ಪಾಕಿಸ್ತಾನದ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿರುವ ಇಂಗ್ಲೆಂಡ್ ಪಾಕಿಸ್ತಾನದ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂದು ತಂಡವನ್ನು ಪ್ರಕಟಿಸಿದೆ. ಆದರೆ ಇಂಗ್ಲೆಮಡ್ ವಿರುದ್ಧದ ತಂಡವನ್ನೆ ಉಳಿಸಿಕೊಂಡಿದ್ದು ತಂಡದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ.
ಆಗಸ್ಟ್ 5 ರಿಂದ ಪಾಕಿಸ್ತಾನದ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳು ಪಾಕಿಸ್ತಾನ ಕ್ರಿಕೆಟ್ ತಂಡ ಒಂದು ತಿಂಗಳ ಹಿಂದೆಯೇ ಇಂಗ್ಲೆಂಡ್‌ಗೆ ಬಂದಿಲಿತು ಅಭ್ಯಾಸವನ್ನು ಆರಂಭಿಸಿತ್ತು. ಕೊರೊನಾ ವೈರಸ್ ಪಾಕಿಸ್ತಾನದಲ್ಲಿ ಹೆಚ್ಚಾಗಿರುವ ಕಾರಣ ಇಂಗ್ಲೆಂಡ್‌ನಲ್ಲೇ ಸಂಪೂರ್ಣ ಅಭ್ಯಾಸವನ್ನು ನಡೆಸುವ ತೀರ್ಮಾನವನ್ನು ಮಂಡಳಿ ಕೈಗೊಂಡಿತ್ತು.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಮೊದಲ ಪಂದ್ಯವನ್ನು ಹೊರತು ಪಡಿಸಿ ಸರ್ವಾಂಗೀಣ ಪ್ರದರ್ಶನವನ್ನು ನೀಡಿತು. ಸೌಥಾಂಪ್ಟನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಸೋಲುಕಂಡಿತ್ತು. ಆದರೆ ಮುಂದಿನ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಆಲ್‌ರೌಂಡರ್ ಪ್ರದರ್ಶನದಿಂದ ಇಂಗ್ಲೆಂಡ್ ಗೆಲುವು ಸಾಧಿಸಿದರೆ ಮೂರನೇ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಮಿಂಚಿ ಪಂದ್ಯವನ್ನು ಇಂಗ್ಲೆಂಡ್ ಪರವಾಗುವಂತೆ ಮಾಡಿದರು.
ಇಂಗ್ಲೆಮಡ್ ಕ್ರಿಕೆಟ್‌ನ ಆಯ್ಕೆಗಾರ ಎಡ್ ಸ್ಮಿತ್ ಪಾಕಿಸ್ತಾನದ ವಿರುದ್ಧದ ಟೆಸ್ಟ್ ಸರಣಿಗೆ ಯಾವುದೇ ಬದಲಾವಣೆಯನ್ನು ಮಾಡದೆ ಹಿಂದಿನ ತಂಡವನ್ನೇ ಉಳಿಸಿಕೊಳ್ಳಲಾಗಿದೆ ಎಂದು ಹೇಳಿದರು. ಜೊತೆಗೆ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ಶನಿವಾರದಿಂದ ಆರಂಭವಾಗಲಿದೆ. ಹೀಗಾಗಿ ಟೆಸ್ಟ್ ಪಂದ್ಯದ ಜೈವಿಕ ಸುರಕ್ಷತಾ ವಲಯದಲ್ಲಿ ಸಾಕಷ್ಟು ಮೀಸಲು ಹೊಂದಲು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ರೋರಿ ಬರ್ನ್ಸ್, ಜೋಸ್ ಬಟ್ಲರ್, ಜಾಕ್ ಕ್ರಾಲೆ, ಆಲ್ಲಿ ಪೋಪ್, ಡೊಮ್ ಸಿಬ್ಲಿ, ಜೇಮ್ಸ್ ಆಂಡರ್ಸನ್, ಜೋಫ್ರಾ ಆರ್ಚರ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್, ಸ್ಯಾಮ್ ಕುರ್ರನ್, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications