ENG vs AUS: ಏಕದಿನ-ಟಿ20 ಸರಣಿಗಳಿಗೆ ಇಂಗ್ಲೆಂಡ್ ತಂಡ ಪ್ರಕಟ; ಸ್ಟಾರ್ ಆಟಗಾರರು ಔಟ್!
ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲು ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಉಭಯ ತಂಡಗಳ ನಡುವಿನ ಈ ಎರಡು ಸರಣಿಗಳು ಆರಂಭಕ್ಕೂ ಮುನ್ನ ಭಾರೀ ಕುತೂಹಲ ಹೆಚ್ಚಿಸಿವೆ. ಸೆಪ್ಟೆಂಬರ್ 11 ರಿಂದ ಟಿ20 ಸರಣಿ ಶುರುವಾಗಲಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಾಗಿ ತನ್ನ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಮೂಲಕ ಇಂಗ್ಲೆಂಡ್ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಹೊಸ ಯುಗವನ್ನು ಪ್ರಾರಂಭಿಸಲು ಎದುರು ನೋಡುತ್ತಿದೆ. ಇದಕ್ಕಾಗಿ ಇಂಗ್ಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ.

ಸ್ಟಾರ್ ಆಟಗಾರರು ಔಟ್
ಇತ್ತೀಚಿನ ಏಕದಿನ ಮತ್ತು ಟಿ20 ವಿಶ್ವಕಪ್‌ನಲ್ಲಿ ಆಟಗಾರರ ನಿರಾಶಾದಾಯಕ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಕೆಲವು ಬದವಲಾವಣೆಗಳನ್ನು ಮಾಡಲಾಗಿದೆ. ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ಕೈ ಬಿಡಲಾಗಿದೆ.
ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ಜಾನಿ ಬೈರ್‌ಸ್ಟೋವ್ ಮತ್ತು ಆಲ್‌ರೌಂಡರ್ ಮೊಯಿನ್ ಅಲಿಯನ್ನು ತಂಡದಿಂದ ಹೊರ ಇಡಲಾಗಿದೆ. ಕಳೆದ ತಿಂಗಳು ಇಂಗ್ಲೆಂಡ್ ವೈಟ್ ಬಾಲ್ ತಂಡದ ಮುಖ್ಯ ಕೋಚ್ ಮ್ಯಾಥ್ಯೂ ಮೋಟ್ ಅವರನ್ನು ವಜಾಗೊಳಿಸಿದ ನಂತರ ಈ ಬದಲಾವಣೆಯ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ವೇಗದ ಬೌಲರ್ ಕ್ರಿಸ್ ಜೋರ್ಡಾನ್ ಸಹಾ ಆಯ್ಕೆಯಾಗಿಲ್ಲ. ಶ್ರೀಲಂಕಾ ವಿರುದ್ದ ಟೆಸ್ಟ್ ಸರಣಿಯಲ್ಲಿ ಮಿಂಚಿದ ಸ್ಟಾರ್ ಬ್ಯಾಟರ್ ಜೋ ರೂಟ್‌ಗೆ ವಿಶ್ರಾಂತಿ ನೀಡಲಾಗಿದೆ. ಜ್ಯಾಕ್ ಕ್ರಾಲಿ, ಬೆನ್ ಸ್ಟೋಕ್ಸ್ ಮತ್ತು ಮಾರ್ಕ್ ವುಡ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ.
5 ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ
ಪ್ರಸ್ತುತ ಹಂಗಾಮಿ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಾರ್ಕಸ್ ಟ್ರೆಸ್ಕೋಥಿಕ್ ಅವರು 5 ಅನ್‌ಕ್ಯಾಪ್ಡ್ ಆಟಗಾರರನ್ನು ಒಳಗೊಂಡಿರುವ ತಂಡದ ನೇತೃತ್ವವನ್ನು ವಹಿಸಲಿದ್ದಾರೆ. ಜೋಶ್ ಹಲ್, ಜಾಕೋಬ್ ಬೆಥೆಲ್ ಮತ್ತು ಜಾನ್ ಟರ್ನರ್ ಅವರನ್ನು ಏಕದಿನ ಮತ್ತು ಟಿ20 ಸರಣಿಗಳಿಗೆ ಆಯ್ಕೆ ಮಾಡಲಾಗಿದ್ದು, ಡ್ಯಾನ್ ಮೌಸ್ಲಿ ಮತ್ತು ಜೋರ್ಡಾನ್ ಕಾಕ್ಸ್ ಅವರನ್ನು ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಆಗಿ ಮೊಯಿನ್ ಅಲಿ ಅವರ ಸ್ಥಾನವನ್ನು ಬೆತೆಲ್ ಮತ್ತು ಮುಸ್ಲಿ ತುಂಬಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ-ಟಿ20 ಸರಣಿಗಳಿಗೆ ಇಂಗ್ಲೆಂಡ್ ತಂಡ
ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟರ್ಸ್ (ನಾಯಕ), ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಸ್ಯಾಮ್ ಕರ್ರಾನ್, ಜೋಶ್ ಹಲ್, ವಿಲ್ ಜಾಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡಾನ್ ಮೌಸ್ಲಿ, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಟರ್ನರ್.
ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೋಶ್ ಹಲ್, ವಿಲ್ ಜಾಕ್ಸ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮೀ ಸ್ಮಿತ್, ರೀಸ್ ಟೋಪ್ಲೆ, ಟರ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications