ದಕ್ಷಿಣ ಆಫ್ರಿಕಾ ವಿರುದ್ಧದ ODI, T20 ಸರಣಿಗೆ ತಂಡವನ್ನ ಘೋಷಿಸಿದ ಇಂಗ್ಲೆಂಡ್: ಆದಿಲ್ ರಶೀದ್ ಕಂಬ್ಯಾಕ್

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಘೋಷಣೆಯಾಗಿದೆ. ತವರಿನಲ್ಲೇ ನಡೆಯಲಿರುವ ಆರು ಪಂದ್ಯಗಳ ವೈಟ್ ಬಾಲ್ ಸರಣಿಯು ಟೀಂ ಇಂಡಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ಬಳಿಕ ನಡೆಯಲಿದೆ.
ಹಜ್ ಯಾತ್ರೆಯ ಪರಿಣಾಮ ಭಾರತ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಮಿಸ್ ಆಗಿದ್ದ ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್ ಹರಿಣಗಳ ವಿರುದ್ಧದ ಸರಣಿಗೆ ಕಂಬ್ಯಾಕ್ ಮಾಡಿದ್ದಾರೆ. ಇವರ ಜೊತೆಗೆ ಟಿ20 ಸರಣಿಯಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈಸ್ಟ್ರೋವ್ ಕೂಡ ಇಂಗ್ಲೆಂಡ್ ತಂಡ ಸೇರಿದ್ದಾರೆ. ಇದರ ಜೊತೆಗೆ ಭಾರತ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಮಿಂಚಿದ ಪೇಸರ್ ಮ್ಯಾಥ್ಯೂ ಪಾಟ್ಸ್ ಏಕದಿನ ಸ್ಕ್ವಾಡ್‌ಗೆ ಸೇರಿಸಿಕೊಳ್ಳಲಾಗಿದೆ.

ಟಿ20 ಸರಣಿಯಿಂದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಔಟ್
ಇಂಗ್ಲೆಂಡ್ ತಂಡದಲ್ಲಿ ಆಶ್ಚರ್ಯಕರ ವಿಚಾರ ಅಂದ್ರೆ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸ್ಥಾನ ಪಡೆದಿಲ್ಲ. ಭಾರತ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದ ಸ್ಟೋಕ್ಸ್, ಏಕದಿನ ಸರಣಿಯಲ್ಲಿ ಮಿಂಚುವಲ್ಲಿ ವಿಫಲರಾದ ಬಳಿಕ ವಿಶ್ರಾಂತಿ ನೀಡಲಾಗಿದೆ. ಆಟಗಾರರ ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಸ್ಟಾರ್ ಆಲ್‌ರೌಂಡರ್‌ಗೆ ವಿಶ್ರಾಂತಿ ನೀಡಿದೆ.
361 ರನ್ ಟಾರ್ಗೆಟ್: ನ್ಯೂಜಿಲೆಂಡ್ ವಿರುದ್ಧ ಐರ್ಲೆಂಡ್‌ಗೆ 1ರನ್‌ಗಳ ವೀರೋಚಿತ ಸೋಲು

ಚುಟುಕು ಸರಣಿಯಿಂದ ಹೊರಗುಳಿದ ಜೋ ರೂಟ್
ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಕೂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ತಂಡದ ಮ್ಯಾನೇಜ್‌ಮೆಂಟ್ ರನ್‌ಗಳಿಸಲು ಪರದಾಡುತ್ತಿರುವ ಜೇಸನ್ ರಾಯ್ ಮೇಲೆ ನಂಬಿಕೆಯಿಟ್ಟು ಮತ್ತೊಂದು ಅವಕಾಶ ನೀಡಿದ್ದು, ಎರಡು ಸ್ಕ್ವಾಡ್‌ನಲ್ಲೂ ಅವಕಾಶ ಪಡೆದಿದ್ದಾರೆ.
ಭಾರತದ ವಿರುದ್ಧ ಟಿ20 ಸರಣಿಯಲ್ಲಿ ಕೇವಲ 31ರನ್ ಕಲೆಹಾಕಿದ್ದ ಜೇಸನ್ ರಾಯ್, ಮೊದಲೆರಡು ಏಕದಿನ ಪಂದ್ಯಗಳಲ್ಲಿ 23 ರನ್ ಕಲೆಹಾಕಿ ನಿರಾಸೆ ಮೂಡಿಸಿದ್ದಾರೆ.
ನಮಗಂತೂ ವಿಶ್ರಾಂತಿ ಬೇಕೆ ಎಂದು ಯಾರು ಕೇಳಲಿಲ್ಲ: ಕೊಹ್ಲಿಗೆ ವಿಶ್ರಾಂತಿ ನೀಡಿದ್ದರ ಕುರಿತು R.P ಸಿಂಗ್ ಪ್ರಶ್ನೆ

ಭಾರತ ವಿರುದ್ಧ ಬಲಿಷ್ಠ ಪ್ಲೇಯಿಂಗ್ 11 ಇಳಿಸಲು ಇಂಗ್ಲೆಂಡ್ ಯೋಜನೆ
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಸಮಬಲ ಸಾಧಿಸಿರುವ ಇಂಗ್ಲೆಂಡ್ ತಂಡವು ಜುಲೈ 17ರಂದು ಅಂತಿಮ ಏಕದಿನ ಪಂದ್ಯದಲ್ಲಿ ಭಾರತವನ್ನ ಎದುರಿಸಲಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಬೆಸ್ಟ್ ಪ್ಲೇಯಿಂಗ್ 11 ಕಣಕ್ಕಿಳಿಸಲು ಎದುರು ನೋಡುತ್ತಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಜುಲೈ 19ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಅದಕ್ಕೂ ಮೊದಲು ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಅಂತಿಮ ಪಂದ್ಯ ಗೆದ್ದು ಸರಣಿಯನ್ನ ತನ್ನದಾಗಿಸಿಕೊಳ್ಳುವ ಹಂಬಲ ಇಂಗ್ಲೆಂಡ್‌ಗಿದೆ.
ಇಂಗ್ಲೆಂಡ್ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಜೊತೆಗೆ ಆಗಸ್ಟ್ 17ರಿಂದ ಲಾರ್ಡ್ಸ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಿಗೂ ಆತಿಥ್ಯ ವಹಿಸಲಿದೆ.

ಇಂಗ್ಲೆಂಡ್ ಒಡಿಐ ಸ್ಕ್ವಾಡ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್ ಸ್ಕ್ವಾಡ್ ಈ ಕೆಳಗಿದೆ.
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ.

ಇಂಗ್ಲೆಂಡ್ ಟಿ20 ಸ್ಕ್ವಾಡ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಇಂಗ್ಲೆಂಡ್ ಸ್ಕ್ವಾಡ್ ಈ ಕೆಳಗಿದೆ.
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications