ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮ್ಯಾಂಚೆಸ್ಟರ್ ಟೆಸ್ಟ್ ರದ್ದಾದ ಕೋಪವನ್ನು ಐಪಿಎಲ್ ಮೇಲೆ ಹಾಕಿದ ಸ್ಟಾರ್ ಆಟಗಾರ!

Englands 3 Star players pull out of IPL second leg a day after India cancel Manchester Test

ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವುದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರಣಿಯಲ್ಲಿ ಮುಗಿದಿದ್ದ 4 ಪಂದ್ಯಗಳ ಪೈಕಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಜಯ ಸಾಧಿಸಿತ್ತು ಮತ್ತು ಇಂಗ್ಲೆಂಡ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯವನ್ನು ಗಳಿಸಿತ್ತು. ಹೀಗೆ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದ್ದ ಟೀಮ್ ಇಂಡಿಯಾಗೆ ಐದನೇ ಪಂದ್ಯದಲ್ಲಿ ಜಯ ಗಳಿಸಿದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಕೈವಶವಾಗುತ್ತಿತ್ತು. ಅತ್ತ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿದ್ದ ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿದರೆ ಮಾತ್ರ ಸರಣಿಯನ್ನು ಡ್ರಾ ಮಾಡಿಕೊಳ್ಳುವ ಅವಕಾಶವಿತ್ತು.

ಮ್ಯಾಂಚೆಸ್ಟರ್ ಟೆಸ್ಟ್ ರದ್ದು: ಇಂಗ್ಲೆಂಡ್‌ಗೆ ಕೋಟಿ ಕೋಟಿ ನಷ್ಟ; ರದ್ದಾದ ಈ ಪಂದ್ಯ ಮತ್ತೆ ನಡೆಯುತ್ತೆ!ಮ್ಯಾಂಚೆಸ್ಟರ್ ಟೆಸ್ಟ್ ರದ್ದು: ಇಂಗ್ಲೆಂಡ್‌ಗೆ ಕೋಟಿ ಕೋಟಿ ನಷ್ಟ; ರದ್ದಾದ ಈ ಪಂದ್ಯ ಮತ್ತೆ ನಡೆಯುತ್ತೆ!

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಬೇಕಿದ್ದ ಐದನೆ ಟೆಸ್ಟ್ ಪಂದ್ಯ ಭಾರೀ ದೊಡ್ಡ ಮಟ್ಟದಲ್ಲಿ ಕುತೂಹಲವನ್ನು ಹುಟ್ಟು ಹಾಕಿತ್ತು. ಇಷ್ಟೆಲ್ಲಾ ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ಆರಂಭಕ್ಕೆ ಇನ್ನೇನು ಕೆಲವೇ ಗಂಟೆಗಳು ಇರುವಾಗ ಪಂದ್ಯ ರದ್ದಾಯಿತು. ಟೀಮ್ ಇಂಡಿಯಾದ ಸಿಬ್ಬಂದಿ ವರ್ಗದವರಲ್ಲಿ ಪಂದ್ಯ ಆರಂಭಕ್ಕೂ ಮುನ್ನಾ ದಿನ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿದ ಟೀಮ್ ಇಂಡಿಯಾ ಅಂತಿಮ ಟೆಸ್ಟ್ ಪಂದ್ಯದಲ್ಲಿ ತಮ್ಮ ಆಟಗಾರರನ್ನು ಕಣಕ್ಕೆ ಇಳಿಸದಿರಲು ತೀರ್ಮಾನಿಸಿತು.

ಅಂದು ಭಾರತದಲ್ಲಿ ಪಂದ್ಯ ರದ್ದಾದಾಗ ಇಂಗ್ಲೆಂಡ್ ನಡೆದುಕೊಂಡ ರೀತಿ ಮರೆಯೋಕಾಗಲ್ಲ: ಗವಾಸ್ಕರ್ಅಂದು ಭಾರತದಲ್ಲಿ ಪಂದ್ಯ ರದ್ದಾದಾಗ ಇಂಗ್ಲೆಂಡ್ ನಡೆದುಕೊಂಡ ರೀತಿ ಮರೆಯೋಕಾಗಲ್ಲ: ಗವಾಸ್ಕರ್

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಟೆಸ್ಟ್ ಪಂದ್ಯವನ್ನು ಮುಂದಿನ ದಿನಗಳಲ್ಲಿ ನಡೆಸಲು ತೀರ್ಮಾನಿಸಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪಂದ್ಯವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದೂಡಿತು. ಹೀಗೆ ಅಂತಿಮ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ತಮ್ಮ ಆಕ್ರೋಶವನ್ನು ಸಹಜವಾಗಿಯೇ ಹೊರಹಾಕುತ್ತಿದ್ದಾರೆ. ಆದರೆ ಇದೀಗ ಭಾರತ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಮಾರನೇ ದಿನಕ್ಕೆ ಇಂಗ್ಲೆಂಡ್ ತಂಡದ ಮೂವರು ಆಟಗಾರರು ಯುಎಇಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಹಿಂದೆ ಸರಿದ ಮೂವರು ಇಂಗ್ಲೆಂಡ್ ಕ್ರಿಕೆಟಿಗರು

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಹಿಂದೆ ಸರಿದ ಮೂವರು ಇಂಗ್ಲೆಂಡ್ ಕ್ರಿಕೆಟಿಗರು


ಕಳೆದ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದಾಗಿ ಅರ್ಧಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇದೇ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರೆಸಲಾಗುತ್ತಿದೆ. ಹೀಗೆ ಯುಎಇಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಇಂಗ್ಲೆಂಡ್ ತಂಡದ ಮೂವರು ಪ್ರಮುಖ ಆಟಗಾರರಾದ ಡಾವಿಡ್ ಮಲನ್, ಕ್ರಿಸ್ ವೋಕ್ಸ್ ಮತ್ತು ಜಾನಿ ಬೇರ್‌ಸ್ಟೋ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಡಾವಿಡ್ ಮಲನ್ ಪಂಜಾಬ್ ಕಿಂಗ್ಸ್ ತಂಡದ ಆಟಗಾರ, ಕ್ರಿಸ್ ವೋಕ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಮತ್ತು ಜಾನಿ ಬೇರ್‌ಸ್ಟೋ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರನಾಗಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಡಾವಿಡ್ ಮಲನ್ ಹಿಂದೆ ಸರಿದದ್ದು ಅನುಮಾನ ಹುಟ್ಟುಹಾಕಿದೆ

ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಡಾವಿಡ್ ಮಲನ್ ಹಿಂದೆ ಸರಿದದ್ದು ಅನುಮಾನ ಹುಟ್ಟುಹಾಕಿದೆ

ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಕ್ಕೂ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರರು ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಹಿಂದೆ ಸರಿದಿದ್ದಕ್ಕೂ ಸಂಬಂಧವಿದೆ ಎನಿಸಲು ಕಾರಣ ಡಾವಿಡ್ ಮಲನ್. ಹೌದು ಇತ್ತೀಚೆಗಷ್ಟೇ ನಡೆದ ಸಂದರ್ಶನವೊಂದರಲ್ಲಿ ಇದೇ ಡಾವಿಡ್ ಮಲನ್ ಟಿ ಟ್ವೆಂಟಿ ವಿಶ್ವಕಪ್ ಹಾಗೂ ಆಶಸ್ ಸರಣಿಯಲ್ಲಿ ಪಾಲ್ಗೊಳ್ಳದೇ ಇದ್ದರೂ ಸಹ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುತ್ತೇನೆ ಎಂಬ ಹೇಳಿಕೆಯನ್ನು ನೀಡಿದ್ದರು. ಹೀಗೆ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಕಡ್ಡಾಯವಾಗಿ ಭಾಗವಹಿಸುತ್ತೇನೆ ಎಂದು ಹೇಳಿದ್ದ ಡಾವಿಡ್ ಮಲನ್ ಇದೀಗ ದಿಢೀರನೆ ಮುಂಬರಲಿರುವ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿರುವುದು ಟೀಮ್ ಇಂಡಿಯಾ ಆಟಗಾರರು ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದ ಕಾರಣದಿಂದಲೇ ಎಂಬ ಅನುಮಾನ ಇದೀಗ ಎಲ್ಲರಲ್ಲಿಯೂ ಮೂಡಿದೆ..

ಡೇವಿಡ್ ವಾರ್ನರ್‌ಗೆ ಇದರಿಂದ ಒಳ್ಳೆಯ ಅವಕಾಶ

ಡೇವಿಡ್ ವಾರ್ನರ್‌ಗೆ ಇದರಿಂದ ಒಳ್ಳೆಯ ಅವಕಾಶ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದ ಕೊನೆಯ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದೇ ತಂಡದಿಂದ ಹೊರಗುಳಿದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಡೇವಿಡ್ ವಾರ್ನರ್‌ಗೆ ಇಂಗ್ಲೆಂಡ್ ತಂಡದ ಆಟಗಾರರು ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿರುವುದು ಒಳ್ಳೆಯ ಅವಕಾಶವನ್ನು ಕಲ್ಪಿಸಿದಂತಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಆಟಗಾರ ಜಾನಿ ಬೇರ್‌ಸ್ಟೋ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದರೆ ಡೇವಿಡ್ ವಾರ್ನರ್ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ.

Story first published: Saturday, September 11, 2021, 17:14 [IST]
Other articles published on Sep 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X