ಭಾರತ vs ಇಂಗ್ಲೆಂಡ್: ಟೆಸ್ಟ್ ಸರಣಿಗೆ ಭಾರತ ಸಂಭಾವ್ಯ ತಂಡ ಪ್ರಕಟ

ನವದೆಹಲಿ: ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಸಂಬಂಧಿಸಿ ಟೀಮ್ ಇಂಡಿಯಾದ ಸಂಭಾವ್ಯ ಆಟಗಾರರ ಪಟ್ಟಿ ಪ್ರಕಟಗೊಂಡಿದೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ತಂಡದಿಂದ ಹೊರಗಿರುವ ಭಾರತದ ಎಂದಿನ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಭವಿ ವೇಗಿ ಇಶಾಂತ್ ಶರ್ಮಾ ಇಂಗ್ಲೆಂಡ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬ್ರಿಸ್ಬೇನ್ ಟೆಸ್ಟ್‌ನಲ್ಲಿ ತಂಡದಿಂದ ಹೊರಗಿರುವ ವೇಗಿ ಜಸ್‌ಪ್ರೀತ್ ಬೂಮ್ರಾ ಮತ್ತು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಭಾರತಕ್ಕೆ ಪ್ರವಾಸ ಬರುವ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ನಿರೀಕ್ಷೆ ಹೆಚ್ಚಿದೆ. ಫೆಬ್ರವರಿ 5-9 ಮತ್ತು ಫೆಬ್ರವರಿ 13-17ರ ವರೆಗೆ ಆರಂಭಿಕ ಎರಡು ಟೆಸ್ಟ್ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ. ಈ ಎರಡು ಟೆಸ್ಟ್ ಪಂದ್ಯಕ್ಕಾಗಿ ಬಿಸಿಸಿಐ ಆಟಗಾರನ್ನು ಹೆಕ್ಕಿರುವುದಾಗಿ ತಿಳಿದು ಬಂದಿದೆ.
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಭಾರತ ಸಂಭಾವ್ಯ ತಂಡ
* ಆರಂಭಿಕ ಬ್ಯಾಟ್ಸ್‌ಮನ್‌ಗಳು (3): ಶುಬ್ಮನ್ ಗಿಲ್, ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್ (ಮೀಸಲು).
* ಮಧ್ಯಮ ಕ್ರಮಾಂಕ (3): ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ವಿಸಿ).
* ವಿಕೆಟ್‌ಕೀಪರ್‌ಗಳು (2): ವೃದ್ಧಿಮಾನ್ ಸಹಾ, ರಿಷಭ್ ಪಂತ್
* ಆಲ್‌ರೌಂಡರ್: ವಾಷಿಂಗ್ಟನ್ ಸುಂದರ್
* ವೇಗಿಗಳು (5): ಜಸ್ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಟಿ ನಟರಾಜನ್.
* ಸ್ಪಿನ್ನರ್‌ಗಳು: ರವಿಚಂದ್ರನ್ ಅಶ್ವಿನ್, ಶಹಬಾಜ್ ನದೀಮ್, ಕುಲದೀಪ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications