Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡ ಪ್ರಕಟ: ಇಬ್ಬರು RCB ಆಟಗಾರರಿಗೆ ಸ್ಥಾನ
ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿವೆ. ಈಗ ಒಂದೊಂದೆ ತಂಡಗಳು ಈ ಟೂರ್ನಿಗೆ ತಮ್ಮ ತಂಡವನ್ನು ಪ್ರಕಟಿಸುತ್ತಿವೆ. ಈ ಸಾಲಿನಲ್ಲಿ ಇಂಗ್ಲೆಂಡ್ ಸೇರಿಸಿಕೊಂಡಿದೆ. ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಜೋಸ್ ಬಟ್ಲರ್‌ಗೆ ಪಟ್ಟ ಕಟ್ಟಲಾಗಿದೆ. ಇಂಗ್ಲೆಂಡ್ ತಂಡವನ್ನು ಟೆಸ್ಟ್ ಸರಣಿಗಳಲ್ಲಿ ಮುನ್ನಡೆಸುವ ಬೆನ್ ಸ್ಟೋಕ್ಸ್‌ಗೆ ಈ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಜೋ ರೂಟ್ ಸುಮಾರು ಒಂದು ವರ್ಷದ ಬಳಿಕ ಏಕದಿನ ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡಿದ್ದಾರೆ. ನ್ಯೂಜಿಲೆಂಡ್ ಟೆಸ್ಟ್ ಸರಣಿಯ ವೇಳೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಬೆನ್ ಸ್ಟೋಕ್ಸ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇದೇ ಕಾರಣಕ್ಕೆ ಇವರು ಭಾರತ ವಿರುದ್ಧ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿಲ್ಲ. ಮಾರ್ಕ್ ವುಡ್ ಮತ್ತೆ ತಂಡಕ್ಕೆ ಪುನರಾಗಮನ ಮಾಡಿದ್ದಾರೆ.

ನಾಯಕತ್ವ ಉಳಿಸಿಕೊಳ್ಳಲು ಯಶಸ್ವಿ
ಇಂಗ್ಲೆಂಡ್ ತಂಡವನ್ನು 2023 ಏಕದಿನ ವಿಶ್ವಕಪ್‌ನಲ್ಲಿ ಮುನ್ನಡೆಸಿದ್ದ ಜೋಸ್ ಬಟ್ಲರ್ ಅವರಿಗೆ ಮತ್ತೆ ಪಟ್ಟ ಕಟ್ಟಲಾಗಿದೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಇವರ ಮುಂದಾಳತ್ವದಲ್ಲಿ ತಂಡ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಇನ್ನು ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಜೋಸ್ ಬಟ್ಲರ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಈ ಬಾರಿಯ ತಂಡದಲ್ಲಿ ಫಿಲ್ ಸಾಲ್ಟ್‌ಗೂ ಸ್ಥಾನ ನೀಡಲಾಗಿದೆ. ಇನ್ನು ತಂಡದಲ್ಲಿ ಜೇಮಿ ಸ್ಮಿತ್ ಇನ್ನೋಬ್ಬ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಆರ್‌ಸಿಬಿ ತಂಡದ ಇಬ್ಬರಿಗೆ ಸ್ಥಾನ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದಲ್ಲಿ ಸ್ಥಾನ ಪಡೆದಿರುವ ಸ್ಫೋಟಕ ಆಟಗಾರ ಫಿಲ್ ಸಾಲ್ಟ್ ಹಾಗೂ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರಿಗೆ ಇಂಗ್ಲೆಂಡ್ ತಂಡದಲ್ಲಿ ಸ್ಥಾನ. ಈ ಇಬ್ಬರು ಸ್ಟಾರ್ ಆಟಗಾರರನ್ನು ಆರ್‌ಸಿಬಿ ಸೌದಿಯಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಭಾರೀ ಮೊತ್ತವನ್ನು ನೀಡಿ ಹರಾಜಿನಲ್ಲಿ ಖರೀದಿ ಮಾಡಿತ್ತು.

ಚಾಂಪಿಯನ್ಸ್ ಟ್ರೋಫಿಗಾಗಿ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋ ರೂಟ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬ್ಯಾಚ್ಲರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಫಿಲ್ ಸಲ್ಯೂದ್, ಫಿಲ್ ಸಲ್ಯೂದ್ ಮತ್ತು ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications