Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಾಂಗ್ಲಾದೇಶ vs ಇಂಗ್ಲೆಂಡ್ ಮೊದಲ ಟಿ20: ಟಾಸ್ ರಿಪೋರ್ಟ್, ಆಡುವ ಬಳಗ, Live score

England vs Bangladesh, 1st t20, Live score and Playing XI, Chattogram

ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗುತ್ತಿದೆ. ಮೊದಲ ಪಂದ್ಯ ಚಿತ್ತಗಾಂಗ್‌ನಲ್ಲಿ ಆರಂಭವಾಗಿದ್ದು ಆತಿಥೆಯ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಇಂಗ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಸರಣಿಯಲ್ಲಿ ಇಂಗ್ಲೆಂಡ್ ತಂಡ ಕೆಲ ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಕಣಕ್ಕಿಳಿಯುತ್ತಿದೆ. ಹಾಗಾಗಿ ಯುವ ಆಟಗಾರರಿಗೆ ಅವಕಾಶ ದೊರೆತಿದೆ. ಬಾಂಗ್ಲಾದೇಶದ ಸ್ಪಿನ್ ಬೌಲಿಂಗ್ ಸ್ನೇಹಿ ಪಿಚ್‌ಲ್ಲಿ ಇಂಗ್ಲೆಂಡ್ ತಂಡ ಚುಟುಕು ಮಾದರಿಯಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

Live ಸ್ಕೋರ್ ಹೀಗಿದೆ

1
56817

ಇನ್ನು ಟಿ20 ಸರಣಿಗೂ ಮುನ್ನ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ನೀಡಿದ್ದು ಸರಣಿ ಗೆದ್ದುಕೊಂಡಿತ್ತು. ಮೂರು ಪಂದ್ಯಗಳ ಸರಣಿಯಲ್ಲಿ 2-1 ಅಂತರದಿಂದ ಗೆಲುವು ಸಾಧಿಸಿ ಟ್ರೋಫಿ ಗೆದ್ದುಕೊಂಡಿದೆ. ಹೀಗಾಗಿ ಚುಟುಕು ಮಾದರಿಯಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ.

ಬಾಂಗ್ಲಾದೇಶ ಆಡುವ ಬಳಗ: ರೋನಿ ತಾಲುಕ್ದಾರ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೋ, ಶಕೀಬ್ ಅಲ್ ಹಸನ್ (ನಾಯಕ), ಶಮೀಮ್ ಹೊಸೈನ್, ಅಫೀಫ್ ಹೊಸೈನ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್
ಬೆಂಚ್: ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತನ್ವಿರ್ ಇಸ್ಲಾಂ, ರೆಜೌರ್ ರೆಹಮಾನ್ ರಾಜಾ

ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಬೆನ್ ಡಕೆಟ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್
ಬೆಂಚ್: ರೀಸ್ ಟೋಪ್ಲಿ, ರೆಹಾನ್ ಅಹ್ಮದ್

Story first published: Thursday, March 9, 2023, 14:58 [IST]
Other articles published on Mar 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+