ಪಾಕಿಸ್ತಾನ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ

ಲಂಡನ್, ಆಗಸ್ಟ್ 12: ಪಾಕಿಸ್ತಾನ ವಿರುದ್ಧದ ದ್ವಿತೀಯ ಟೆಸ್ಟ್‌ಗಾಗಿ ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ 14 ಜನರ ತಂಡ ಪ್ರಕಟಿಸಿದೆ. ಮೊದಲ ಟೆಸ್ಟ್‌ನಲ್ಲಿ ಇದ್ದ ತಂಡದಲ್ಲಿ ಕೆಲವೇ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಮೊದಲ ಪಂದ್ಯದಲ್ಲಿ ಬೆಂಚ್‌ನಲ್ಲಿದ್ದ ಯುವ ಬೌಲರ್ ಸ್ಯಾಮ್ ಕರನ್ ಹೆಸರು ಈ ಬಾರಿಯೂ ಪಟ್ಟಿಯಲ್ಲಿದೆ.
ದ್ವಿತೀಯ ಟೆಸ್ಟ್‌ಗಾಗಿ ಪ್ರಕಟಿಸಲಾಗಿರುವ ತಂಡದಲ್ಲಿ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಹೆಸರಿಲ್ಲ. ವೈಯಕ್ತಿಕ ಕಾರಣದಿಂದ ಸ್ಟೊಕ್ಸ್ ಅವರು ಟೆಸ್ಟ್ ಸರಣಿಯಿಂದ ಹಿಂದೆ ಸರಿದಿರುವುದರಿಂದ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಇನ್ನು ವೇಗಿ ಜೇಮ್ಸ್ ಆ್ಯಂಡರ್ಸನ್‌ಗೆ ದ್ವಿತೀಯ ಟೆಸ್ಟ್‌ನಲ್ಲಿ ವಿಶ್ರಾಂತಿ ನೀಲಾಗುತ್ತದೆ ಎನ್ನಲಾಗಿತ್ತು. ಆದರೆ ಪ್ರಕಟಿತ 14 ಮಂದಿಯ ತಂಡದಲ್ಲಿ ಆ್ಯಂಡರ್ಸನ್ ಇದ್ದಾರೆ.
ಮೊದಲ ಪಂದ್ಯದಲ್ಲಿ ವೀರೋಚಿತ ಸೋಲು ಕಂಡಿರುವ ಪಾಕಿಸ್ತಾನಕ್ಕೆ ದ್ವಿತೀಯ ಪಂದ್ಯದ ಗೆಲುವು ಮುಖ್ಯವಾಗಿದೆ. ಎರಡನೇ ಟೆಸ್ಟ್ ಕೂಡ ಸೋತರೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಪಾಲಾಗಲಿದೆ. ದ್ವಿತೀಯ ಟೆಸ್ಟ್ ಆಗಸ್ಟ್ 13ರ ಗುರುವಾರ ಸೌತಾಂಪ್ಟನ್‌ನ ರೋಸ್‌ಬೌಲ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ 3.30 pmಗೆ ಆರಂಭವಾಗಲಿದೆ.
14 ಮಂದಿಯ ಇಂಗ್ಲೆಂಡ್ ತಂಡ: ಜೋ ರೂಟ್, ಜೇಮ್ಸ್ ಆ್ಯಂಡರ್ಸನ್, ಜೋಫ್ರಾ ಆರ್ಚರ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಜೋಸ್ ಬಟ್ಲರ್, ಝಾಕ್ ಕ್ರಾಲೆ, ಸ್ಯಾಮ್ ಕರನ್, ಆಲ್ಲಿ ಪೋಪ್, ಆಲ್ಲಿ ರಾಬಿನ್ಸನ್, ಡೊಮ್ ಸಿಬ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications