ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ, 3ನೇ ಟೆಸ್ಟ್: ಟಾಸ್ ರಿಪೋರ್ಟ್, ಪ್ಲೇಯಿಂಗ್ XI ಹಾಗೂ Live ಸ್ಕೋರ್

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಪಂದ್ಯಕ್ಕೆ ಆರಂಭದಲ್ಲಿಯೇ ಮಳೆ ಅಡ್ಡಿಯುಂಟು ಮಾಡಿದೆ. ಆತಿಥೇಯ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದೆ. ಮೊದಲ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಅಮೋಘ ಜಯ ಸಾಧಿಸಿದೆ. ಈ ಮೂಲಕ ಸರಣಿ ಈಗ ಸಮಬಲದಲ್ಲಿದ್ದು ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುವ ಈ ಪಂದ್ಯ ಕುತೂಹಲ ಹೆಚ್ಚಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಕುತೂಹಲ ಮೂಡಿಸಿದ ಟೆಸ್ಟ್ ಸರಣಿ
ಟೆಸ್ ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ವೈಟ್‌ಬಾಲ್ ಸರಣಿಯಲ್ಲಿ ಇಂಗ್ಲೆಂಡ್ ಮುಖಾಮುಖಿಯಾಗಿತ್ತು. ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ, ಕೊನೆಯ ಎರಡು ಪಂದ್ಯ ಗೆದ್ದು ಆಂಗ್ಲರಿಗೆ ತಿರುಗೇಟು ನೀಡುವ ಮೂಲಕ 2-1ರ ಅಂತರದಲ್ಲಿ ಸರಣಿ ಜಯಿಸಿತು. ಇದಕ್ಕೂ ಮೊದಲು ನಡೆದ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿತು. ಇದೀಗ ಟೆಸ್ಟ್ ಸರಣಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಡಕೆಟ್, ಕ್ರೇಗ್ ಓವರ್ಟನ್, ಮ್ಯಾಟಿ ಪಾಟ್ಸ್

ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಕೀಗನ್ ಪೀಟರ್ಸನ್, ರಿಯಾನ್ ರಿಕೆಲ್ಟನ್, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ
ಬೆಂಚ್: ಐಡೆನ್ ಮಾರ್ಕ್ರಾಮ್, ಸೈಮನ್ ಹಾರ್ಮರ್, ಲುಂಗಿ ಎನ್ಗಿಡಿ, ಲುಥೋ ಸಿಪಾಮ್ಲಾ, ಗ್ಲೆಂಟನ್ ಸ್ಟೌರ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications