ಐಪಿಎಲ್‌ನಲ್ಲಿ ಇಂಗ್ಲೆಂಡ್ ಆಟಗಾರರ ಪಾಲ್ಗೊಳ್ಳುವಿಕೆ ಬಗ್ಗೆ ಇಯಾನ್ ಮಾರ್ಗನ್ ಮಹತ್ವದ ಹೇಳಿಕೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಬಿಸಿಸಿಐ ನೇತೃತ್ವದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇಂಗ್ಲೆಂಡ್ ಆಟಗಾರರು ಐಪಿಎಲ್ ಟೂರ್ನಿಯಲ್ಲಿ ಆಡುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದೆ. ಕೆಲ ಮಾಜಿ ಕ್ರಿಕೆಟಿಗರು ಇಂಗ್ಲೆಂಡ್‌ನ ಆಟಗಾರರು ಐಪಿಎಲ್‌ನ ಕಡೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದಾರೆ ಎಂಬಂತಾ ಮಾತುಗಳನ್ನು ಆಡಿದ್ದಾರೆ. ಈ ವಿಚಾರವಾಗಿ ಇಯಾನ್ ಮಾರ್ಗನ್ ಹೇಳಿಕೆ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ಐಪಿಎಲ್‌ನಿಂದ ಸಾಕಷ್ಟು ಲಾಭ ಪಡೆದಿದ್ದೇವೆ
"ನಾವು ಐಪಿಎಲ್‌ನಿಂದ ಬಹಳ ದೊಡ್ಡ ಮಟ್ಟದಲ್ಲಿ ಲಾಭವನ್ನು ಪಡೆದುಕೊಂಡಿದ್ದೇವೆ. ಆದ ಕಾರಣ ನಾವು ಆ ಟೂರ್ನಿಗೆ ಕೃತಜ್ಞರಾಗಿರಬೇಕು. ನಮ್ಮ ಬೆಳವಣಿಗೆಯಲ್ಲಿ ಐಪಿಎಲ್‌ನ ದೊಡ್ಡ ಪಾತ್ರವಿದೆ. ವಿಶೇಷವಾಗಿ 2019ರ 50 ಓವರ್‌ಗಳ ವಿಶ್ವಕಪ್ ಹಾಗೂ ಮುಂಬರುವ ಎರಡು ಟಿ20 ವಿಶ್ವಕಪ್ ವಿಚಾರವಾಗಿ" ಎಂದು ಇಯಾನ್ ಮಾರ್ಗನ್ ಹೇಳಿಕೆ ನೀಡಿದ್ದಾರೆ.

ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಐಪಿಎಲ್
"ಮುಂಬರುವ ಐಪಿಎಲ್ ಟೂರ್ನಿಗಳಲ್ಲಿ ನಾವು ಪಾಳ್ಗೊಳ್ಳಲು ಆಶಾದಾಯಕವಾಗಿದ್ದೇವೆ. ಇದು ಜಗತ್ತಿನ ಅತ್ಯಂತ ದೊಡ್ಡ ಟಿ20 ಟೂರ್ನಿಯಾಗಿದೆ. ಅದರ ಕಾರಣದಿಂದಾಗಿ ನಾವು ಅನುಭವವನ್ನು ಪಡೆದುಕೊಂಡಿದ್ದೇವೆ ಹಾಗೂ ಸಾಕಷ್ಟು ಆತ್ಮವಿಶ್ವಾಸವನ್ನು ಗಳಿಸಿಕೊಂಡಿದ್ದೇವೆ" ಎಂದು ಇಯಾನ್ ಮಾರ್ಗನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಇಂಡೋ-ಇಂಗ್ಲೆಂಡ್ ಚುಟುಕು ಕದನ
ಶುಕ್ರವಾರದಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಆರಂಭವಾಗಲಿದೆ. ಇಂಗ್ಲೆಂಡ್ ತಂಡ ಟಿ20 ಮಾದರಿಯಲ್ಲಿ ನಂಬರ್ 1 ತಂಡವಾಗಿದ್ದು ಸಾಕಷ್ಟು ಅತ್ಯುತ್ತಮ ಆಟಗಾರರನ್ನು ಹೊಂದಿದೆ. ಭಾರತವೂ ಯುವ ಆಟಗಾರರೊಂದಿಗೆ ಅನುಭವಿಗಳು ಕೂಡ ಸಾಥ್ ನೀಡುತ್ತಿದ್ದು ಜಿದ್ದಾಜಿದ್ದಿನ ಕದನವನ್ನು ನಿರೀಕ್ಷಿಸಲಾಗುತ್ತಿದೆ.

ಟೀಮ್ ಇಂಡಿಯಾ ಸಂಪೂರ್ಣ ತಂಡ
ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ವರುಣ್ ಚಕ್ರವರ್ತಿ, , ವಾಷಿಂಗ್ಟನ್ ಸುಂದರ್, ರಾಹುಲ್ ತಿವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ, ಶಾರ್ದುಲ್ ಠಾಕೂರ್.

ಇಂಗ್ಲೆಂಡ್ ಸಂಪೂರ್ಣ ತಂಡ
ಇಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರ್ರನ್, ಟಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲೆ, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications