ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್: ನಾಲ್ಕನೇ ದಿನದಾಟದ ಲೈವ್ ಸ್ಕೋರ್

ಒಂದೆಡೆ ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿ ಸದ್ದು ಮಾಡುತ್ತಿದೆ. ಹೌದು, ಜೋ ರೂಟ್ ನಾಯಕತ್ವದ ಇಂಗ್ಲೆಂಡ್ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿದ್ದು ೫ ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ಇನ್ನು ಇತ್ತಂಡಗಳ ನಡುವೆ ಮೊದಲಿಗೆ ನಡೆದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3-2 ಅಂತರದಿಂದ ಗೆದ್ದ ವೆಸ್ಟ್ ಇಂಡೀಸ್ ಸದ್ಯ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಮಾರ್ಚ್ 8ರ ರಾತ್ರಿ 7.30ಕ್ಕೆ ( ಭಾರತೀಯ ಕಾಲಮಾನದ ಪ್ರಕಾರ ) ಅಂಟಿಗುವಾದ ನಾರ್ಥ್ ಸೌಂಡ್‌ನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಮ್‌ನಲ್ಲಿ ಆರಂಭಗೊಂಡಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ಮೊದಲನೇ ಇನ್ನಿಂಗ್ಸ್‌ನಲ್ಲಿ 311 ರನ್‌ಗಳಿಗೆ ಆಲ್ ಔಟ್ ಆಯಿತು.
ಇಂಗ್ಲೆಂಡ್ ತಂಡದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಜಾನಿ ಬೈರ್‌ಸ್ಟೋ ಉತ್ತಮ ಪ್ರದರ್ಶನ ನೀಡಿದರು. 259 ಎಸೆತಗಳಲ್ಲಿ 140 ರನ್ ಗಳಿಸಿ ಔಟ್ ಆದ ಜಾನಿ ಬೈರ್‌ಸ್ಟೋ ಆರಂಭದಲ್ಲಿಯೇ ಕುಸಿತ ಕಂಡಿದ್ದ ಇಂಗ್ಲೆಂಡ್‌ಗೆ ಆಸರೆಯಾದರು. ಇನ್ನು ಎರಡನೇ ದಿನದಾಟದಂದು ತನ್ನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಆತಿಥೇಯ ವೆಸ್ಟ್ ಇಂಡೀಸ್ ನಾಲ್ಕನೇ ದಿನದಂದು 375 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ 64 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು. ವೆಸ್ಟ್ ಇಂಡೀಸ್ ತಂಡದ ಪರ ಬೊನರ್ 355 ಎಸೆತಗಳಲ್ಲಿ 123 ರನ್ ಬಾರಿಸಿ ಉತ್ತಮ ಕೊಡುಗೆ ನೀಡಿದರು. ಇತ್ತ ನಾಲ್ಕನೇ ದಿನದಾಟದಂದು ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಆರಂಭದಲ್ಲಿಯೇ ತನ್ನ ಆರಂಭಿಕ ಆಟಗಾರ ಅಲೆಕ್ಸ್ ಲೀಸ್ ಅವರ ವಿಕೆಟ್ ಕಳೆದುಕೊಂಡಿದೆ.
27 ಎಸೆತಗಳಲ್ಲಿ 6 ರನ್ ಬಾರಿಸಿದ ಅಲೆಕ್ಸ್ ಲೀಸ್ ಕೆಮರ್ ರೋಚ್ ಎಸೆತದಲ್ಲಿ ಎಲ್‌ಬಿಡಬ್ಲ್ಯೂಗೆ ಬಲಿಯಾದರು. ಈ ಸಂದರ್ಭದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮತ್ತೋರ್ವ ಆರಂಭಿಕ ಆಟಗಾರ ಜ್ಯಾಕ್ ಕ್ರಾವ್ಲೆ ಜತೆ ಕೈಜೋಡಿಸಿದ್ದಾರೆ.
ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೋನರ್, ಜರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಕೆಮರ್ ರೋಚ್, ಅಲ್ಜಾರಿ ಜೋಸೆಫ್, ವೀರಸಾಮಿ ಪರ್ಮಾಲ್ ಮತ್ತು ಜೇಡನ್ ಸೀಲ್ಸ್
ಇಂಗ್ಲೆಂಡ್ ಆಡುವ ಬಳಗ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಮಾರ್ಕ್ ವುಡ್ ಮತ್ತು ಜ್ಯಾಕ್ ಲೀಚ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications