ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಇಂಗ್ಲೆಂಡ್

ಪ್ರವಾಸಿ ಇಂಗ್ಲೆಂಡ್ ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಬೃಹತ್ ಗೆಲುವನ್ನು ಸಾಧಿಸಿದೆ. ಈ ಗೆಲುವು ಇಂಗ್ಲೆಂಡ್ ತಂಡಕ್ಕೆ ಸರಣಿಯಲ್ಲಿ 1-0 ಮುನ್ನಡೆಯನ್ನು ಒದಗಿಸಿದೆ. ಈ ಮುನ್ನಡೆಯ ಜೊತೆಗೆ ಇಂಗ್ಲೆಂಡ್‌ಗೆ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್ನ ಫೈನಲ್‌ಗೇರಲು ಮತ್ತಷ್ಟು ಶಕ್ತಿ ನೀಡಿದೆ. ಅದಕ್ಕೆ ಪೂರಕವಾಗಿ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಅಂಕಪಟ್ಟಿಯಲ್ಲಿ ಮಹತ್ವದ ಸಾಧನೆಯನ್ನು ಮಾಡಿದೆ.
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ ಫಲಿತಾಂಶದ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಅಂಕಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಅಂಕಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನವನ್ನು ಗಳಿಸುವ ಮೂಲಕ ಮೇಲುಗೈ ಸಾಧಿಸಿದೆ.
ಈ ಅಂಕಪಟ್ಟಿಯಲ್ಲಿ ಈಗಾಗಲೇ ಫೈನಲ್‌ಗೆ ಟಿಕೆಟ್ ಪಡೆದುಕೊಂಡಿರುವ ನ್ಯೂಜಿಲೆಂಡ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದ್ದರೆ ಟೀಮ್ ಇಮಡಿಯಾ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಭಾರತ ಮುಂದಿನ ಮೂರು ಪಂದ್ಯಗಳನ್ನು ಕನಿಷ್ಟ ಎರಡು ಗೆಲವು ಹಾಗೂ ಒಂದು ಡ್ರಾ ಸಾಧಿಸಿದರಷ್ಟೇ ಫೈನಲ್ಸ್‌ಗೆ ಟಿಕೆಟ್ ಪಡೆದುಕೊಳ್ಳಲಿದೆ.
ಆರನೇ ಸರಣಿಯನ್ನು ಆಡುತ್ತಿರುವ ಇಂಗ್ಲೆಂಡ್ 70.2ಶೇಕಡಾ ಅಂಕಗಳನ್ನು ಹೊಂದಿದ್ದರೆ ನ್ಯೂಜಿಲೆಂಡ್ 70 ಶೇಕಡಾ ಅಂಕಗಳನ್ನು ಹೊಂದಿದೆ. ಆಸ್ಟ್ರೇಲಿಯಾ 69.2 ಹಾಗೂ ಭಾರತ ತಂಡ 68.3 ಅಂಕಗಳನ್ನು ಹೊಂದಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಈ ಸರಣಿ ಈ ಎರಡು ತಂಡಗಳ ಜೊತೆಗೆ ಆಸ್ಟ್ರೇಲಿಯಾದ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್ ಪ್ರವೇಶವನ್ನು ಕೂಡ ನಿರ್ಧರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications