ENG vs IND Test: ಭಾರತವನ್ನು ತವರಿನಲ್ಲಿ ಮಣಿಸಲು ಇಂಗ್ಲೆಂಡ್ ಬಿಗ್ ಪ್ಲ್ಯಾನ್
ಸದ್ಯ ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯುತ್ತಿವೆ. ಈ ಲೀಗ್ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಈ ಟೆಸ್ಟ್ ಸರಣಿ ವಿಶ್ವ ಟೆಸ್ಟ್ ಸರಣಿಯ ಭಾಗವಾಗಿದ್ದು, ಈ ಸರಣಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮಣಿಸಲು ಇಂಗ್ಲೆಂಡ್ ಮಾಸ್ಟರ್ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ.
ಇಂಗ್ಲೆಂಡ್ ತವರಿನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವಲ್ಲಿ ಯೋಜನೆಯನ್ನು ರೂಪಿಸಿಕೊಂಡಿದೆ. ಈ ನಿಟ್ಟಿನಲ್ಲಿ ಇಂಗ್ಲೆಂಡ್ ತಂಡ ತನ್ನ ತರಬೇತಿ ಸಿಬ್ಬಂದಿಗಳ ಬದಲಾವಣೆಗೆ ಪ್ಲ್ಯಾನ್ ಮಾಡಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಇಂಗ್ಲೆಂಡ್ ಕ್ಯಾಂಪ್ ಸೇರುವ ಸಾಧ್ಯತೆ ಇದೆ. ಹಾಗಿದ್ದರೆ ಆ ಬೌಲರ್ ಯಾರು ಅವರ ಸಾಧನೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.

ಇಂಗ್ಲೆಂಡ್ ತನ್ನ ಬೌಲಿಂಗ್ ತರಬೇತುದಾರರನ್ನು ಬದಲಾವಣೆ ಮಾಡಲು ಮುಂದಾಗಿದೆ. ಈ ವೇಳೆ ನ್ಯೂಜಿಲೆಂಡ್ ತಂಡದ ವೇಗದ ಬೌಲರ್ ಟೀಮ್ ಸೌಥಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಟಿಮ್ ಸೌಥಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದರು. ಈಗ, ಅವರು ಕೋಚಿಂಗ್ ಕಾರ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಿದೆ.
ವೇಗಿಯ ಸಾಧನೆ
37 ವರ್ಷದ ಟೀಮ್ ಸೌಥಿ ಈಗಾಗಲೇ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇವರು ನ್ಯೂಜಿಲೆಂಡ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್. ಇವರು ಆಡಿರುವ 107 ಟೆಸ್ಟ್ ಪಂದ್ಯಗಳಲ್ಲಿ 391 ವಿಕೆಟ್ ಕಬಳಿಸಿದ್ದಾರೆ. ಈ ಪಟ್ಟಿಯಲ್ಲಿ ರಿಚರ್ಡ್ ಹ್ಯಾಡ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಇವರು 431 ವಿಕೆಟ್ ಪಡೆದ ಹಿರಿಮೆ ಹೊಂದಿದ್ದಾರೆ. ಇನ್ನು ಸದ್ಯ ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್ ತಂಡದ ಬೌಲಿಂಗ್ ತರಬೇತುದಾರರ ಪಾತ್ರವನ್ನು ನಿರ್ವಹಿಸಿದ್ದರು. ಇವರು ಕೌಂಟಿ ಕ್ರಿಕೆಟ್‌ನಲ್ಲಿ ಬ್ಯೂಸಿ ಆಗಿದ್ದರಿಂದ ಇವರ ಸ್ಥಾನವನ್ನು ತುಂಬಲು ಸೌಥಿ ಮುಂದಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ಇಂಗ್ಲೆಂಡ್ ತಂಡದ ಕೋಚ್ ಆಗಿ ಬ್ರೆಂಡನ್ ಮೆಕಲಮ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಅಧಿಕಾರವಧಿಯಲ್ಲಿ ಜೀತನ್ ಪಟೇಲ್ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ಈ ಕ್ಯಾಂಪ್‌ಗೆ ಹೊಸ ಮುಖ ಎಂಟ್ರಿ ಆಗುವ ಸಾಧ್ಯತೆ ಇದೆ. ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ಜೊತೆಗೆ ಇಂಗ್ಲೆಂಡ್ ಈ ಸೀಸನ್ ಆರಂಭಿಸಲಿದೆ. ಈ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಸೀಮಿತ ಓವರ್‌ಗಳ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ಬಳಿಕವೇ ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾವನ್ನು ಮೇ ಅಂತ್ಯದಲ್ಲಿ ಘೋಷಿಸುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications