ENG W vs SL W T20 World Cup: ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಇಂಗ್ಲೆಂಡ್, ಶುಭಾರಂಭ
ಇಂಗ್ಲೆಂಡ್‌ನಲ್ಲಿ ಮಹಿಳಾ ಟಿ20 ವಿಶ್ವಕಪ್ ಆರಂಭವಾಗಿದೆ. ಮೆಗಾ ಈವೆಂಟ್ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಆತಿಥೇಯ ಇಂಗ್ಲೆಂಡ್ ಇತಿಹಾಸ ನಿರ್ಮಿಸಿದೆ. ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಇಂಗ್ಲೆಂಡ್ 87 ರನ್‌ಗಳಿಂದ ಗೆದ್ದು, ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ, ಇಂಗ್ಲೆಂಡ್ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ.
ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆತಿಥೇಯ ಇಂಗ್ಲೆಂಡ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಆಮಿ ಜೋನ್ಸ್ ಹಾಗೂ ಡ್ಯಾನಿ ವ್ಯಾಟ್-ಹಾಡ್ಜ್ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕಲು ಶ್ರೀಲಂಕಾ ಬೌಲರ್‌ಗಳು ವಿಫಲರಾದರು. ಈ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್ ನಷ್ಟವಿಲ್ಲದೆ 51 ರನ್ ಸೇರಿಸಿತು.

ಪಂದ್ಯದ ಮೇಲೆ ಹಿಡಿತವನ್ನು ಸಾಧಿಸುತ್ತಾ ಸಾಗಿದ ಇಂಗ್ಲೆಂಡ್ ಆರಂಭಿಕ ಜೋಡಿ ಜೋನ್ಸ್ ಹಾಗೂ ಡ್ಯಾನಿ ವ್ಯಾಟ್ ಅಬ್ಬರಿಸಿತು. ಮೊದಲ ವಿಕೆಟ್‌ಗೆ ಈ ಜೋಡಿ 13.4 ಓವರ್‌ಗಳಲ್ಲಿ 135 ರನ್ ಸೇರಿಸಿತು. ಆರಂಭಿಕ ಆಟಗಾರ್ತಿ ಆಮಿ ಜೋನ್ಸ್ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 53 ರನ್ ಬಾರಿಸಿ ಔಟ್ ಆದರು.
35 ವರ್ಷದ ಅನುಭವಿ ಆಟಗಾರ್ತಿ ಡ್ಯಾನಿ ವ್ಯಾಟ್-ಹಾಡ್ಜ್ ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡಿದರು. ಇವರು 62 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 105 ರನ್ ಸಿಡಿಸಿದರು. ಇವರಿಗೆ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಉತ್ತಮ ಸಾಥ್ ನೀಡಿದರು. ಇವರು 22 ಎಸೆತಗಳಲ್ಲಿ ಅಜೇಯ 46 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 1 ವಿಕೆಟ್‌ಗೆ 219 ರನ್ ಸೇರಿಸಿತು.
ಇಂಗ್ಲೆಂಡ್ ಇತಿಹಾಸ
ಈ ಮೂಲಕ ಇಂಗ್ಲೆಂಡ್ ಇತಿಹಾಸ ನಿರ್ಮಿಸಿತು. ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ಮೊತ್ತ ಕಲೆ ಹಾಕಿದ ದಾಖಲೆ ಇಂಗ್ಲೆಂಡ್ ಪಾಲಾಯಿತು. ಇದಕ್ಕೂ ಮೊದಲು ಇಂಗ್ಲೆಂಡ್ 2023ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ 213 ರನ್ ಸಿಡಿಸಿದ್ದು ದಾಖಲೆಯಾಗಿತ್ತು. ಈಗ ಇಂಗ್ಲೆಂಡ್ ತನ್ನದೇ ದಾಖಲೆಯನ್ನು ಮತ್ತಷ್ಟು ಬಲಪಡಿಸಿಕೊಂಡಿತು.
2026 ರ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ತೀವ್ರ ಹೋರಾಟ ನಡೆಯಿತು, ಇದರಲ್ಲಿ ಎರಡೂ ತಂಡಗಳು ಒಟ್ಟಾಗಿ 351 ರನ್ ಗಳಿಸಿದವು. ಇದು ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಎರಡು ತಂಡಗಳು ಮಾಡಿದ ಎರಡನೇ ಅತ್ಯಧಿಕ ಮೊತ್ತವಾಗಿದೆ.
ಯುವ ಬೌಲರ್ ಅಬ್ಬರ
ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡದ ಪರ ನೀಲಕ್ಷಿಕಾ ಸಿಲ್ವ 39, ಹರ್ಷಿತಾ ಸಮರವಿಕ್ರಮ 29 ಬಾರಿಸಿದ್ದು, ಬಿಟ್ಟರೆ ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಲಂಕಾ 20 ಓವರ್‌ಗಳಲ್ಲಿ 132 ರನ್‌ಗೆ ಆಲೌಟ್ ಆಯಿತು. ಇಂಗ್ಲೆಂಡ್‌ನ ಯುವ ಬೌಲರ್ ಫ್ರೇಯಾ ಕೆಂಪ್ ತನ್ನ ಚೊಚ್ಚಲ ಟಿ20 ವಿಶ್ವಕಪ್ ಪಂದ್ಯದಲ್ಲಿ 4 ವಿಕೆಟ್‌ಗಳನ್ನು ಪಡೆದು ಅದ್ಭುತ ಪ್ರದರ್ಶನ ನೀಡಿದರು. ಅವರು ಟಿ20 ವಿಶ್ವಕಪ್‌ನ ಚೊಚ್ಚಲ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದ ವಿಶ್ವದ ಮೂರನೇ ಮಹಿಳಾ ಆಟಗಾರ್ತಿ ಆಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications