು ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಹ್ಯಾರಿ ಬ್ರೂಕ್ ಅವರ ಭರ್ಜರಿ ಶತಕದ ನೆರವಿನಿಂದಾಗಿ 354 ರನ್‌ಗಳನ್ನು ಗಳಿಸಿತ್ತು.

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಶಾನ್ ಮಸೂದ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಸೌದ್ ಶಕೀಲ್, ಫಹೀಮ್ ಅಶ್ರಫ್, ನೌಮನ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ಅಬ್ರಾರ್ ಅಹ್ಮದ್
ಬೆಂಚ್: ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್, ಮೊಹಮ್ಮದ್ ಅಲಿ, ಜಾಹಿದ್ ಮಹಮೂದ್, ಸರ್ಫರಾಜ್ ಅಹ್ಮದ್

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ವಿಲ್ ಜ್ಯಾಕ್ಸ್, ಜೇಮ್ಸ್ ಆಂಡರ್ಸನ್, ಜೇಮೀ ಓವರ್ಟನ್, ಕೀಟನ್ ಜೆನ್ನಿಂಗ್ಸ್

Story first published: Monday, December 19, 2022, 17:03 [IST]
Other articles published on Dec 19, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+