ಪಾಕ್ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ: ತಂಡಕ್ಕೆ ಮರಳಿದ ಇಯಾನ್ ಮಾರ್ಗನ್

ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಏಕದಿನ ಸರಣಿಯ ನಂತರ ಈಗ ಟಿ20 ಸರಣಿಗೆ ಎರಡೂ ತಂಡಗಳು ಸಜ್ಜಾಗಿದೆ. ಈ ಚುಟುಕು ಕ್ರಿಕೆಟ್ ಸರಣಿಗೆ ಇಂಗ್ಲೆಂಡ್‌ನ 16 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಲಾಗಿದೆ. ಇಂಗ್ಲೆಂಡ್ ಸೀಮಿತ ಓವರ್‌ಗಳ ನಾಯಕ ಇಯಾನ್ ಮಾರ್ಗನ್ ಕೂಡ ಈ ತಂಡಕ್ಕೆ ಮರಳಿದ್ದಾರೆ.
ಏಕದಿನ ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಕೊರೊನಾವೈರಸ್ ಸ್ಪೋಟಗೊಂಡಿತ್ತು. ಹೀಗಾಗಿ ಬೆನ್ ಸ್ಟೋಕ್ಸ್ ನೇತೃತ್ವದ ಬೇರೆಯದೇ ತಂಡ ಪಾಕಿಸ್ತಾನದ ವಿರುದ್ಧ ಏಕದಿನ ಸರಣಿಯನ್ನು ಆಡಿತ್ತು. ಈ ಸರಣಿಯನ್ನು ಇಂಗ್ಲೆಂಡ್ 3-0 ಅಂತರದಿಂದ ಗೆದ್ದು ಬೀಗಿದೆ. ಆದರೆ ಟಿ20 ಸರಣಿಯಲ್ಲಿ ಬೆನ್ ಸ್ಟೋಕ್ಸ್‌ಗೆ ವಿಶ್ರಾಂತಿಯನ್ನು ನೀಡಲಾಗಿದೆ.

ತಂಡಕ್ಕೆ ಮರಳಿದ ಸ್ಟಾರ್‌ಗಳು
ಇಂಗ್ಲೆಂಡ್ ಕ್ರಿಕೆಟ್ ತಂಡದ ಸೀಮಿತ ಓವರ್‌ಗಳ ಸ್ಟಾರ್‌ಗಳಾದ ಜಾನಿ ಬೈರ್‌ಸ್ಟೋವ್, ಜೋಸ್ ಬಟ್ಲರ್, ಜೇಸನ್ ರಾಯ್, ಮೊಯೀನ್ ಅಲಿ ಹಾಗೂ ಆದಿಲ್ ರಶೀದ್ ಕ್ವಾರಂಟೈನ್ ಕಾರಣದಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಪಾಕಿಸ್ತಾನ ವಿರುದ್ಧದ ಟಿ20 ಸರಣಿಗೆ ಈ ಎಲ್ಲಾ ಆಟಗಾರರು ತಂಡಕ್ಕೆ ಮರಳಿದ್ದಾರೆ.

ಏಕದಿನದಲ್ಲಿ ಮಿಂಚಿದ ಆಟಗಾರರಿಗೂ ಅವಕಾಶ
ಇನ್ನು ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ ಸಾಕಿಬ್ ಮಹಮೂದ್ ಹಾಗೂ ಲೆಗ್ ಸ್ಪಿನ್ನರ್ ಮ್ಯಾಥ್ಯೂ ಪಾರ್ಕಿನ್ಸನ್ ಟಿ20 ಸರಣಿಗೂ ಆಯ್ಕೆಯಾಗಿದ್ದಾರೆ. ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಲೂಯೀಸ್ ಗ್ರೇಗರಿ ಕೂಡ ಚುಟುಕು ಕ್ರಿಕೆಟ್ ಸರಣಿಗೆ ಆಯ್ಕೆಯಾಗಿದ್ದು ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲು ಲಿಯಾಮ್ ಲಿವಿಂಗ್ಸ್ಟನ್ ಹಾಗೂ ಮೊಯೀನ್ ಅಲಿ ಜೊತೆಗೆ ಪೈಪೋಟಿ ನಡೆಸಲಿದ್ದಾರೆ. ಪಾಕಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಜುಲೈ 16ರಂದು ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯಲಿದೆ.

ಇಂಗ್ಲೆಂಡ್ ಸಂಪೂರ್ಣ ತಂಡ
ಇಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜಾನಿ ಬೈರ್‌ಸ್ಟೋವ್, ಜೇಕ್ ಬಾಲ್, ಟಾಮ್ ಬ್ಯಾಂಟನ್, ಜೋಸ್ ಬಟ್ಲರ್, ಟಾಮ್ ಕರ್ರನ್, ಲೆವಿಸ್ ಗ್ರೆಗೊರಿ, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡೇವಿಡ್ ಮಲನ್, ಮ್ಯಾಟ್ ಪಾರ್ಕಿನ್ಸನ್, ಆದಿಲ್ ರಶೀದ್, ಜೇಸನ್ ರಾಯ್, ಡೇವಿಡ್ ವಿಲ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications