ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ, ಜೋ ರೂಟ್‌ಗೆ ಆಘಾತ

England Vs Australia Odi And T20i Series: England Squad Announced

ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟಿ20 ಹಾಗೂ ಏಕದಿನ ಇಂಗ್ಲೆಂಡ್‌ನಲ್ಲಿ ನಡೆಯಲಿದ್ದು ಇದಕ್ಕಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಸೆಪ್ಟೆಂಬರ್ 4 ರಿಂದ ಆರಂಭವಾಗುವ ಟಿ20 ಸರಣಿಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ತಂಡದಿಂದ ಹೊರಬಿದ್ದಿದ್ದಾರೆ. ಆದರೆ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಾಗಿ ಇಂಗ್ಲೆಂಡ್ ತಂಡವನ್ನು ಸೋಮವಾರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ಇನ್ನು ತಂದೆಯ ಅನಾರೋಗ್ಯದ ಕಾರಣದಿಂದ ಪಾಕ್ ವಿರುದ್ಧದ ಸರಣಿಯಿಂದ ಹೊರಗುಳಿದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ಎರಡರಿಂದಲೂ ಹೊರಗುಳಿದಿದ್ದಾರೆ.

ಜೇಸನ್ ರಾಯ್ ಅಲಭ್ಯ

ಜೇಸನ್ ರಾಯ್ ಅಲಭ್ಯ

ಬೆನ್ ಸ್ಟೋಕ್ಸ್ ಜೊತೆಗೆ ಟಿ20 ಸರಣಿಯಿಂದ ಹೊರಗುಳಿದಿದ್ದ ಇಂಗ್ಲೆಂಡ್‌ನ ಸ್ಪೋಟಕ ಆಟಗಾರ ಜೇಸನ್ ರಾಯ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಆದರೆ ಜೇಸನ್ ರಾಯ್ ಇನ್ನು ಕೂಡ ಇಂಗ್ಲೆಂಡ್‌ನ ಬಯೋ ಸೆಕ್ಯೂರ್ ಬಬಲ್‌ನ ವ್ಯಾಪ್ತಿಯಲ್ಲೇ ಇದ್ದು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಿ ಏಕದಿನ ತಂಡಕ್ಕೆ ಸೇರಿಕೊಳ್ಳುವತ್ತ ದೃಷ್ಠಿ ನೆಟ್ಟಿದ್ದಾರೆ.

ತಂಡಕ್ಕೆ ಸೇರಿಕೊಂಡ ಸ್ಟಾರ್‌ಗಳು

ತಂಡಕ್ಕೆ ಸೇರಿಕೊಂಡ ಸ್ಟಾರ್‌ಗಳು

ಈ ಮಧ್ಯೆ ಇಂಗ್ಲೆಂಡ್‌ನ ಮಾರಕ ವೇಗಿ ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್ ಹಾಗೂ ಮಾರ್ಕ್ ವುಡ್ ಸೀಮಿತ ಓವರ್‌ಗಳ ತಂಡಕ್ಕೆ ಸೇರಿಕೊಂಡಿದ್ದಾರೆ. ಆಲ್‌ರೌಂಡರ್ ಕ್ರೀಸ್ ವೋಕ್ಸ್ ಏಕದಿನ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದು ಜೋ ಡೆನ್ಲಿ ಟಿ20 ತಂಡದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಇಂಗ್ಲೆಂಡ್ ಟಿ20 ತಂಡ ಹೀಗಿದೆ

ಇಂಗ್ಲೆಂಡ್ ಟಿ20 ತಂಡ ಹೀಗಿದೆ

ಇಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಜೋ ಡೆನ್ಲಿ, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಆದಿಲ್ ರಶೀದ್, ಮತ್ತು ಮಾರ್ಕ್ ವುಡ್. (ಮೀಸಲು: ಲಿಯಾಮ್ ಲಿವಿಂಗ್ಸ್ಟೋನ್, ಸಾಕಿಬ್ ಮಹಮೂದ್)

ಇಂಗ್ಲೆಂಡ್ ಏಕದಿನ ತಂಡ

ಇಂಗ್ಲೆಂಡ್ ಏಕದಿನ ತಂಡ

ಇಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಆದಿಲ್ ರಶೀದ್, ಜೋ ರೂಟ್, ಕ್ರಿಸ್ ವೋಕ್ಸ್, ಮತ್ತು ಮಾರ್ಕ್ ವುಡ್ (ಮೀಸಲು: ಜೋ ಡೆನ್ಲಿ, ಸಾಕಿಬ್ ಮಹಮೂದ್)

Story first published: Tuesday, September 1, 2020, 15:28 [IST]
Other articles published on Sep 1, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X