Ashes 2025: ಆಶಸ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ಹ್ಯಾರಿ ಬ್ರೂಕ್ ಉಪನಾಯಕ
ಮುಂಬರುವ ಬಹುನಿರೀಕ್ಷಿತ ಆಶಸ್ ಸರಣಿಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಇಂಗ್ಲೆಂಡ್ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಲಿದೆ. ಈ ವೇಳೆ ಉಭಯ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಈ ಬಾರಿಯೂ ತಂಡವನ್ನು ಇಂಗ್ಲೆಂಡ್ ತಂಡದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಈ ಸರಣಿಗೆ ಯುವ ಆಟಗಾರ ಹ್ಯಾರಿ ಬ್ರೂಕ್ ಅವರಿಗೆ ತಂಡ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅವರಲ್ಲಿನ ಕ್ಷಮತೆಯನ್ನು ಗುರುತಿಸಿರುವ ಆಯ್ಕೆ ಸಮಿತಿ ಇವರಿಗೆ ಉಪನಾಯಕನ ಪಟ್ಟವನ್ನು ನೀಡಿದೆ.
ಇಂಗ್ಲೆಂಡ್ ಹಾಗೂ ವೆಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಿಸಿರುವ 16 ಜನರ ತಂಡದಲ್ಲಿ ಮ್ಯಾಥ್ಯೂ ಪಾಟ್ಸ್ ಮತ್ತು ವಿಲ್ ಜಾಕ್ಸ್ ಸ್ಥಾನ ಪಡೆದಿದ್ದಾರೆ. ವಿಲ್ ಜಾಕ್ಸ್ ಬೆರಳಿನ ಗಾಯದಿಂದ ಈ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇವರು ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. ಇವರು ಕೊನೆಯದಾಗಿ ಇಂಗ್ಲೆಂಡ್ ತಂಡದ ಪರ 2022ರಲ್ಲಿ ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಕೊನೆಯ ಬಾರಿಗೆ ವೈಟ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು.

2024ರಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದ ಮ್ಯಾಥ್ಯೂ ಪಾಟ್ಸ್ ಅವರಿಗೆ ಮತ್ತೆ ಅವಕಾಶ ಲಭಿಸಿದೆ. ಇವರು ಕೌಂಟಿ ಕ್ರಿಕೆಟ್‌ನಲ್ಲಿ ಪ್ರಸಕ್ತ ಋತುವಿನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಪರಿಣಾಮ ಇವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಇವರು ಡರ್ಹ್ಯಾಮ್ ಪರ 10 ಕೌಂಟಿ ಚಾಂಪಿಯನ್‌ಶಿಪ್ ಪಂದ್ಯಗಳಲ್ಲಿ ಅವರು 28 ವಿಕೆಟ್‌ಗಳನ್ನು ಕಬಳಿಸಿದ್ದರು. ಭಾರತ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.
ಮಾರ್ಕ್ ವುಡ್‌ಗೆ ಅವಕಾಶ
ವೇಗದ ಬೌಲಿಂಗ್ ನೊಗವನ್ನು ಈ ಬಾರಿಯೂ ಮಾರ್ಕ್ ವುಡ್ ಹೊರಲಿದ್ದಾರೆ. ಇವರು ಮೊಣಕಾಲಿನ ಗಾಯದಿಂದ ಚೇತರಿಸಿಕೊಂಡಿದ್ದು, ತಂಡಕ್ಕೆ ಮರಳಿದ್ದಾರೆ. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದರು. ಸ್ಪಿನ್ ಬೌಲರ್ ಶೋಯೆಬ್ ಬಶೀರ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ. ಸ್ಟೋಕ್ಸ್ ಜೊತೆಗೆ, ತಂಡವು ಅನುಭವಿ ಆಟಗಾರರಾದ ಜೋ ರೂಟ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್ ಮತ್ತು ಓಲಿ ಪೋಪ್ ತಂಡದಲ್ಲಿ ಸ್ಥಾನ ಪಡೆದ ಅನುಭವಿಗಳು. ಈ ಬಾರಿ ಆಶಸ್ ಸರಣಿಯ ಮೊದಲ ಪಂದ್ಯ ನವೆಂಬರ್ 21 ರಂದು ಆರಂಭವಾಗಲಿದ್ದು, 2026ರ ಜನೆವರಿ 8ರ ವರೆಗೆ ನಡೆಯಲಿದೆ.

ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಜ್ಯಾಕ್ ಕ್ರಾಲೆ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications