IND vs ENG T20: ಜೋಸ್ ಬಟ್ಲರ್ ಏಕಾಂಗಿ ಹೋರಾಟ್: ಭಾರತ ಗೆಲುವಿಗೆ 133 ರನ್ ಗುರಿ
ಬುಧವಾರ ನಡೆದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡದ ಕೈ ಮೇಲಾಗಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಕಲೆ ಹಾಕುವ ಕನಸು ನುಚ್ಚು ನೂರಾಗಿದೆ. ಸೂರ್ಯಕುಮಾರ್ ಯಾದವ್ ಅವರ ಬೌಲರ್‌ಗಳ ಶಿಸ್ತು ಬದ್ಧ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳು ಪರದಾಡಿದರು. ಪರಿಣಾಮ ಟೀಮ್ ಇಂಡಿಯಾ, ಪ್ರವಾಸಿ ತಂಡವನ್ನು 132 ರನ್‌ಗಳಿಗೆ ಕಟ್ಟಿ ಹಾಕಿದೆ.
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಪರ ಇನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಹಾಗೂ ಬೆನ್ ಡಕೆಟ್ ತಂಡಕ್ಕೆ ದೊಡ್ಡ ಕಾಣಿಕೆ ನೀಡುವಲ್ಲಿ ವಿಫಲರಾದರು. ಅರ್ಷದೀಪ್ ಸಿಂಗ್ ಎಸೆದ ಮೂರನೇ ಎಸೆತದಲ್ಲಿ ಇಲ್ಲದ ಶಾಟ್ ಹೊಡೆಯಲು ಹೋಗಿ ಫಿಲ್ ಸಾಲ್ಟ್ ಪೆವಿಲಿಯನ್ ಸೇರಿದರು. ಇನ್ನು ಬೆನ್ ಡಕೆಟ್ ಸಹ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲಿಲ್ಲ. ಪರಿಣಾಮ ಇಂಗ್ಲೆಂಡ್ ಒತ್ತಡಕ್ಕೆ ಸಿಲುಕಿತು.

ಉತ್ತಮ ಜೊತೆಯಾಟ
17 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಜೋಸ್ ಬಟ್ಲರ್ ಹಾಗೂ ಹ್ಯಾರಿ ಬ್ರುಕ್ ಆಧಾರವದರು. ಈ ಜೋಡಿ ಕೊಂಚ ಭಾರತದ ಬೌಲರ್‌ಗಳನ್ನು ಕಾಡಿದರು. ಆದರೆ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಈ ಜೋಡಿ 28 ಎಸೆತಗಳಲ್ಲಿ 48 ರನ್ ಸೇರಿಸಿತು. ಹ್ಯಾರಿ ಬ್ರೂಕ್ 14 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸೇರಿದಂತೆ 17 ರನ್ ಬಾರಿಸಿ ಔಟ್ ಆದರು.
ಜವಾಬ್ದಾರಿ ಮರೆತ ಬ್ಯಾಟರ್ಸ್
ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ರನ್ ಕಲೆ ಹಾಕವುದನ್ನು ಮರೆತು ಬಿಟ್ಟರು. ಯಾವೊಬ್ಬ ಬ್ಯಾಟರ್ ನೆಲಕ್ಕೂರಿ ನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಮಿಡ್ಲ್ ಓವರ್‌ಗಳಲ್ಲಿ ಇಂಗ್ಲೆಂಡ್ ಪರ ಯಾವೊಬ್ಬ ಬ್ಯಾಟರ್ ನಾಯಕ ಜೋಸ್ ಬಟ್ಲರ್‌ಗೆ ಉತ್ತಮ ಸಾಥ್ ನೀಡಲಿಲ್ಲ. ಸ್ಟಾರ್ ಆಟಗಾರರಾದ ಲಿಯಾಮ್ ಲಿವಿಂಗ್‌ಸ್ಟೋನ್, ಜಾಕಬ್ ಬೇತೆಲ್ ನಿರಾಸೆ ಅನುಭವಿಸಿದರು.

ಏಕಾಂಗಿ ಹೋರಾಟ
ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ತಮ್ಮ ನೈಜ ಆಟವನ್ನು ಮುಂದುವರಿಸಿದ ರನ್‌ಗಳನ್ನು ಗುಡ್ಡೆ ಹಾಕಿದರು. ಇವರು ಆಡಿದ 44 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿ ಔಟ್ ಆದರು.
ಇಂಗ್ಲೆಂಡ್ ಮೊದಲ ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 132 ರನ್‌ಗಳಿಗೆ ಆಲೌಟ್ ಆಯಿತು.
ಅರ್ಷದೀಪ್ ದಾಖಲೆ
ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಎರಡು ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದರು. ಇವರು ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಯುಜುವೇಂದ್ರ ಚಹಾಲ್ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಇವರು ಎರಡು ವಿಕೆಟ್ ಪಡೆದು ಅಬ್ಬರಿಸಿದರು. ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications