Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಡಿದ ಮೊದಲ ಟೆಸ್ಟ್‌ನಲ್ಲೇ 7 ವಿಕೆಟ್ ಪಡೆದು ದಿಢೀರ್ ಅಮಾನತಾದ ಕ್ರಿಕೆಟಿಗ!

England bowler Ollie Robinson suspended for historical tweets
ಮೊನ್ನೆ ಮೊನ್ನೆ ನ್ಯೂಜಿಲೆಂಡ್ ವಿರುದ್ಧ ಮಿಂಚಿದ ರಾಬಿನ್ಸನ್ ಕ್ರಿಕೆಟ್ ಭವಿಷ್ಯ ಅಂತ್ಯ | oneindia kannada

ಲಂಡನ್: ಇಂಗ್ಲೆಂಡ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡುತ್ತಿದ್ದು ಮೊದಲನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಇಂಗ್ಲೆಂಡ್ ತಂಡದ ಆಟಗಾರ ಆಲಿ ರಾಬಿನ್ಸನ್ ಪದಾರ್ಪಣೆ ಮಾಡಿದ್ದಾರೆ.

ಹೀಗೆ ಪದಾರ್ಪಣೆ ಮಾಡಿದ ಮೊದಲನೇ ಪಂದ್ಯದಲ್ಲಿಯೇ ರಾಬಿನ್ಸನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದು ರಾಬಿನ್ಸನ್ ಉತ್ತಮ ಆರಂಭವನ್ನು ಪಡೆದುಕೊಂಡಿದ್ದರು. ಆದರೆ ಈ ಪಂದ್ಯ ಮುಗಿಯುವುದರೊಳಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಲಿ ರಾಬಿನ್ಸನ್‌ಗೆ ಬೇಸರದ ಸುದ್ದಿಯೊಂದನ್ನು ನೀಡಿದೆ.

ಹೌದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಲಿ ರಾಬಿನ್ಸನ್‌ನ್ನು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಅಮಾನತು ಮಾಡಿರುವುದಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆದೇಶ ಹೊರಡಿಸಿದೆ. 8 ವರ್ಷಗಳ ಹಿಂದೆ ಇದೇ ರಾಬಿನ್ಸನ್ ಜನಾಂಗೀಯ ನಿಂದನೆ ಹಾಗೂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು.

ಅಂದು ರಾಬಿನ್ಸನ್ ಮಾಡಿದ್ದ ಟ್ವೀಟ್ ಈಗ ವೈರಲ್ ಆಗಿದ್ದು ಆತನ ಕ್ರಿಕೆಟ್ ಜೀವನಕ್ಕೆ ಕುತ್ತಾಗಿ ಪರಿಣಮಿಸಿದೆ. ಜನಾಂಗೀಯ ನಿಂದನೆಯ ಟ್ವೀಟ್ ಮಾಡಿದ್ದ ಕಾರಣ ಇದೀಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆತನನ್ನು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಅಮಾನತುಗೊಳಿಸಿರುವುದಾಗಿ ಟ್ವೀಟ್ ಮೂಲಕ ತಿಳಿಸಿದೆ.

Story first published: Monday, June 7, 2021, 13:49 [IST]
Other articles published on Jun 7, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+