ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಡುವ ಬಳಗ ಘೋಷಣೆ ಮಾಡಿದ ಇಂಗ್ಲೆಂಡ್

ಆಗಸ್ಟ್ 17ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಈ ಪಂದ್ಯದ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದ್ದು ಈ ಪಂದ್ಯದಲ್ಲಿ ಕಣಕ್ಕಿಳಿಯುವ 11 ಆಟಗಾರರ ಬಳಗವನ್ನು ಇಂಗ್ಲೆಂಡ್ ತಂಡ ಘೋಷಣೆ ಮಾಡಿದೆ. ಭಾರತದ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಬೆನ್ ಫೋಕ್ಸ್ ಈ ಪಂದ್ಯದ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದಾರೆ.
ಝಾಕ್ ಕ್ರಾಲಿ ಮತ್ತು ಅಲೆಕ್ಸ್ ಲೀಸ್ ಅವರು ಕ್ರಮಾಂಕದ ಅಗ್ರಸ್ಥಾನದಲ್ಲಿ ಸ್ಥಾನ ಉಳಿಸಿಕೊಂಡಿದ್ದು ಒಲ್ಲಿ ಪೋಪ್ ಅವರು ಆಡುವ ಬಳಗದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬೆನ್ ಸ್ಟೋಕ್ಸ್ ನೇತೃತ್ವದ ತಂಡದಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್ ಬಲ ನೀಡಲಿದ್ದಾರೆ. ಮತ್ತೊಂದು ಸ್ಮರಣೀಯ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಂಡ ಎದುರು ನೋಡುತ್ತಿದೆ.

ಅನುಭವಿ ಬೌಲಿಂಗ್ ವಿಭಾಗ
ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಿ ಕಾಣಿಸುತ್ತಿದ್ದು ಅನುಭವಿ ಆಟಗಾರರನ್ನು ಒಳಗೊಂಡಿದೆ. ಹಿರಿಯ ಆಟಗಾರ ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಈ ಪಂದ್ಯದಲ್ಲಿ ಬೌಲಿಂಗ್ ವಿಭಾಗದ ನೇತೃತ್ವ ವಹಿಸಲಿದ್ದಾರೆ. ಇವರಿಗೆ ಡರ್ಹಮ್ ವೇಗಿ ಮ್ಯಾಥ್ಯೂ ಪಾಟ್ಸ್ ಕಾಣಿಸಿಕೊಂಡಿದ್ದಾರೆ. ಇನ್ನು ಸ್ಪಿನ್ನರ್ ಆಗಿ ಜಾಕ್ ಲೀಚ್ ಕಣಕ್ಕಿಳಿಯಲಿದ್ದಾರೆ. ಇನ್ನು ಒಲ್ಲಿ ರಾಬಿನ್ಸ್ನ್ ಈ ತಮಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಮಿಂಚುತ್ತಿದೆ ಇಂಗ್ಲೆಂಡ್
ಇಂಗ್ಲೆಂಡ್ ತಂಡ ಇತ್ತೀಚಿನ ಸರಣಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುತ್ತಿದೆ. ಈ ಋತುವಿನಲ್ಲಿ ತವರಿನಲ್ಲಿ ನಡೆದ ನಾಲ್ಕು ಪಂದ್ಯಗಳಲ್ಲಿ ಕೂಡ ಇಂಗ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಭಾರತದ ವಿರುದ್ಧದ ಒಂದು ಟೆಸ್ಟ್ ಪಂದ್ಯ ಕೂಡ ಸೇರಿಕೊಂಡಿದೆ.

ಮೂರು ಪಂದ್ಯಗಳ ಟೆಸ್ಟ್ ಸರಣಿ
ದಕ್ಷಿಣ ಆಪ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದ್ದು ಮೊದಲ ಪಂದ್ಯ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಆಗಸ್ಟ್ 17ರಿಂದ ಈ ಪಂದ್ಯ ಆರಂಭವಾಗಲಿದೆ. ಎರಡನೇ ಹಾಗೂ ಮೂರನೇ ಪಂದ್ಯಗಳು ಕ್ರಮವಾಗಿ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫಾರ್ಡ್ ಕ್ರೀಡಾಂಗಣದಲ್ಲಿ ಹಾಗೂ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಇನ್ನು ಈ ಪ್ರವಾಸದಲ್ಲಿ ಮೊದಲಿಗೆ ಏಕದಿನ ಹಾಗೂ ಟಿ20 ಸರಣಿಯಲ್ಲಿ ಈ ಎರಡು ತಂಡಗಳು ಸೆಣೆಸಾಟ ನಡೆಸಿದ್ದವು. ಮೂರು ಪಂದ್ಯಗಳ ಏಕದಿನ ಸರಣಿ ಒಂದು ಪಂದ್ಯ ಮಳೆಯಿಂದ ರದ್ದಾದ ಕಾರಣ 1-1 ಅಂತರದಿಂದ ಸಮಬಲದೊಂದಿಗೆ ಅಂತ್ಯಕಂಡಿದ್ದರೆ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದ್ದರು.

ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ಮ್ಯಾಥ್ಯೂ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications