2016: ಇಂಗ್ಲೆಂಡ್ ನಲ್ಲಿ ಭಾರತ -ಪಾಕ್ ಕ್ರಿಕೆಟ್ ಸಮರ
ಕರಾಚಿ, ನ.26: ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಇಂಗ್ಲೆಂಡ್ ಪಿಚ್ ರೆಡಿ ಮಾಡಿಕೊಳ್ಳಬೇಕಾಗುತ್ತದೆ. ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಸರಣಿಯನ್ನು ಇಂಗ್ಲೆಂಡಿನಲ್ಲಿ ನಡೆಸಲು ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ(ಪಿಸಿಬಿ) ಒಪ್ಪಿಗೆ ಸೂಚಿಸಿದೆ. ಆದರೆ, ಬಿಸಿಸಿಐ ಮಾತ್ರ ಕೇಂದ್ರ ಸರ್ಕಾರವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದೆ.
ಶ್ರೀಲಂಕಾದಲ್ಲಿ ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಸರಣಿ ಹಾಗೂ ಹಾಗೂ ಇಂಗ್ಲೆಂಡಿನಲ್ಲಿ ಟೆಸ್ಟ್ ಸರಣಿ ನಡೆಸಲು ಪಿಸಿಬಿ ಹಾಗೂ ಬಿಸಿಸಿಐ ಚರ್ಚೆ ನಡೆಸಿವೆ.

ದುಬೈನಲ್ಲಿ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಹಾಗೂ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಈ ಕುರಿತು ಬಹುತೇಕ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದರೆ, ಉಭಯ ದೇಶಗಳ ಸರ್ಕಾರ ಬಯಸಿದರೆ ಮಾತ್ರ ಟೂರ್ನಿ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.
ಪಾಕ್ ಪ್ರಧಾನ ಮಂತ್ರಿ ನವಾಝ್ ಶರೀಫ್ ಹಾಗೂ ವಿದೇಶಾಂಗ ಸಚಿವಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ. ಶ್ರೀಲಂಕಾದಲ್ಲಿ ಡಿಸೆಂಬರ್ ನಲ್ಲಿ ಏಕದಿನ ಸರಣಿ ಆಡಲು ಪಿಸಿಬಿ ಸಿದ್ಧವಾಗಿದೆ ಎಂದು ಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಹೇಳಿದ್ದಾರೆ.
ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಗಿಲೆಸ್ ಕ್ಲಾರ್ಕ್ ಅವರ ಮಧ್ಯಸ್ಥಿಕೆಯಲ್ಲಿ ಭಾರತ-ಪಾಕ್ ಟೆಸ್ಟ್ ಸಮರಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗುತ್ತಿದೆ.ಕೇಂದ್ರ ಸರಕಾರಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಿದೆ ಎಂದು ಮಂಡಳಿಯ ಕಾರ್ಯದರ್ಶಿ ಅನುರಾಗ್ ಠಾಕೂರ್ ದೃಢಪಡಿಸಿದ್ದಾರೆ. (ಪಿಟಿಐ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications