ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ENG vs SA 1st Test: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11, LIVE SCORE

England

ಲಂಡನ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಆಫ್ರಿಕಾ ತಂಡ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನ ಗೆದ್ದಿರುವ ಡೀನ್ ಎಲ್ಗರ್ ನಾಯಕತ್ವದ ಹರಿಣಗಳು ಟೆಸ್ಟ್‌ನಲ್ಲೂ ಶುಭಾರಂಭ ಮಾಡುವ ನಿರೀಕ್ಷೆ ಹೊಂದಿದೆ.

ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ, ಕೊನೆಯ ಎರಡು ಪಂದ್ಯ ಗೆದ್ದು ಆಂಗ್ಲರಿಗೆ ತಿರುಗೇಟು ನೀಡಿತು, 2-1ರ ಅಂತರದಲ್ಲಿ ಸರಣಿ ಜಯಿಸಿತು. ಇದಕ್ಕೂ ಮೊದಲು ನಡೆದ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿತು.

ಕೊಹ್ಲಿ, ಧೋನಿಗೆ ತನ್ನನ್ನು ಹೋಲಿಸಿಕೊಂಡ ಜೆಮಿಮಾ ರೋಡ್ರಿಗಸ್‌: ಟ್ವೀಟ್ ವೈರಲ್ಕೊಹ್ಲಿ, ಧೋನಿಗೆ ತನ್ನನ್ನು ಹೋಲಿಸಿಕೊಂಡ ಜೆಮಿಮಾ ರೋಡ್ರಿಗಸ್‌: ಟ್ವೀಟ್ ವೈರಲ್

ಬೆನ್‌ ಸ್ಟೋಕ್ಸ್‌ ಟೆಸ್ಟ್‌ ನಾಯಕತ್ವದ ಚುಕ್ಕಾಣಿ ಹಿಡಿದ ಬಳಿಕ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ಗೆಲುವು ಸಾಧಿಸಿದ ಇಂಗ್ಲೆಂಡ್, ಭಾರತ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆದ್ದು ಸರಣಿ ಸಮಬಲ ಸಾಧಿಸಿತು. ಇದೀಗ ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧವೂ ಅಂತಹದ್ದೇ ಪ್ರದರ್ಶನ ನೀಡುವ ಯೋಜನೆಯಲ್ಲಿದೆ. ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ತಂಡದ ಸ್ಕೋರ್ 6ರನ್‌ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ. ಅಲೆಕ್ಸ್ ಲೀಸ್ ಕೇವಲ 5ರನ್‌ಗೆ ಕಗಿಸೊ ರಬಾಡಗೆ ವಿಕೆಟ್ ಒಪ್ಪಿಸಿದ್ದಾರೆ. ಲೈವ್‌ ಸ್ಕೋರ್ ಈ ಕೆಳಗಿದೆ.

1
51791

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ದಕ್ಷಿಣ ಆಫ್ರಿಕಾ
ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಏಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಆನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ

ಬೆಂಚ್‌: ಲುಥೋ ಸಿಪಾಮ್ಲಾ, ಸೈಮನ್ ಹಾರ್ಮರ್, ಖಯಾ ಜೊಂಡೋ, ರಿಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಇಂಗ್ಲೆಂಡ್
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಮ್ಯಾಟಿ ಪಾಟ್ಸ್, ಜೇಮ್ಸ್ ಆಂಡರ್ಸನ್

ಜಿಂಬಾಬ್ವೆ ವಿರುದ್ಧದ ಸರಣಿಯಿಂದ ವಾಷಿಂಗ್ಟನ್ ಸುಂದರ್ ಔಟ್ | *Cricket | OneIndia Kannada

ಬೆಂಚ್‌: ಆಲಿ ರಾಬಿನ್ಸನ್, ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್

Story first published: Wednesday, August 17, 2022, 15:59 [IST]
Other articles published on Aug 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X