ಇಂಗ್ಲೆಂಡ್ vs ಆಸಿಸ್: ಏಕದಿನ ಸರಣಿಯಲ್ಲಿ ನಾಳೆ ನಿರ್ಣಾಯಕ ಪಂದ್ಯ

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ನಾಳೆ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡು ಪಂದ್ಯಗಳಲ್ಲಿ ತಲಾ ಒಂದರಂತೆ ಎರಡು ತಂಡಗಳು ಗೆಲುವನ್ನು ಸಾಧಿಸಿದ್ದು ಸರಣಿ 1-1 ರಿಂದ ಸಮಬಲಗೊಂಡಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿದೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ನಿರೀಕ್ಷಿಸದ ರೀತಿಯಲ್ಲಿ ಕಟ್ಟಿ ಹಾಕಿ ಗೆಲುವು ಸಾಧಿಸಿದ್ದ ತಂಡದ ಉತ್ಸಾಹವನ್ನು ಹೆಚ್ಚಿಸಿದೆ. ನಿರ್ಣಾಯಕ ಹಂತದಲ್ಲಿ ವಿಕೆಟ್ ಪಡೆಯಲು ಬೌಲರ್‌ಗಳು ಯಶಸ್ವಿಯಾಗುತ್ತಿರುವುದು ಇಂಗ್ಲೆಂಡ್ ನಾಯಕ ಮಾರ್ಗನ್ ಚಿಂತೆ ಕಡಿಮೆ ಮಾಡಿದೆ. ಹೀಗಾಗಿ ಅಂತಿಮ ಪಂದ್ಯದ ಆಡುವ ಬಳಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ತುಂಬಾ ಕಡಿಮೆಯಿದೆ.
ಆಸ್ಟ್ರೇಲಿಯಾ ಮಧ್ಯಮ ಓವರ್‌ಗಳಲ್ಲಿ ನಿರ್ಣಾಯಕ ವಿಕೆಟ್‌ಗಳನ್ನು ಕಳೆದುಕೊಳ್ಳುವ ಅಭ್ಯಾಸವನ್ನು ಎರಡನೇ ಏಕದಿನ ಪಂದ್ಯದಲ್ಲೂ ಮುಂದುವರಿಸಿದೆ. ಮತ್ತೊಂದೆಡೆ ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಸ್ವೀವ್ ಸ್ಮಿತ್ ಫಿಟ್‌ನೆಸ್ ಸ್ಥಿತಿಯ ಬಗ್ಗೆಯೂ ಸ್ಪಷ್ಟತೆಯಿಲ್ಲ. ಅಭ್ಯಾಸದ ವೇಳೆ ತಲೆಗೆ ಚೆಂಡು ಬಡಿದ ಕಾರಣ ಮೊದಲ ಎರಡು ಪಂದ್ಯಗಳಿಂದ ಸ್ಟಿವ್ ಸ್ಮಿತ್ ಅವರಿಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಂಡ ಹೇಳಿದೆ.
ಸಂಭಾವ್ಯ ತಂಡ
ಇಂಗ್ಲೆಂಡ್ : ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಇಯಾನ್ ಮಾರ್ಗನ್, ಜೋಸ್ ಬಟ್ಲರ್, ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ವೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕರ್ರನ್, ಆದಿಲ್ ರಶೀದ್.
ಆಸ್ಟ್ರೇಲಿಯಾ: ಆರೋನ್ ಫಿಂಚ್, ಡೇವಿಡ್ ವಾರ್ನರ್, ಮಾರ್ಕಸ್ ಸ್ಟೊಯಿನಿಸ್, ಮಾರ್ನಸ್ ಲ್ಯಾಬುಶೈನ್ (ಸ್ಟೀವ್ ಸ್ಮಿತ್), ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications