IND vs ENG: ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ, ಕರನ್, ಬಟ್ಲರ್ ಔಟ್
ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ. ಜನವರಿ 25 ರಿಂದ ಆರಂಭವಾಗಲಿರುವ ಈ ಟೆಸ್ಟ್ ಸರಣಿಗೆ ಇಂಗ್ಲೆಂಡ್ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಬೆನ್ ಸ್ಟೋಕ್ಸ್ ಮುಂದಾಳತ್ವದಲ್ಲಿ ತಂಡ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಪ್ರವಾಸ ಬೆಳೆಸಲಿದೆ. ಈ ಸರಣಿಯ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಫೆಬ್ರವರಿ 2 ರಿಂದ ವೈಜಾಗ್‌ನಲ್ಲಿ, ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಮೂರನೇ ಟೆಸ್ಟ್, ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಾಲ್ಕನೇ ಟೆಸ್ಟ್ ಮತ್ತು ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಕೊನೆಯ ಟೆಸ್ಟ್ ನಡೆಯಲಿದೆ.

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಮೂವರು ಹೊಸ ಮುಖಗಳಿಗೆ ಮಣೆ ಹಾಕಿದೆ. ಇದರಲ್ಲಿ ಶೋಯೆಬ್ ಬಶೀರ್, ಟಾಮ್ ಹಾರ್ಟ್ಲಿ ಮತ್ತು ಗಸ್ ಅಟ್ಕಿನ್ಸನ್ ಸೇರಿದ್ದಾರೆ. ಆಲಿ ಪೋಪ್ ಈ ತಂಡದ ಉಪನಾಯಕರಾಗಿದ್ದಾರೆ. ಇಂಗ್ಲೆಂಡ್ ತನ್ನ ತಂಡದಲ್ಲಿ ಟಾಮ್ ಹಾರ್ಟ್ಲಿ, ಜಾಕ್ ಲೀಚ್ ಮತ್ತು ರೆಹಾನ್ ಅಹ್ಮದ್ ರೂಪದಲ್ಲಿ ಮೂವರು ಸ್ಪಿನ್ನರ್‌ಗಳನ್ನು ಕಾಣಿಸಿಕೊಂಡಿದ್ದಾರೆ.

ಯುವ ಆಟಗಾರರಿಗೆ ಆದ್ಯತೆ
ಭಾರತದಲ್ಲಿ ಸ್ಪಿನ್ ಸ್ನೇಹಿ ಪಿಚ್‌ಗಳಿದ್ದು ಇದರ ಲಾಭ ಪಡೆಯಲು ಇಂಗ್ಲೆಂಡ್ ಪ್ಲ್ಯಾನ್ ಮಾಡಿಕೊಂಡಿದೆ. ಅದರಂತೆ ತಂಡದಲ್ಲಿ ಸ್ಪಿನ್ ಬೌಲರ್‌ಗಳಿಗೆ ಆದ್ಯತೆ ನೀಡಲಾಗಿದೆ. ಶೋಯೆಬ್ ಬಶೀರ್ ಮತ್ತು ಟಾಮ್ ಹಾರ್ಟ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೌಂಟಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಗಸ್ ಅಟ್ಕಿನ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, 18 ವರ್ಷದ ರೆಹಾನ್ ಅಹ್ಮದ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೂವರು ಸ್ಪೆಷಲಿಸ್ಟ್ ಸ್ಪಿನ್ನರ್‌ಗಳೊಂದಿಗೆ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ.
ಭಾರತದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಂಡವು ಜೋ ರೂಟ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಜಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಸ್ಟೋಕ್ಸ್, ಶೋಯೆಬ್ ಬಶೀರ್, ಬೆನ್ ಫಾಕ್ಸ್ ಮತ್ತು ಆಲಿ ಪೋಪ್ ರೂಪದಲ್ಲಿ ಒಂಬತ್ತು ಬ್ಯಾಟ್ಸ್‌ಮನ್‌ಗಳನ್ನು ಹೊಂದಿದೆ. ವೇಗದ ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಆಂಡರ್ಸನ್, ಗಸ್ ಅಟ್ಕಿನ್ಸನ್, ಆಲಿ ರಾಬಿನ್ಸನ್ ಮತ್ತು ಮಾರ್ಕ್ ವುಡ್ ಇದ್ದಾರೆ.ಸ್ಯಾಮ್ ಕರನ್, ಬಟ್ಲರ್ ಔಟ್
ಬೆನ್ ಸ್ಟೋಕ್ಸ್ ಮುಂದಾಳತ್ವದಲ್ಲಿ ತಂಡ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಪ್ರವಾಸ ಬೆಳೆಸಲಿದೆ. ಈ ಸರಣಿಯ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಫೆಬ್ರವರಿ 2 ರಿಂದ ವೈಜಾಗ್‌ನಲ್ಲಿ, ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಮೂರನೇ ಟೆಸ್ಟ್, ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಾಲ್ಕನೇ ಟೆಸ್ಟ್ ಮತ್ತು ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಕೊನೆಯ ಟೆಸ್ಟ್ ನಡೆಯಲಿದೆ.

ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್, ಗುಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫಾಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲ್ಲಿ ರಾಬಿನ್ಸನ್, ಜೋ ರೂಟ್ ಮತ್ತು ಮಾರ್ಕ್ ವುಡ್.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಸಂಪೂರ್ಣ ವೇಳಾಪಟ್ಟಿ
1 ನೇ ಟೆಸ್ಟ್: ಜನವರಿ 25-29ರ ವರೆಗೆ, ಹೈದರಾಬಾದ್
2 ನೇ ಟೆಸ್ಟ್: ಫೆಬ್ರವರಿ 2-6ರ ವರೆಗೆ, ವೈಜಾಗ್
3ನೇ ಟೆಸ್ಟ್: ಫೆಬ್ರವರಿ 15-19ರ ವರೆಗೆ, ರಾಜ್ಕೋಟ್
4ನೇ ಟೆಸ್ಟ್: ಫೆಬ್ರವರಿ 23-27ರ ವರೆಗೆ, ರಾಂಚಿ
5 ನೇ ಟೆಸ್ಟ್: ಮಾರ್ಚ್ 7-11ರ ವರೆಗೆ, ಧರ್ಮಶಾಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+

Click it and Unblock the Notifications