For Quick Alerts
ALLOW NOTIFICATIONS  
For Daily Alerts
 

ದ. ಆಫ್ರಿಕಾ ವಿರುದ್ಧದ ಟಿ20 ಹಾಗೂ ದಿ ಹಂಡ್ರೆಸ್ ಟೂರ್ನಿಯನ್ನು ತಪ್ಪಿಸಿಕೊಳ್ಳಲಿದ್ದಾರೆ ಇಂಗ್ಲೆಂಡ್ ಸ್ಟಾರ್

Eng vs SA: England allrounder Ben Stokes will miss T20I series against South Africa

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿಯ ಬಳಿಕ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ವೈಟ್‌ಬಾಲ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಯಲ್ಲಿ ಭಾಗಿಯಾಗಲಿರುವ ತಂಡವನ್ನು ಇಂಗ್ಲೆಂಡ್ ಪ್ರಕಟಿಸಿದೆ. ಇದರಲ್ಲಿ ಇಂಗ್ಲೆಂಡ್ ರೆಡ್ ಬಾಲ್ ತಂಡದ ನಾಯಕ ಬೆನ್ ಸ್ಟೋಕ್ಸ್ ಏಕದಿನ ಸರಣಿಯಲ್ಲಿ ಆಡಿದರೆ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಬೆನ್ ಸ್ಟೋಕ್ಸ್ ಪ್ರಸ್ತುತ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಆಡುತ್ತಿದ್ದು ಮೊದಲ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಎರಡು ಪಂದ್ಯಗಳಲ್ಲಿ ಸ್ಟೋಕ್ಸ್ 21 ರನ್ ಮಾತ್ರವೇ ಗಳಿಸಿದ್ದು ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇನ್ನು ಬೌಲಿಂಗ್‌ನಲ್ಲಿ ಕೇವಲ ಒಂದು ಓವರ್ ಮಾತ್ರವೇ ಎಸೆದಿರುವ ಸ್ಟೋಕ್ಸ್ ಯಾವಿದೇ ವಿಕೆಟ್ ಪಡೆದುಕೊಂಡಿಲ್ಲ.

ದಿ ಹಂಡ್ರೆಡ್ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ ಸ್ಟೋಕ್ಸ್
ಬೆನ್ ಸ್ಟೋಕ್ಸ್ ಈ ವರ್ಷ ನಡೆಯಲಿರುವ ದಿ ಹಂಡ್ರೆಡ್ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಆಗಸ್ಟ್ 3 ಬುಧವಾರದಿಂದ ಈ ಟೂರ್ನಿ ಆರಂಭವಾಗಲಿದ್ದು ಫಿಟ್‌ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬೆನ್ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಭಾರತದ ವಿರುದ್ಧದ ನಡೆದ ಟೆಸ್ಟ್ ಸರಭಿಯ ಅಂತಿಮ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದರು. ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲುವ ಮೂಲಕ ಟೆಸ್ಟ್ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿತ್ತು.

ಏಕದಿನ ಸರಣಿಯಲ್ಲಿ ಆಡಲಿದ್ದಾರೆ ಸ್ಟೋಕ್ಸ್
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಆಡಲಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿ ಮೊದಲಿಗೆ ನಡೆದರೆ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಅದಾದ ಬಳಿಕ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಯೋಜನೆಯಾಗಲಿದೆ. ಸದ್ಯ ವೈಟ್‌ಬಾಲ್ ಸರಣಿಗೆ ಮಾತ್ರವೇ ಇಂಗ್ಲೆಂಡ್ ತಂಡವನ್ನು ಘೋಷಣೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಇಂಗ್ಲೆಂಡ್‌ ಏಕದಿನ ತಂಡ
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೊನಾಥನ್ ಬೈರ್‌ಸ್ಟೋವ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೊನಾಥನ್ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ

Story first published: Saturday, July 16, 2022, 10:41 [IST]
Other articles published on Jul 16, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+