IND vs ENG T20: ಮೂರನೇ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ: ಆರ್‌ಸಿಬಿ ಪ್ಲೇಯರ್‌ಗೆ ಇಲ್ಲ ಅವಕಾಶ
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೂರನೇ ಪಂದ್ಯ ನಡೆಯಲಿದೆ. ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. ಎರಡು ಪಂದ್ಯಗಳನ್ನು ಸುಲಭವಾಗಿ ಗೆದ್ದು ಕೊಂಡಿರುವ ಭಾರತ, ಮತ್ತೊಂದು ಗೆಲುವಿನ ಕನಸಿನಲ್ಲಿದೆ. ಇಂಗ್ಲೆಂಡ್ ಪಂದ್ಯ ಆರಂಭಕ್ಕೂ ಇನ್ನು ಒಂದು ದಿನ ಬಾಕಿ ಇರುವಂತೆ ಪ್ರವಾಸಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ.
ಇಂಗ್ಲೆಂಡ್ ಮಂಗಳವಾ ನಡೆಯುವ ಪಂದ್ಯಕ್ಕೆ ತನ್ನ ಪ್ಲೇಯಿಂಗ್ ಇಲೆವೆನ್ ಘೋಷಣೆ ಮಾಡಿದೆ. ಈ ಬಾರಿಯ ತಂಡದಲ್ಲಿ ಆರ್‌ಸಿಬಿ ತಂಡದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಪಂದ್ಯವನ್ನು ಗೆಲ್ಲಲೇ ಬೇಕು ಎಂಬ ಮಹದಾಸೆಯಲ್ಲಿರುವ ಇಂಗ್ಲೆಂಡ್, ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ. ಮೊದಲ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಯುವ ಆಟಗಾರ ಜಾಕಬ್ ಬೇತೆಲ್, ಎರಡನೇ ಟಿ20 ಪಂದ್ಯ ಮಿಸ್ ಮಾಡಿಕೊಂಡಿದ್ದರು. ಇವರು ಮೂರನೇ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುವುದಿಲ್ಲ. ಈ ಮೂಲಕ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ ಆಗಿದೆ.

ಮಹತ್ವದ ಪಂದ್ಯಕ್ಕೆ ತಂಡ ಘೋಷಣೆ
ಆರ್‌ಸಿಬಿ ತಂಡ ಬಿಡ್‌ನಲ್ಲಿ ಖರೀದಿ ಮಾಡಿದ್ದ ಯುವ ಆಟಗಾರನ ಆಟವನ್ನು ಕಣ್ಣು ತುಂಬಿಕೊಳ್ಳುವ ಅವಕಾಶ ಭಾರತೀಯ ಆಟಗಾರರಿಗೆ ಇಲ್ಲದಂತಾಗಿದೆ. ಇನ್ನು ಭಾರತದಲ್ಲಿ ಇನ್ನು 2 ಟಿ20 ಪಂದ್ಯಗಳು ಉಳಿದಿದ್ದು, ಈ ಪಂದ್ಯಗಳಲ್ಲಾದ್ರೂ ಅವಕಾಶ ಸಿಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ. ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಜಿದ್ದಾಜಿದ್ದಿನ ಪ್ರದರ್ಶನ ನೀಡಿತ್ತು. ಹೀಗಾಗಿ ಅದೇ ತಂಡವನ್ನು ಮುಂದುವರೆಸುವ ಪ್ಲ್ಯಾನ್ ಇಂಗ್ಲೆಂಡ್ ತಂಡದ್ದಾಗಿದೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟರ್‌ಗಳು ಕೊಂಚ ಎಡವಿದ್ದರು. ಉಳಿದಂತೆ ಬೌಲರ್‌ಗಳು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಹೀಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಬದಲಿಗೆ ನಾಯಕ ಜೋಸ್ ಬಟ್ಲರ್ ಚೆನ್ನೈನಲ್ಲಿ ಇಳಿಸಿದ ತಂಡವನ್ನೇ ಉಳಿಸಿಕೊಂಡಿದ್ದಾರೆ. ಈ ಪಂದ್ಯ ಇಂಗ್ಲೆಂಡ್ ಪಾಲಿಗೆ ಮಹತ್ವದಾಗಿದೆ. ಈ ಪಂದ್ಯ ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಬಯಕೆ ಪ್ರವಾಸಿ ತಂಡದ್ದಾಗಿದೆ.

ಗೆಲುವಿನ ಒತ್ತಡದಲ್ಲಿ ಇಂಗ್ಲೆಂಡ್
ಇದುವರೆಗೆ ಭಾರತದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪ್ರಾಭಲ್ಯ ಸಾಧಿಸಿದೆ. ಎರಡೂ ವೇಳೆಯೂ ಟೀಮ್ ಇಂಡಿಯಾ ಚೇಸ್ ಮಾಡಿ ಗೆದ್ದು ಬೀಗಿದೆ. ಮೊದಲ ಎರಡು ಪಂದ್ಯಗಳು ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಆಡಲ್ಪಟ್ಟವು, ಆದರೆ ಈಗ ಬೌನ್ಸಿ ಪಿಚ್ ಲಭ್ಯವಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡವು ಕಠಿಣ ಮತ್ತು ದೊಡ್ಡ ಪರೀಕ್ಷೆಯನ್ನು ಎದುರಿಸುವ ನಿರೀಕ್ಷೆಯಿದೆ.
ಮೂರನೇ ಟಿ20 ಪಂದ್ಯಕ್ಕೆ ಇಂಗ್ಲೆಂಡ್‌ನ ತಂಡ: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications