For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್, Live: ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಉತ್ತಮ ರನ್

England vs India, 2nd Test - Live Cricket, India score 364 runs in first innings

ಲಂಡನ್: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಉತ್ತಮ ರನ್ ಬಾರಿಸಿದೆ. 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು ಭಾರತ 364 ರನ್ ಗಳಿಸಿದೆ. ಕೆಎಲ್ ರಾಹುಲ್ ಶತಕ, ರೋಹಿತ್ ಶರ್ಮಾ ಅರ್ಧ ಶತಕ ಮತ್ತು ವಿರಾಟ್ ಕೊಹ್ಲಿ, ರಿಷಭ್ ಪಂತ್‌, ರವೀಂದ್ರ ಜಡೇಜಾ ರನ್ ಕೊಡುಗೆಯಿಂದ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಉತ್ತಮ ರನ್ ಗಳಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಉತ್ತಮ ಜೊತೆಯಾಟ ನೀಡಿದರು. ಇಬ್ಬರೂ 126 ರನ್‌ ಜತೆಯಾಟ ನೀಡಿದರು. ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ಜೊತೆಯಾಟಕ್ಕಾಗಿ ರೋಹಿತ್ ಮತ್ತು ರಾಹುಲ್ ದಾಖಲೆ ಪಟ್ಟಿ ಕೂಡ ಸೇರಿಸಿಕೊಂಡಿದ್ದಾರೆ.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49713

ಕೆಎಲ್ ರಾಹುಲ್ ವೃತ್ತಿ ಬದುಕಿನ 6ನೇ ಶತಕ
ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8, ಜಸ್‌ಪ್ರೀತ್‌ ಬೂಮ್ರಾ 0, ಮೊಹಮ್ಮದ್ ಸಿರಾಜ್ 0 ರನ್‌ನೊಂದಿಗೆ ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತು. ಇದು ರಾಹುಲ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಾರಿಸಿದ 6ನೇ ಶತಕ. ಭಾರತದ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಶೇಷ ದಾಖಲೆ ಕಾರಣರಾಗಿದ್ದಾರೆ. ಇಂಗ್ಲೆಂಡ್‌ಗೆ ಪ್ರವಾಸ ಬಂದು ಟೆಸ್ಟ್ ಪಂದ್ಯ ಆಡುವಾಗ ಮೊದಲ ಇನ್ನಿಂಗ್ಸ್‌ನಲ್ಲಿ ಅತೀ ಹೆಚ್ಚಿಗೆ ಆರಂಭಿಕ ಜೊತೆಯಾಟ ನೀಡಿದ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಗುರುತಿಸಿಕೊಂಡಿದ್ದಾರೆ. 126 ರನ್ ಸಾಧನೆಯೊಂದಿಗೆ ರೋಹಿತ್, ರಾಹುಲ್ ಈ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಮತ್ತು ಮಾರ್ಕ್ ಟೇಲರ್ ಇದ್ದಾರೆ. 1993ರಲ್ಲಿ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 128 ರನ್ ಗಳಿಸಿದ್ದರು.

ಜೇಮ್ಸ್ ಆ್ಯಂಡರ್ಸನ್ ಮಾರಕ ಬೌಲಿಂಗ್
ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಪ್ರಮುಖ 5 ವಿಕೆಟ್‌ ಉರುಳಿಸಿ ಗಮನ ಸೆಳೆದಿದ್ದಾರೆ. 29 ಓವರ್‌ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದಾರೆ. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್‌ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು. ಇನ್ನು ಆಲಿ ರಾಬಿನ್ಸನ್ 73 ರನ್‌ಗೆ 2, ಮಾರ್ಕ್ ವುಡ್ 91 ರನ್‌ಗೆ 2, ಮೊಯೀನ್ ಅಲಿ 53 ರನ್‌ ಗೆ 1 ವಿಕೆಟ್ ಪಡೆದರು. ಈಗ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಆಡುತ್ತಿದೆ. ಅಂದ್ಹಾಗೆ ಭಾರತ ತಂಡ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 300+ ರನ್‌ ಗಳಿಸಿದವತ್ತು ಪಂದ್ಯ ಸೋತಿದ್ದೇ ಇಲ್ಲ.

ಇಂಗ್ಲೆಂಡ್ ಪ್ಲೇಯಿಂಗ್ XI/ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Story first published: Saturday, August 14, 2021, 11:41 [IST]
Other articles published on Aug 14, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+