Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND VS ENG 1ST T20: ಇಂಗ್ಲೆಂಡ್ ಪ್ಲೇಯಿಂಗ್-11 ಪ್ರಕಟ; ಆರ್‌ಸಿಬಿಯ 3 ಆಟಗಾರರಿಗೆ ಅವಕಾಶ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬುಧವಾರ ಭಾರತ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲು ಇಂಗ್ಲೆಂಡ್ ತಂಡವು ಮೈದಾನಕ್ಕಿಳಿಯಲಿದೆ. 5 ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ನಡೆಯಲಿದೆ. ಆದರೆ, ಇದಕ್ಕೂ ಒಂದು ದಿನ ಮುಂಚಿತವಾಗಿ ಪ್ರವಾಸಿ ಇಂಗ್ಲೆಂಡ್ ತಂಡ ತನ್ನ ಪ್ಲೇಯಿಂಗ್-11 ಅನ್ನು ಘೋಷಿಸಿದೆ. ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ವಿಕೆಟ್ ಕೀಪಿಂಗ್ ನಿಂದ ಹಿಂದೆ ಸರಿದಿದ್ದಾರೆ.

ಇಂಗ್ಲೆಂಡ್ ತಂಡದ ಉಪನಾಯಕರನ್ನಾಗಿ ಹ್ಯಾರಿ ಬ್ರೂಕ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಇಂಗ್ಲೆಂಡ್ ತಂಡವು ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆಯನ್ನು ಹೊಂದಿದೆ. ಜೋಸ್ ಬಟ್ಲರ್ ಬದಲಿಗೆ ಫಿಲ್ ಸಾಲ್ಟ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ. ಜೊತೆಗೆ ಅವರು ಬೆನ್ ಡಕೆಟ್ ಅವರೊಂದಿಗೆ ಇಂಗ್ಲೆಂಡ್ ಇನ್ನಿಂಗ್ಸ್ ತೆರೆಯಲಿದ್ದಾರೆ. ನಾಯಕ ಬಟ್ಲರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಲಿದ್ದಾರೆ.

England cricket team announce playing-11 for first T20I against India

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬಿಡ್ ಮಾಡಿರುವ ಯುವ ಬ್ಯಾಟರ್ ಜಾಕೋಬ್ ಬೆಥೆಲ್ ಕೂಡ ಇಂಗ್ಲೆಂಡ್ ಆಡುವ ಹನ್ನೊಂದರ ಭಾಗವಾಗಿದ್ದಾರೆ. ಜಾಕೋಬ್ ಬೆಥೆಲ್ ಅವರ ಬ್ಯಾಟಿಂಗ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇತ್ತೀಚೆಗೆ ಬಿಗ್ ಬ್ಯಾಶ್ ಲೀಗ್‌ನಲ್ಲಿ ಜಾಕೋಬ್ ಬೆಥೆಲ್ ಅಬ್ಬರಿಸಿದ್ದಾರೆ. ಜಾಕೋಬ್ ಬೆಥೆಲ್ ಹೊರತುಪಡಿಸಿ ಆರ್‌ಸಿಬಿಯ ಫಿಲ್ ಸಾಲ್ಟ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅವರಿಗೂ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಲಭಿಸಿದೆ.

ಇಂಗ್ಲೆಂಡ್‌ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಹ್ಯಾರಿ ಬ್ರೂಕ್ ಮತ್ತು ಬೆನ್ ಡಕೆಟ್ ಅವರಂತಹ ಪವರ್ ಹಿಟರ್‌ಗಳಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿದೆ. ವೇಗದ ಬೌಲರ್ ಜೋಫ್ರಾ ಆರ್ಚರ್ ಪ್ಲೇಯಿಂಗ್ ಹನ್ನೊಂದಕ್ಕೆ ಮರಳಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಸ್ಟಾರ್ ಸ್ಪಿನ್ನರ್ ಆದಿಲ್ ರಶೀದ್ ಕೂಡ ಮಿಂಚಲು ಸಜ್ಜಾಗಿದ್ದಾರೆ.

ಭಾರತ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಜೇಮಿ ಸ್ಮಿತ್, ಬ್ರೇಡನ್ ಕಾರ್ಸೆ, ಸಾಕಿಬ್ ಮಹಮೂದ್ ಮತ್ತು ರೆಹಾನ್ ಅಹ್ಮದ್ ಸ್ಥಾನ ಪಡೆದಿಲ್ಲ. ಆದರೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಎಲ್ಲಾ ಆಟಗಾರರು ಒಂದು ಹಂತದಲ್ಲಿ ಆಡುವ ಅವಕಾಶವನ್ನು ಪಡೆಯುತ್ತಾರೆ ಎಂದು ಇಂಗ್ಲೆಂಡ್ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಹೇಳಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್-11

ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಶ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಗ್ಯಾಶ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಮಾರ್ಕ್ ವುಡ್.

Story first published: Tuesday, January 21, 2025, 17:00 [IST]
Other articles published on Jan 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+