ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯಕ್ಕೆ ತಂಡ ಘೋಷಿಸಿದ ಇಂಗ್ಲೆಂಡ್, ಮೂವರು ಪದಾರ್ಪಣೆ
ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 11 ರಂದು ನಡೆಯಲಿದೆ. ಈಗಾಗಲೇ ಇಂಗ್ಲೆಂಡ್ ತಂಡ ಟಿ20 ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಇಂಗ್ಲೆಂಡ್ ತಂಡದ ನಿಯಮಿತ ನಾಯಕ ಜೋಸ್ ಬಟ್ಲರ್ ಈ ಸರಣಿಗೆ ಅಲಭ್ಯರಾಗಿದ್ದಾರೆ.
ಜೋಸ್ ಬಟ್ಲರ್ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡವನ್ನು ಫಿಲ್ ಸಾಲ್ಟ್ ನಿಭಾಯಿಸಲಿದ್ದಾರೆ. ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮೂವರು ಆಟಗಾರರಿಗೆ ಪದಾರ್ಪಣೆಯ ಅವಕಾಶ ನೀಡಿದೆ. ಇಂಗ್ಲೆಂಡ್ ಪರ ಜಾಕೋಬ್ ಬೆತೆಲ್, ಜೇಮೀ ಓವರ್ಟನ್ ಮತ್ತು ಜೋರ್ಡಾನ್ ಕಾಕ್ಸ್ ತಂಡದ ಪರ ಕಣಕ್ಕೆ ಇಳಿಯಲಿದ್ದಾರೆ.

ಹೇಗಿದೆ ಸಾಧನೆ?
ಜೋರ್ಡಾನ್ ಕಾಕ್ಸ್ ಈಗಾಗಲೇ ದೇಶೀಯ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು 2500ಕ್ಕೂ ಹೆಚ್ಚು ರನ್ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಇಲ್ಲಿಯವರೆಗೆ ಅವರು 138.85 ಸ್ಟ್ರೈಕ್ ರೇಟ್‌ನಲ್ಲಿ ಕಲೆ ಹಾಕಿದ್ದಾರೆ. ಜೇಮಿ ಓವರ್ಟನ್ ಈಗಾಗಲೇ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇನ್ನು ಇನ್ನೋರ್ವ ಯುವ ಆಟಗಾರ ಜಾಕೋಬ್ ಬೆಥೆಲ್ 137.57 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿ ಭರವಸೆ ಮೂಡಿಸಿದ್ದಾರೆ.
ಏನು ಹೇಳುತ್ತದೆ ಅಂಕಿ ಅಂಶ?
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ ತಂಡಗಳು. ಈ ತಂಡಗಳು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 24 ಬಾರಿ ಮುಖಾಮುಖಿ ಆಗಿವೆ. ಇನ್ನು ಉಭಯ ತಂಡಗಳು ತಲಾ 11 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಬುಧವಾರ ನಡೆಯಲಿರುವ ಟಿ20 ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಮೊದಲ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್ (ನಾಯಕ), ವಿಲ್ ಜಾಕ್ಸ್, ಜೋರ್ಡಾನ್ ಕಾಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಸ್ಯಾಮ್ ಕರ್ರಾನ್, ಜೇಮಿ ಓವರ್‌ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ರೀಸ್ ಟೋಪ್ಲಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications