ENG vs SA: 3ನೇ ಏಕದಿನ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್; ಗೆದ್ದವರು ಸರಣಿ ವಿಜೇತರು

ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಸೋತು ತವರಿನಲ್ಲಿಯೇ ಮುಖಭಂಗ ಅನುಭವಿಸಿದ್ದ ಇಂಗ್ಲೆಂಡ್ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ತನ್ನದೇ ನೆಲದಲ್ಲಿ ಕಣಕ್ಕಿಳಿದಿದೆ.
ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಿದ್ದು, ಮೊದಲೆರಡು ಪಂದ್ಯಗಳು ಮುಕ್ತಾಯವಾದ ನಂತರ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ. ಚೆಸ್ಟರ್ ಲೇ ಸ್ಟ್ರೀಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪ್ರಥಮ ಏಕದಿನ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧ 62 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಹಾಗೂ ಮ್ಯಾಂಚೆಸ್ಟರ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಪುಟಿದೆದ್ದ ಇಂಗ್ಲೆಂಡ್ ದಕ್ಷಿಣ ಆಫ್ರಿಕಾ ವಿರುದ್ಧ 118 ರನ್‌ಗಳ ಬೃಹತ್ ಗೆಲುವು ಸಾಧಿಸಿತ್ತು.
ಹೀಗೆ ಮೊದಲೆರಡು ಪಂದ್ಯಗಳಲ್ಲಿ ಇತ್ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿರುವುದರಿಂದ, ಇದೀಗ ಮೂರನೇ ಏಕದಿನ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ವಿಜೇತ ತಂಡವಾಗಿ ಹೊರ ಹೊಮ್ಮಲಿದ್ದು ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ. ಲೀಡ್ಸ್ ನ ಹೆಡಿಂಗ್ಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಈ ಕೆಳಕಂಡಂತಿದೆ.

ಇಂಗ್ಲೆಂಡ್ ಆಡುವ ಬಳಗ
ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಫಿಲಿಪ್ ಸಾಲ್ಟ್, ಜೋ ರೂಟ್, ಜೋಸ್ ಬಟ್ಲರ್(ವಿಕೆಟ್ ಕೀಪರ್ / ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ರೀಸ್ ಟೋಪ್ಲಿ

ದಕ್ಷಿಣ ಆಫ್ರಿಕಾ ಆಡುವ ಬಳಗ
ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್(ನಾಯಕ), ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ

3 ಸರಣಿಗಳಲ್ಲಿ ಇತ್ತಂಡಗಳ ನಡುವೆ ಸೆಣಸಾಟ
ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ದಕ್ಷಿಣ ಆಫ್ರಿಕಾ ಆಂಗ್ಲರ ವಿರುದ್ಧ ಎಲ್ಲಾ ಮಾದರಿಯ ಕ್ರಿಕೆಟ್‍ನ ಸರಣಿಗಳಲ್ಲಿಯೂ ಸೆಣಸಾಟ ನಡೆಸಲಿದೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ನಂತರ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯಲಿದೆ ಹಾಗೂ ಅಂತಿಮವಾಗಿ 3 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications