ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ: 2ನೇ ಟೆಸ್ಟ್ ಪಂದ್ಯಕ್ಕೆ ಆಡುವ ಬಳಗವನ್ನು ಪ್ರಕಟಿಸಿದ ಇಂಗ್ಲೆಂಡ್

ದಕ್ಷಿಣ ಆಪ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿ ಮುಖಭಂಗಕ್ಕೊಳಗಾದ ಆತಿಥೇಯ ಇಂಗ್ಲೆಂಡ್ ತಂಡ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಗುರುವಾರದಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರೆಫಾರ್ಡ್ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದ್ದು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗವನ್ನು ಇಂಗ್ಲೆಂಡ್ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ಮಾತ್ರವೇ ಮಾಡಿಕೊಳ್ಳಲಾಗಿದೆ.
ಲಾರ್ಡ್ಸ್ ಮೈದಾನದಲ್ಲಿ ನಡೆದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಬಹುತೇಕ ಆಟಗಾರರು ಎರಡನೇ ಪಂದ್ಯದಲ್ಲಿಯೂ ಕಣಕ್ಕಿಳಿಯಲಿದ್ದಾರೆ. ಕೇವಲ ಒಂದು ಬದಲಾವನೆಯನ್ನು ಮಾತ್ರವೇ ಮಾಡಿಕೊಳ್ಳಲಾಗಿದ್ದು ಒಲ್ಲೀ ರಾಬಿನ್ಸನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದು ಮ್ಯಾಥ್ಯೂ ಪಾಟ್ ತಂಡದಿಂದ ಹೊರಬಿದ್ದಿದ್ದಾರೆ. ವೇಗದ ಬೌಲಿಂಗ್ ವಿಭಾಗ ಅನುಭವಿಗಳಾದ ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಜಾಕ್ ಲೀಚ್ ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ನೆರವಾಗಲಿದ್ದಾರೆ.

ಬ್ಯಾಟಿಂಗ್ ವಿಭಾಗವೇ ತಲೆನೋವು
ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಇದರ ಪರಿಣಾಮವಾಗಿ ಇನ್ನಿಂಗ್ಸ್ ಅಂತರದಿಂದ ಇಂಗ್ಲೆಂಡ್ ಸೋಲು ಅನುಭವಿಸಿತ್ತು. ಆರಂಭಿಕ ಆಟಗಾರರಾದ ಅಲೆಕ್ಸ್ ಲೀಸ್ ಹಾಗೂ ಜಾಕ್ ಕ್ರಾವ್ಲೆ ಆರಂಭಿಕರಾಗಿ ಮ್ಯಾಂಚೆಸ್ಟರ್‌ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ನೀಡಬೇಕಿದೆ. ಇನ್ನು ಅಗ್ರ ಶ್ರೇಯಾಂಕದ ಆಟಗಾರ ಜೋ ರೂಟ್ ಕಳೆದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ಮತ್ತೆ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಇನ್ನು ಜಾನಿ ಬೈರ್‌ಸ್ಟೋವ್ ನಾಯಕ ಬೆನ್ ಸ್ಟೋಕ್ಸ್ ಮಧ್ಯಮ ಕ್ರಮಾಂಕದಲ್ಲಿ ನೆರವಾಗುವ ನಿರೀಕ್ಷೆಯಲ್ಲಿದ್ದಾರೆ.

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ದಕ್ಷಿಣ ಆಫ್ರಿಕಾ
ಇನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದುಕೊಂಡಿರುವ ದಕ್ಷಿಣ ಆಫ್ರಿಕಾ ತಂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ. ತಂಡದ ಬೌಲಿಂಗ್ ವಿಭಾಗ ನೀಡಿದ ಸಾಂಘಿಕ ಪ್ರದರ್ಶನ ಮೊದಲ ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿತ್ತು. ಇದೀಗ ಎರಡನೇ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನವನ್ನು ನೀಡುವ ವಿಶ್ವಾಸದಲ್ಲಿದೆ ದಕ್ಷಿಣ ಆಫ್ರಿಕಾ. ಈ ಪಂದ್ಯದಲ್ಲಿ ಗೆದ್ದು ಟೆಸ್ಟ್ ಸರಣಿಯನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಸಲಿದೆ ದಕ್ಷಿಣ ಆಫ್ರಿಕಾ ತಂಡ.

ಇಂಗ್ಲೆಂಡ್ ಆಡುವ ಬಳಗ
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ದಕ್ಷಿಣ ಆಫ್ರಿಕಾ ಸ್ಕ್ವಾಡ್: ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಕಿಯಾ, ರಾಸ್ಸಿ ವಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್‌ರಾಮ್, ಕಗಿಸೊ ರಬಾಡ, ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಖಯಾ ಜೊಂಡೋ, ಮಾರ್ಕೊ ಜಾನ್ಸೆನ್, ರಯಾನ್ ರಿಕೆಲ್ಟನ್, ಕೈಲ್ ವೆರ್ರೆನ್ನೆ, ಸೈಮನ್ ಹಾರ್ಮರ್, ಗ್ಲೆಂಟನ್ ಸ್ಟೌರ್ಮನ್, ಲುಥೋ ಸಿಪಾಮ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications