For Quick Alerts
ALLOW NOTIFICATIONS  
For Daily Alerts
 

ಕ್ರಿಕೆಟ್ ಪುನಾರಂಭದ ನಂತರದ ಮೊದಲ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

England Name 14-man Squad For Ireland Odis

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಅಂತ್ಯವಾಗುತ್ತಿದ್ದು ಮತ್ತೊಂದು ಸರಣಿಗೆ ಇಂಗ್ಲೆಂಡ್ ಸಜ್ಜಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಸರಣಿಯನ್ನಾಡಲು ಇಂಗ್ಲೆಂಡ್‌ನಲ್ಲಿ ತಯಾರಿ ನಡೆಸುತ್ತಿದೆ. ಇದರ ಮಧ್ಯೆ ಐರ್ಲೆಂಡ್ ವಿರುದ್ಧ ಏಕದಿನ ಸರಣಿಯೊಂದರಲ್ಲಿ ಇಂಗ್ಲೆಂಡ್ ಪಾಲ್ಗೊಳ್ಳಲಿದೆ. ಈ ಸರಣಿಗಾಗಿ ಇಂದು ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ.

ಐರ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್‌ 14 ಸದಸ್ಯರ ತಂಡವನ್ನು ಇಂದು ಹೆಸರಿಸಲಾಗಿದೆ. ಈ ತಂಡದಲ್ಲಿ ಜೋನ್ ಡೆನ್ಲಿ ಸ್ಥಾನವನ್ನು ಪಡೆದು ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಡೆನ್ಲಿ ಮೊದಲ ಪಂದ್ಯದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಹೊರಬಿದ್ದರು. ಮೂರನೇ ಪಂದ್ಯದಲ್ಲೂ ಆಡುವ ಬಳಗದಲ್ಲಿ ಅವಕಾಶವನ್ನು ಪಡೆಯಲು ಡೆನ್ಲಿ ವಿಫಲರಾಗಿದ್ದರು.

ಐರ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಪ್ರಮುಖ ಮೂವರು ಆಟಗಾರರಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ವಿಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಅಬ್ಬರಿಸಿದ ಆಲ್‌ರೌಮಡರ್ ಬೆನ್ ಸ್ಟೋಕ್ಸ್, ಜೋ ರೂಟ್ ಹಾಗೂ ಜೋಸ್ ಬಟ್ಲರ್ ಐರ್ಲೆಂಡ್ ವಿರುದ್ಧ ಕಣಕ್ಕೆ ಇಳಿಯುತ್ತಿಲ್ಲ.

ವಿಶ್ವಕಪ್ ವಿಜೇತ ತಂಡದ ನಾಯಕ ಇಯಾನ್ ಮಾರ್ಗನ್ ಈ ಸರಣಿಗೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಲ್‌ರೌಂಡರ್ ಮೊಯೀನ್ ಅಲಿ ತಂಡಕ್ಕೆ ಮರಳಿದ್ದು ಉಪನಾಯಕನ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದಾರೆ. ಸೌಥಾಂಪ್ಟನ್‌ನ ಏಜಸ್ ಬೌಲ್ ಕ್ರಿಡಾಂಗಣದಲ್ಲಿ ಜೈವಿಕ ಸುರಕ್ಷತಾ ವಲಯದಲ್ಲಿ ಈ ಸರಣಿ ನಡೆಯಲಿದೆ.

2019ರ ವಿಶ್ವಕಪ್‌ನಲ್ಲಿ ಭಾರತದ ಸೋಲಿಗೆ ಸ್ವಾರಸ್ಯಕರ ಕಾರಣ ಹೇಳಿದ ಚೋಪ್ರಾ
ತಂಡ ಹೀಗಿದೆ:
ಇಯಾನ್ ಮೋರ್ಗನ್ (ನಾಯಕ), ಮೊಯೀನ್ ಅಲಿ, ಜಾನಿ ಬೈರ್‌ಸ್ಟೋವ್, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಟಾಮ್ ಕುರ್ರನ್, ಲಿಯಾಮ್ ಡಾಸನ್, ಜೋ ಡೆನ್ಲಿ, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೇಸನ್ ರಾಯ್, ರೀಸ್ ಟಾಪ್ಲೆ, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲಿ.

Story first published: Tuesday, July 28, 2020, 9:59 [IST]
Other articles published on Jul 28, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+