ದ. ಆಫ್ರಿಕಾ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: 20 ತಿಂಗಳ ಬಳಿಕ ಸ್ಟಾರ್ ಆಟಗಾರನ ಕಮ್‌ಬ್ಯಾಕ್

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು ಸುದೀರ್ಘ ಕಾಲದ ಬಳಿಕ ವೇಗಿ ಜೋಫ್ರ ಆರ್ಚರ್ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 14 ಆಟಗಾರರ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಗುರುವಾರ ಪ್ರಕಟಿಸಲಾಗಿದೆ.
ಜೋಫ್ರ ಆರ್ಚರ್ 2019ರಲ್ಲಿ ಇಂಗ್ಲೆಂಡ್ ತಂಡ ಏಕದಿನ ವಿಶ್ವಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದರು. ಆದರೆ ಅದಾದ ಬಳಿಕ ಗಾಯದ ಸಮಸ್ಯೆಗಳು ಈ ವೇಗಿಗೆ ಬಹಳ ಕಾಡಲು ಆರಂಭಿಸಿತ್ತು. ಮೊಣಕೈ ಹಾಗೂ ಬೆನ್ನು ನೋವಿಗೆ ಪದೇ ಪದೇ ತುತ್ತಾಗಿದ್ದರು. 2021ರ ಮಾರ್ಚ್‌ನಲ್ಲಿ ಭಾರತ ಪ್ರವಾಸ ಕೈಗೊಂಡಿದ್ದಾಗ ಟಿ20 ಸರಣಿಯ ಬಳಿಕ ಗಾಯಗೊಂಡು ಇಂಗ್ಲೆಂಡ್ ತಂಡದಿಂದ ಹೊರಬಿದ್ದರು. ಇನ್ನು ಏಕದಿನ ಂಆದರಿಯಲ್ಲಿ ಆಡದೆ ಬಹುತೇಕ ಎರಡು ವರ್ಷಗಳೇ ಕಳೆದಿದೆ.
2022ರ ಸಂಪೂರ್ಣ ಆವೃತ್ತಿಯನ್ನು ಜೋಫ್ರ ಆರ್ಚರ್ ಗಾಯದಿಂದಾಗಿ ವಿಶ್ರಾಂತಿಯಲ್ಲಿಯೇ ಕಳೆದಿದ್ದಾರೆ. ಆದರೆ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಅಬುದಾಬಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಿದ್ದ ಜೋಫ್ರ ಆರ್ಚರ್ ಕಮ್‌ಬ್ಯಾಕ್‌ಗೆ ಸಿದ್ಧವಾಗಿರುವುದಾಗಿ ಘೋಷಿಸಿದ್ದರು. ಬಳಿಕ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಜೋಫ್ರ ಆರ್ಚರ್ ಚೇತರಿಕೆಯ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. "ಜೋಫ್ರ ಆರ್ಚರ್ ತಮ್ಮ ಮೊಣಕೈ ಗಾಯದಿಂದ ಉತ್ತಮ ರೀತಿಯಲ್ಲಿ ಚೇತರಿಕೆ ಕಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ವಾಪಾಸಾಗುವ ನಿರೀಕ್ಷೆಯಿದೆ" ಎಂದು ಈ ಪ್ರಕಟಣೆಯಲ್ಲಿ ತಿಳಿಸಿತ್ತು.
ಇನ್ನು ಪಾಕಿಸ್ತಾನದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಹ್ಯಾರಿ ಬ್ರೂಕ್ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯೂಕ್ ಮೂರು ಶತಕಗಳನ್ನು ಬಾರಿಸಿ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದಾರೆ.
ದ. ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡ ಹೀಗಿದೆ
ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ಓಲಿ ಸ್ಟೋನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications