For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಜೋ ರೂಟ್ ಅಜೇಯ ಶತಕ, ಇಂಗ್ಲೆಂಡ್‌ಗೆ ಮುನ್ನಡೆ

England vs India, 2nd Test, Highlights, Joe Root Unbeaten Century

ಲಂಡನ್: ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 27 ರನ್ ಮುನ್ನಡೆ ಗಳಿಸಿದೆ. ನಾಯಕ ಜೋ ರೂಟ್ ಅವರ ಅಜೇಯ ಶತಕ ಮತ್ತು ಜಾನಿ ಬೇರ್ಸ್ಟೋವ್ ಅರ್ಧ ಶತಕ, ರೋರಿ ಬರ್ನ್ಸ್ ರನ್ ಕೊಡುಗೆಯೊಂದಿಗೆ ಆತಿಥೇಯ ಇಂಗ್ಲೆಂಡ್ ಮುನ್ನಡೆ ಸಾಧಿಸಿದೆ. ಆಗಸ್ಟ್‌ 15ರ ಭಾನುವಾರ ಭಾರತ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಲಿದೆ.

ಶನಿವಾರ (ಆಗಸ್ಟ್ 14) ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 126.1 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ಉತ್ತಮ ರನ್ ಕಲೆಹಾಕಿ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದರೆ ಪಂದ್ಯ ಗೆಲ್ಲುವ ಸಾಧ್ಯತೆಯಿದೆ.

ಭಾರತದ ಇನ್ನಿಂಗ್ಸ್‌ನಲ್ಲಿ ಸ್ಕೋರ್‌ ಪಟ್ಟಿ, ಬೌಲಿಂಗ್
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8 ರನ್‌ ಬಾರಿಸಿದರು. ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತು. ಇದು ರಾಹುಲ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಾರಿಸಿದ 6ನೇ ಶತಕ. ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಪ್ರಮುಖ 5 ವಿಕೆಟ್‌ ಉರುಳಿಸಿ ಗಮನ ಸೆಳೆದರು. 29 ಓವರ್‌ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದರು. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್‌ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು. ಇನ್ನು ಆಲಿ ರಾಬಿನ್ಸನ್ 73 ರನ್‌ಗೆ 2, ಮಾರ್ಕ್ ವುಡ್ 91 ರನ್‌ಗೆ 2, ಮೊಯೀನ್ ಅಲಿ 53 ರನ್‌ ಗೆ 1 ವಿಕೆಟ್ ಪಡೆದರು. ಈಗ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಆಡುತ್ತಿದೆ. ಅಂದ್ಹಾಗೆ ಭಾರತ ತಂಡ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 300+ ರನ್‌ ಗಳಿಸಿದವತ್ತು ಪಂದ್ಯ ಸೋತಿದ್ದೇ ಇಲ್ಲ. ಹೀಗಾಗಿ ದ್ವಿತೀಯ ಟೆಸ್ಟ್‌ನಲ್ಲಿ ಭಾರತ ಗೆಲ್ಲುವ ನಿರೀಕ್ಷೆಯಿದೆ.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಸ್ಕೋರ್‌
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 49, ಡೊಮಿನಿಕ್ ಸಿಬ್ಲಿ 11, ಹಸೀಬ್ ಹಮೀದ್ 0, ಜೋ ರೂಟ್ 180, ಜಾನಿ ಬೈರ್‌ಸ್ಟೊವ್ 57, ಜೋಸ್ ಬಟ್ಲರ್ 23, ಮೊಯೀನ್ ಅಲಿ 27, ಸ್ಯಾಮ್ ಕರನ್ , ಒಲ್ಲಿ ರಾಬಿನ್ಸನ್ 6, ಮಾರ್ಕ್ ವುಡ್ 5 ರನ್ ಬಾರಿಸಿದರು. ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಇಶಾಂತ್ ಶರ್ಮಾ 3, ಮೊಹಮ್ಮದ್ ಶಮಿ 2, ಮೊಹಮ್ಮದ್ ಸಿರಾಜ್ 4 ವಿಕೆಟ್‌ನಿಂದ ಗಮನ ಸೆಳೆದರು.

ಇಂಗ್ಲೆಂಡ್ ಪ್ಲೇಯಿಂಗ್ XI/ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Story first published: Sunday, August 15, 2021, 0:19 [IST]
Other articles published on Aug 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+