ಆಸ್ಟ್ರೇಲಿಯಾ ವಿರುದ್ಧದ ಟಿ20ಐ, ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಮತ್ತು ಏಕದಿನ ಸರಣಿಗಾಗಿ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ಅವರನ್ನು ಟಿ20ಐ ತಂಡದಿಂದ ಕೈ ಬಿಡಲಾಗಿದೆ ಆದರೆ ಮೂರು ಪಂದ್ಯಗಳ ಏಕದಿನ ಸರಣಿಗೆ ರೂಟ್ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ಸೋಮವಾರ (ಆಗಸ್ಟ್ 31) ತಿಳಿಸಿದೆ.
ತಂದೆಗೆ ಆರೋಗ್ಯ ಸರಿಯಿಲ್ಲದ ಕಾರಣ ಪಾಕ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗಿದ್ದ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಮತ್ತು ಏಕದಿನ ಎರಡೂ ಸರಣಿಗಳಲ್ಲಿ ಆಡುತ್ತಿಲ್ಲ. ಇನ್ನು ಗಾಯದ ಕಾರಣ ಪಾಕ್ ಟಿ20 ಸರಣಿ ಮಿಸ್ ಮಾಡಿಕೊಂಡಿದ್ದ ಜೇಸನ್ ರಾಯ್ ಕೂಡ ಆಸೀಸ್ ಟಿ20 ಸರಣಿಯಲ್ಲಿ ಆಡುತ್ತಿಲ್ಲ.
3 ಪಂದ್ಯಗಳ ಟಿ20ಐಗೆ ಇಂಗ್ಲೆಂಡ್ ತಂಡ
ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಜೋ ಡೆನ್ಲಿ, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಆದಿಲ್ ರಶೀದ್, ಮಾರ್ಕ್ ವುಡ್.
ಮೀಸಲು: ಲಿಯಾಮ್ ಲಿವಿಂಗ್ಸ್ಟೋನ್, ಸಾಕಿಬ್ ಮಹಮೂದ್.
3 ಪಂದ್ಯಗಳ ಏಕದಿನಕ್ಕೆ ಏಕದಿನ ತಂಡ
ಇಯೊನ್ ಮೋರ್ಗಾನ್ (ಸಿ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ಜೋ ರೂಟ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ಮೀಸಲು: ಜೋ ಡೆನ್ಲಿ, ಸಾಕಿಬ್ ಮಹಮೂದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications