ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ಗೆ ಇಂಗ್ಲೆಂಡ್‌ನ ಮೊಯಿನ್ ಅಲಿ ವಿದಾಯ

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನವನ್ನು ನೀಡುತ್ತಿರುವ ಮೊಯಿನ್ ಅಲಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

34ರ ಹರೆಯದ ಮೊಯಿನ್ ಅಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಪ್ರತಿಭಾವಂತ ಆಲ್ ರೌಂಡರ್ ಆಟಗಾರನಾಗಿದ್ದು ಇದುವರೆಗೂ ಇಂಗ್ಲೆಂಡ್ ಪರ ಒಟ್ಟು 64 ಟೆಸ್ಟ್ ಪಂದ್ಯಗಳನ್ನಾಡಿದ್ದು 195 ವಿಕೆಟ್‍ಗಳನ್ನು ಪಡೆದಿದ್ದಾರೆ ಹಾಗೂ 2914 ಟೆಸ್ಟ್ ರನ್‌ಗಳನ್ನು ಕಲೆ ಹಾಕಿದ್ದಾರೆ. ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಒಟ್ಟು 14 ಅರ್ಧಶತಕ ಮತ್ತು 5 ಶತಕಗಳನ್ನು ಕೂಡ ಮೊಯಿನ್ ಅಲಿ ಬಾರಿಸಿದ್ದಾರೆ.

ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್</a><a class=" title="ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್" />ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್

ಹೀಗೆ ಇಂಗ್ಲೆಂಡ್ ತಂಡದ ಪ್ರತಿಭಾವಂತ ಆಲ್ ರೌಂಡರ್ ಆಟಗಾರನಾಗಿದ್ದ ಮೊಯಿನ್ ಅಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ದಿಢೀರ್ ನಿರ್ಧಾರವನ್ನು ಕೈಗೊಂಡಿದ್ದಾರೆ. ತಮ್ಮ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಜೋ ರೂಟ್ ಮತ್ತು ತಂಡದ ಪ್ರಮುಖ ತರಬೇತುದಾರರಾದ ಕ್ರಿಸ್ ಸಿಲ್ವರ್‌ವುಡ್ ಜೊತೆ ಕಳೆದ ಕೆಲ ದಿನಗಳ ಹಿಂದೆಯೇ ಈ ವಿಷಯವನ್ನು ಚರ್ಚಿಸಿ ತಮ್ಮ ನಿರ್ಧಾರವನ್ನು ತಿಳಿಸಿದ್ದ ಮೊಯಿನ್ ಅಲಿ ಇದೀಗ ಅಧಿಕೃತವಾಗಿ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಸೀಮಿತ ಓವರ್‌ಗಳ ಪಂದ್ಯಗಳ ಕಡೆ ಹೆಚ್ಚಿನ ಗಮನವನ್ನು ಹರಿಸುವ ಸಲುವಾಗಿ ಮೊಯಿನ್ ಅಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗುತ್ತಿದ್ದು ಏಕದಿನ, ಟಿ ಟ್ವೆಂಟಿ ಮತ್ತು ಕೌಂಟಿ ಕ್ರಿಕೆಟ್‍ನಲ್ಲಿ ಮೊಯಿನ್ ಅಲಿ ಮುಂದಿನ ದಿನಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲಿದ್ದಾರೆ.

ಐಪಿಎಲ್ 2021ರಲ್ಲಿ ಮೊಯಿನ್ ಅಲಿ ಪ್ರದರ್ಶನ

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನಾಗಿ ಆಡುತ್ತಿರುವ ಮೊಯಿನ್ ಅಲಿ ಟೂರ್ನಿಯಲ್ಲಿ ಇದುವರೆಗೂ ಒಟ್ಟು 9 ಪಂದ್ಯಗಳನ್ನಾಡಿದ್ದು 261 ರನ್‌ಗಳನ್ನು ಕಲೆ ಹಾಕಿದ್ದಾರೆ ಮತ್ತು ಇದರಲ್ಲಿ ಒಂದು ಅರ್ಧ ಶತಕವೂ ಕೂಡ ಸೇರಿದೆ. ಇನ್ನು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ 9 ಪಂದ್ಯಗಳನ್ನಾಡಿರುವ ಮೊಯಿನ್ ಅಲಿ 5 ವಿಕೆಟ್‍ಗಳನ್ನೂ ಪಡೆದಿದ್ದಾರೆ.

'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್

ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಾಗಾಲೋಟ

ಕಳೆದ ಬಾರಿ ಯುಎಇ ನೆಲದಲ್ಲಿ ನಡೆದಿದ್ದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡುವುದರ ಮೂಲಕ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸದ್ಯ ಅದೇ ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ. ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ 8 ಪಂದ್ಯಗಳಲ್ಲಿ ಜಯ ಗಳಿಸಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಸೋಲುಂಡಿದೆ. ಹೀಗೆ 16 ಅಂಕಗಳನ್ನು ಪಡೆದುಕೊಂಡು ಪ್ಲೇ ಆಫ್ ಸುತ್ತಿನ ಪ್ರವೇಶವನ್ನು ಖಚಿತಪಡಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಸದ್ಯ ಅಗ್ರ ಸ್ಥಾನವನ್ನು ಆಕ್ರಮಿಸಿಕೊಂಡಿದೆ.

ಇನ್ನು ಸೆಪ್ಟೆಂಬರ್ 26ರ ಭಾನುವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಅಂತಿಮ ಹಂತದಲ್ಲಿ 2 ವಿಕೆಟ್‍ಗಳ ರೋಚಕ ಗೆಲುವನ್ನು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ್ದ 172 ರನ್‌ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಅಂತಿಮ ಎಸೆತದಲ್ಲಿ ಗೆಲುವಿನ ಕೇಕೆ ಹಾಕಿತು.

ABD ಔಟ್ ಆದಾಗ ಅತ್ಯಂತ ನೊಂದ ಅಭಿಮಾನಿ ಇವನೇ | Oneindia Kannada

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನ ಮುಂದಿನ ಪಂದ್ಯದಲ್ಲಿ ಸೆಪ್ಟೆಂಬರ್ 30ರಂದು ಶಾರ್ಜಾ ಕ್ರೀಡಾಂಗಣದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Monday, September 27, 2021, 14:03 [IST]
Other articles published on Sep 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X