ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Eng vs SA 2nd Test: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಪ್ಲೇಯಿಂಗ್ 11, LIVE SCORE

England vs south africa 2nd test

ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನ ಇನ್ನಿಂಗ್ಸ್‌ ಅಂತರದಲ್ಲಿ ಜಯಿಸಿರುವ ಡೀನ್ ಎಲ್ಗರ್ ತಂಡ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನ ಗೆದ್ದ ಬಳಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಂಗ್ಲರನ್ನ ಹೀನಾಯ ಸೋಲಿಸಿದ ಹರಿಣಗಳು ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಮೇಲುಗೈ ಸಾಧಿಸಿವೆ. ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ, ಕೊನೆಯ ಎರಡು ಪಂದ್ಯ ಗೆದ್ದು ಆಂಗ್ಲರಿಗೆ ತಿರುಗೇಟು ನೀಡಿತು, 2-1ರ ಅಂತರದಲ್ಲಿ ಸರಣಿ ಜಯಿಸಿತು. ಇದಕ್ಕೂ ಮೊದಲು ನಡೆದ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿತು.

ಬೆನ್‌ ಸ್ಟೋಕ್ಸ್‌ ಟೆಸ್ಟ್‌ ನಾಯಕತ್ವದ ಚುಕ್ಕಾಣಿ ಹಿಡಿದ ಬಳಿಕ ಇಂಗ್ಲೆಂಡ್ ನ್ಯೂಜಿಲೆಂಡ್, ಭಾರತದ ವಿರುದ್ಧ ಟೆಸ್ಟ್‌ ಪಂದ್ಯಗಳಲ್ಲಿ ಗೆಲುವು ಸಾಧಿಸಿತು. ಆದ್ರೆ ಬಲಿಷ್ಠ ದಕ್ಷಿಣ ಆಫ್ರಿಕಾ ಎದುರು ಮೊದಲ ಪಂದ್ಯ ಸೋತಿರುವ ಇಂಗ್ಲೆಂಡ್ ಕಂಬ್ಯಾಕ್ ಮಾಡುವ ಯೋಜನೆ ರೂಪಿಸಿದೆ.

ಉಭಯ ತಂಡಗಳು ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಇಂಗ್ಲೆಂಡ್ ಪರ ಮ್ಯಾಟಿ ಪಾಟ್ಸ್ ಬದಲು ಒಲ್ಲಿ ರಾಬಿನ್‌ಸನ್‌ ಸ್ಥಾನ ಪಡೆದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ಪರ ಜಾನ್ಸೆನ್ ಬದಲು ಸೈಮನ್ ಹಾರ್ಮರ್ ಸ್ಥಾನ ಪಡೆದಿದ್ದಾರೆ. ಲೈವ್ ಸ್ಕೋರ್ ಜೊತೆಗೆ ಪ್ಲೇಯಿಂಗ್ ಇಲೆವೆನ್ ಅನ್ನು ಮುಂದೆ ತಿಳಿಯಿರಿ.

1
51792

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗೆ ತಿಳಿಯಿರಿ

ದಕ್ಷಿಣ ಆಫ್ರಿಕಾ
ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ಏಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಸೈಮನ್ ಹಾರ್ಮರ್ , ಕೇಶವ್ ಮಹಾರಾಜ್, ಕಗಿಸೊ ರಬಾಡ, ಆನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ

ಬೆಂಚ್‌: ಲುಥೋ ಸಿಪಾಮ್ಲಾ, ಮಾರ್ಕೊ ಜಾನ್ಸೆನ್, ಖಯಾ ಜೊಂಡೋ, ರಿಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಇಂಗ್ಲೆಂಡ್
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್

ಬೆಂಚ್‌: ಮ್ಯಾಟಿ ಪಾಟ್ಸ್ , ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್

Story first published: Thursday, August 25, 2022, 16:07 [IST]
Other articles published on Aug 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X