ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

"ಇಂಗ್ಲೆಂಡ್ ಕ್ರಿಕೆಟಿಗರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿಲ್ಲ"

England players havent broken any Covid rules says Ashley Giles

ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೆ ಮುನ್ನ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಕೊರೊನಾವೈರಸ್ ಆಘಾತವನ್ನು ನೀಡಿತ್ತು. ಇಂಗ್ಲೆಂಡ್ ಸ್ಕ್ವಾಡ್‌ನಲ್ಲಿದ್ದ ಮೂವರು ಆಟಗಾರರ ಸಹಿತ ಒಟ್ಟು 7 ಮಂದಿಗೆ ಕೊರೊನಾವೈರಸ್ ದೃಢಪಟ್ಟಿದೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಸರಣಿಗೆ ಹೊಸ ತಂಡವನ್ನು ಪ್ರಕಟಿಸಲಾಗಿದ್ದು ಬೆನ್ ಸ್ಟೋಕ್ಸ್‌ಗೆ ನಾಯಕತ್ವದ ಹೊಣೆ ವಹಿಸಲಾಗಿದೆ.

ಇನ್ನು ಈ ಸಂದರ್ಭದಲ್ಲಿ ಇಂಗ್ಲೆಂಡ್ ಆಟಗಾರರು ಕೊರೊನಾವೈರಸ್‌ನ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳು ಕೇಳಿಬರುತ್ತಿದೆ. ಇದೇ ಕಾರಣದಿಂದಾಗಿ ಸ್ಕ್ವಾಡ್‌ನ ಒಳಗೆ ಕೊರೊನಾವೈರಸ್ ಸ್ಪೋಟವಾಗಲು ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೆ ಇಂಗ್ಲೆಂಡ್ ಪುರುಷರ ಕ್ರಿಕೆಟ್ ತಂಡದ ನಿರ್ದೇಶಕರಾಗಿರುವ ಆಶ್ಲೇ ಗಿಲ್ಸ್ ಪ್ರತಿಕ್ರಿಯೆ ನೀಡಿದ್ದಾರೆ. ಇಂಗ್ಲೆಂಡ್ ತಂಡದ ಆಟಗಾರರು ಅಥವಾ ಸಿಬ್ಬಂದಿಗಳು ಯಾರು ಕೂಡ ಕೊರೊನಾವೈರಸ್ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದಿದ್ದಾರೆ.

ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಭಾರತದ ನಾಯಕರಾಗಿ ಯಾರು ಮೇಲು ಗೊತ್ತಾ?!ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಭಾರತದ ನಾಯಕರಾಗಿ ಯಾರು ಮೇಲು ಗೊತ್ತಾ?!

"ಆಟಗಾರರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ನಾನು ತುಂಬಾ ದೃಢವಾಗಿ ಹೇಳುತ್ತಿದ್ದೇನೆ. ಆದರೆ ಅದು ಹೇಗೆ ಬಂತು ಎಂಬುದನ್ನು ಹೇಳಲು ನಮ್ಮಿಂದ ಸಾಧ್ಯವಿಲ್ಲ" ಎಂದು ಆಶ್ಲೇ ಗಿಲ್ಸ್ ಕೋವಿಡ ನಿಯಮ ಉಲ್ಲಂಘನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

"ತಂಡ ತುಂಬಾ ಕಠಿಣ ನಿರ್ಬಂಧಗಳ ಮಧ್ಯೆಯಿದೆ. ನಾವು ಈ ವಿಚಾರವಾಗಿ ಅದೃಷ್ಟಪರೀಕ್ಷೆಗೆ ಇಳಿದಿಲ್ಲ. ನಾವು ಅದನ್ನು ಮಾಡುವುದೂ ಇಲ್ಲ. ನಮಗೆ ಅದರ ಗಂಭೀರತೆಯ ಸಂಪೂರ್ಣ ಅರಿವಿದೆ" ಎಂದು ಆಶ್ಲೇ ಗಿಲ್ಸ್ ಈ ಸಂದರ್ಭದಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಹೊಸ ಡೆಲ್ಟಾ ಮಾದರಿ ಕೊರೊನಾವೈರಸ್ ಸ್ಪೋಟಕ್ಕೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತ್ಯದ ಬಳಿಕ ಕಳೆದ ಭಾನುವಾರ ಆಟಗಾರರ ಕೊರೊನಾ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶದಲ್ಲಿಒಟ್ಟು ಏಳು ಮಂದಿ ಕೊರೊನಾವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಇದರಲ್ಲಿ ಮೂವರು ಆಟಗಾರರಾಗಿದ್ದು ನಾಲ್ವರು ತಂಡದ ಸಿಬ್ಬಂದಿಗಳಾಗಿದ್ದಾರೆ.

Story first published: Wednesday, July 7, 2021, 10:35 [IST]
Other articles published on Jul 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X