Manchester Test: ಇಂಗ್ಲೆಂಡ್ ಭರ್ಜರಿ ಆರಂಭ: ಭಾರತಕ್ಕೆ 133 ರನ್ ಇನಿಂಗ್ಸ್ ಮುನ್ನಡೆ
ಭರವಸೆಯ ಆಟಗಾರರಾದ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಅವರ ಭರ್ಜರಿ ಅರ್ಧಶತಕದ ಬಲದಿಂದ ಇಂಗ್ಲೆಂಡ್ ನಾಲ್ಕನೇ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಸೊಗಸಾದ ಆರಂಭವನ್ನು ಪಡೆದಿದೆ. ಶುಕ್ರವಾರಕ್ಕೆ ಒಲಿ ಪೋಪ್ ಹಾಗೂ ಜೋ ರೂಟ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಭಾರತ ಗುರುವಾರ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗೆ 264 ರನ್ ಗಳಿಂದ ಆಟ ಮುಂದುವರೆಸಿತು. ಆಲ್‌ರೌಂಡರ್ ರವೀಂದ್ರ ಜಡೇಜಾ (20) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಆರನೇ ವಿಕೆಟ್‌ಗೆ ಶಾರ್ದೂಲ್ ಠಾಕೂರ್ ಹಾಗೂ ವಾಷಿಂಗ್ಟನ್ ಸುಂದರ್ ಜೋಡಿ ತಂಡ ತಮ್ಮ ಮೇಲೆ ಇಟ್ಟ ಭರವಸೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಈ ಜೋಡಿ 101 ಎಸೆತಗಳಲ್ಲಿ 48 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಶರ್ದೂಲ್ ಠಾಕೂರ್ 88 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 41 ರನ್ ಬಾರಿಸಿ ಔಟ್ ಆದರು.

ಠಾಕೂರ್ ಔಟ್ ಆಗುತ್ತಿದ್ದಂತೆ ರಿಷಭ್ ಪಂತ್ ಮೈದಾನಕ್ಕೆ ಇಳಿದರು. ಗಾಯದಿಂದ ಬಳಲುತ್ತಿದ್ದರು ರಿಷಭ್ ಪಂತ್ ಕ್ರೀಡಾ ಸ್ಪೂರ್ತಿ ಮೆರೆದರು. ಇವರು 37 ರನ್ ಬಾರಿಸಿದ್ದಾಗ ಗಾಯಕ್ಕೆ ತುತ್ತಾಗಿದ್ದರು. ಗುರುವಾರ ಮೈದಾನಕ್ಕೆ ಇಳಿದು ಇವರು ತಮ್ಮ ನೈಜ್ಯ ಆಟವನ್ನು ಆಡಿದರು. ರಿಷಭ್ 75 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸೇರಿದಂತೆ 54 ರನ್ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು. ವಾಷಿಂಗ್ಟನ್ ಸುಂದರ್ (27) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕಲು ಪರದಾಟ ನಡೆಸಿದರು.
ಇಂಗ್ಲೆಂಡ್ ಪರ ನಾಯಕ ಬೆನ್ ಸ್ಟೋಕ್ಸ್ 72 ರನ್ ನೀಡಿ 5 ವಿಕೆಟ್ ಕಬಳಿಸಿದರು. ವೇಗದ ಬೌಲರ್ ಜೋಫ್ರಾ ಆರ್ಚರ್ 3 ವಿಕೆಟ್ ಪಡೆದರು.
ಉತ್ತಮ ಆರಂಭ
ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಜೋಡಿ ಚಹಾ ವಿರಾಮದ ವೇಳೆ ಆತಿಥೇಯ ತಂಡ ವಿಕೆಟ್ ನಷ್ಟವಿಲ್ಲದೆ 77 ರನ್‌ಗಳನ್ನು ಕಲೆ ಹಾಕಿತು. ಈ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿ ಅಬ್ಬರಿಸಿತು. ಜಾಕ್ ಕ್ರಾಲಿ 113 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್ ಸಹಾಯದಿಂದ 84 ರನ್ ಬಾರಿಸಿ ಮುನ್ನುಗುತ್ತಿದಾಗ ಜಡೇಜಾ ತೋಡಿದ ಖೆಡ್ಡಾಗೆ ಬಲಿಯಾದರು. 32ನೇ ಓವರ್‌ನಲ್ಲಿ ಜಡ್ಡು ಅವರ ಕೊನೆಯ ಎಸೆತದಲ್ಲಿ ಕ್ರಾಲಿ ರಾಹುಲ್‌ಗೆ ಕ್ಯಾಚ್ ನೀಡಿದರು.

ಇನ್ನೋಬ್ಬ ಆರಂಭಿಕ ಆಟಗಾರ ಬೆನ್ ಡಕೆಟ್ ಸೊಗಸಾದ ಬ್ಯಾಟಿಂಗ್ ನಡೆಸಿದರು. ಇವರು 100 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ 94 ರನ್ ಬಾರಿಸಿದ್ದಾಗ ಪದಾರ್ಪಣೆ ಮಾಡಿದ ಅನ್ಶುಲ್ ಕಾಂಬೋಜ್ ಅವರಿಗೆ ವಿಕೆಟ್ ಒಪ್ಪಿಸಿದರು. ಇಂಗ್ಲೆಂಡ್ ದಿನದಾಟದ ಮುಕ್ತಾಯಕ್ಕೆ 2 ವಿಕೆಟ್ ನಷ್ಟಕ್ಕೆ 225 ರನ್ ಸೇರಿಸಿದೆ. ಇನಿಂಗ್ಸ್ ಮುನ್ನಡೆ ಸಾಧಿಸಲು ಆತಿಥೇಯರಿಗೆ ಇನ್ನು 133 ರನ್ ಅವಶ್ಯಕತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications