ENG vs WI T20: ಇಂಗ್ಲೆಂಡ್ ಕ್ಲೀನ್ ಸ್ವೀಪ್ ಸಾಧನೆ: ಆರ್‌ಸಿಬಿ ಪ್ಲೇಯರ್ ಅಬ್ಬರ
ಇಂಗ್ಲೆಂಡ್ ಪ್ರವಾಸದಲ್ಲಿ ವೆಸ್ಟ್ ಇಂಡೀಸ್ ಟಿ20 ಕ್ರಿಕೆಟ್ ಸರಣಿಯಲ್ಲಿ ಮುಖಭಂಗ ಅನುಭವಿಸಿದೆ. ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ 37 ರನ್‌ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0ಯಿಂದ ಗೆದ್ದು ಕೊಂಡಿದೆ. ಕೊನೆಯ ಪಂದ್ಯ ಗೆದ್ದು ವೈಟ್ ವಾಶ್ ಸೋಲು ತಪ್ಪಿಸಿಕೊಳ್ಳುವ ವೆಸ್ಟ್ ಇಂಡೀಸ್ ಆಸೆ ಕಮರಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದ ಆರಂಭ ಭರ್ಜರಿಯಾಗಿತ್ತು. ಜೇಮೀ ಸ್ಮಿತ್ ಹಾಗೂ ಬೆನ್ ಡಕೆಟ್ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಈ ಜೋಡಿ ಪವರ್ ಪ್ಲೇನಲ್ಲಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ವೆಸ್ಟ್ ಇಂಡೀಸ್ ಬೌಲರ್‌ಗಳು ವೈಫಲ್ಯ ಅನುಭವಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 8.5 ಓವರ್‌ಗಳಲ್ಲಿ 120 ರನ್ ಸೇರಿಸಿತು.

ಆರಂಭಿಕ ಜೇಮೀ ಸ್ಮಿತ್ 26 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 60 ರನ್ ಬಾರಿಸಿ ಮಿಂಚಿದರು. ಈ ಮೂಲಕ ಜೇಮೀ ಸ್ಮಿತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದರು. ಜೋಸ್ ಬಟ್ಲರ್ ವೇಗವಾಗಿ ರನ್ ಕಲೆ ಹಾಕುವ ಭರದಲ್ಲಿ ಔಟ್ ಆದರು. ಇವರು 22 ರನ್ ಬಾರಿಸಿದರು. ಆರಂಭಿಕ ಬೆನ್ ಡಕೆಟ್ ಮೈಚಳಿ ಬಿಟ್ಟು ಬ್ಯಾಟ್ ಮಾಡಿದರು. ಇವರು 20 ಬೌಂಡರಿ, 2 ಸಿಕ್ಸರ್ ಸಹಾಯದಿಂದ 84 ರನ್ ಸಿಡಿಸಿದರು.
ಆರ್‌ಸಿಬಿ ಪ್ಲೇಯರ್ ಬಿರುಗಾಳಿ ಬ್ಯಾಟಿಂಗ್
ಪಂದ್ಯದಲ್ಲಿ ಆರ್‌ಸಿಬಿ ಪ್ಲೇಯರ್ ಜಾಕಬ್ ಬೆತೆಲ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು ಕೇವಲ 16 ಎಸೆತಗಳಲ್ಲಿ 1 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 36 ರನ್ ಸಿಡಿಸಿದರು. ಹ್ಯಾರಿ ಬ್ರೂಕ್ ಅಜೇಯ 35 ರನ್ ಬಾರಿಸಿದರು. ಅಂತಿಮವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 248 ರನ್ ಕಲೆ ಹಾಕಿತು.
ಕಳಪೆ ಆರಂಭ
ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಅಕೇಲ್ ಹೊಸೇನ್, ಜೇಸನ್ ಹೋಲ್ಡರ್ ಬೇಗನೆ ವಿಕೆಟ್ ಒಪ್ಪಿಸಿದರು. ನಾಯಕ ಶಾಯ್ ಹೋಪ್ ಹಾಗೂ ಶಿಮ್ರೋನ್ ಹೆಟ್ಮೆಯರ್ ಕೊಂಚ ಇಂಗ್ಲೆಂಡ್ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಿದರು. ಶಾಯ್ ಹೋಪ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 45 ರನ್ ಬಾರಿಸಿದರೆ, ಶಿಮ್ರೋನ್ 3 ಸಿಕ್ಸರ್ ನೆರವಿನಿಂದ 26 ರನ್ ಬಾರಿಸಿದರು. ರೋವನ್ ಪೊವೆಲ್ ಏಕಾಂಗಿ ಹೋರಾಟ ನಡೆಸಿದರು. ಇವರು 45 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ ನೆರವಿನಿಂದ ಅಜೇಯ 79 ರನ್ ಬಾರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಅಂತಿಮವಾಗಿ ವಿಂಡೀಸ್ 8 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿತು. ಇಂಗ್ಲೆಂಡ್ ಪರ ಲ್ಯೂಕ್ ವುಡ್ 3 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications