ENG vs BAN: ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಹೊಸ ನಾಯಕನ ಘೋಷಣೆ
ಆಗಸ್ಟ್ 13 ಬುಧವಾರ, ಗಂಭೀರವಾಗಿ ಗಾಯಗೊಂಡಿರುವ ಇಂಗ್ಲೆಂಡ್ ನಾಯಕ, ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಈ ಋತುವಿನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಅವರು ಮುಂಬರುವ ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರ ನಡೆದಿರುವುದು ತಂಡಕ್ಕೆ ತಲೆ ನೋವಾಗಿದೆ.
ಭಾನುವಾರ ನಡೆದ ದಿ ಹಂಡ್ರೆಡ್ ಟೂರ್ನಿಯ ನಾರ್ದರ್ನ್ ಸೂಪರ್‌ಚಾರ್ಜರ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ನಡುವಿನ ಪಂದ್ಯದ ವೇಳೆ ಸ್ಟೋಕ್ಸ್ ಗಾಯಗೊಂಡಿದ್ದರು. ಮಂಗಳವಾರ ಲೀಡ್ಸ್‌ನಲ್ಲಿ ತೆಗೆದ ಸ್ಕ್ಯಾನ್‌ನಲ್ಲಿ ಸ್ಟೋಕ್ಸ್ ಗಂಭೀರವಾಗಿ ಗಾಯಗೊಂಡಿರುವುದು ತಿಳಿದು ಬಂದಿದೆ.

ಹೀಗಾಗಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ರೋಥ್‌ಸೆ ಟೆಸ್ಟ್ ಸರಣಿಯಿಂದ ಸ್ಟೋಕ್ಸ್ ಹೊರಗುಳಿದಿದ್ದಾರೆ.
ಈ ಸರಣಿ ಆಗಸ್ಟ್ 21 ರಿಂದ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದೆ. ಇದೀಗ ಇಂಗ್ಲೆಂಡ್ ಟೆಸ್ಟ್ ತಂಡದ ನೂತನ ನಾಯಕನ ಹೆಸರನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಘೋಷಣೆ ಮಾಡಿದೆ.
ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲ್ಲಿ ಪೋಪ್ ಅವರು ಇಂಗ್ಲೆಂಡ್‌ನ ಹೊಸ ನಾಯಕರಾಗಿ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಒಲ್ಲಿ ಪೋಪ್ ಕೂಡ ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ನಾಯಕನಾಗಿರುವ ಅವರಿಗೆ ಮೊದಲ ಸವಾಲು ಎದುರಾಗಲಿದೆ.
ಸ್ಟೋಕ್ ಗಾಯಗೊಂಡು ಹೊರ ನಡೆದಿರುವುದು ಇಂಗ್ಲೆಂಡ್‌ಗೆ ದೊಡ್ಡ ಹೊಡೆತ ಕೊಟ್ಟಿದೆ. ಏಕೆಂದರೆ ಅವರು ಆಲ್‌ರೌಂಡರ್ ಆಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ತಂಡಕ್ಕೆ ಕೊಡುಗೆ ನೀಡುತ್ತಿದ್ದರು. ಕಳೆದ ವರ್ಷ ಅವರ ಬೌಲಿಂಗ್ ಸೀಮಿತವಾಗಿತ್ತು. ಆದರೆ ನವೆಂಬರ್‌ನಲ್ಲಿ ಶಸ್ತ್ರಚಿಕಿತ್ಸೆಯ ನಂತರ ಸ್ಟೋಕ್ಸ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು.
ಸ್ಟೋಕ್ಸ್ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ 18 ವಿಕೆಟ್‌ಗಳನ್ನು ಪಡೆದರೆ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲೂ ಅದ್ಭತ ಪ್ರದರ್ಶನ ನೀಡುವ ಮೂಲಕ ಮಿಂಚಿದರು. ಈಗ ದಿ ಹಂಡ್ರೆಡ್ ಟೂರ್ನಿಯಲ್ಲಿ ತ್ವರಿತ ಸಿಂಗಲ್ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಅವರು ಗಾಯಗೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications