ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌, Live ಸ್ಕೋರ್‌: ರಿಷಭ್ ಪಂತ್‌ ಬ್ಯಾಟಿಂಗ್‌

ಲಂಡನ್: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಇಂದು (ಆಗಸ್ಟ್ 13) ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್‌ ಪಂದ್ಯದ ದ್ವಿತೀಯ ದಿನದಾಟ ನಡೆಯುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್‌ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ಮೊದಲ ಇನ್ನಿಂಗ್ಸ್‌ ಆಡುತ್ತಿದೆ. ಭಾರತ ಈಗಾಗಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದೆ. 92ನೇ ಓವರ್‌ ವೇಳೆಗೆ ಯುವ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಆಡುತ್ತಿದ್ದರು.

ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್!ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್!

ಭಾರತ ಪರ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಉತ್ತಮ ಬುನಾದಿ ಹಾಕಿಕೊಟ್ಟಿದ್ದರು. ರೋಹಿತ್ 83, ರಾಹುಲ್ 129 ರನ್ ಕೊಡುಗೆ ನೀಡಿದ್ದರು. ಆದರೆ ತಂಡದ ಮಧ್ಯಮ ಕ್ರಮಾಂಕದ ವೈಫಲ್ಯ ಹಾಗೇ ಮುಂದುವರೆದಿದೆ. ಚೇತೇಶ್ವರ್ ಪೂಜಾರ (9), ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1 ರನ್ ಬಾರಿಸಿ ನಿರ್ಗಮಿಸಿದ್ದಾರೆ.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49713

 ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್! ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್!

ಪಂದ್ಯಕ್ಕೆ ಮಳೆಯ ಅಡ್ಡಿ
ಭಾರತ vs ಇಂಗ್ಲೆಂಡ್ ಮೊದಲನೇ ಟೆಸ್ಟ್‌ ಪಂದ್ಯ ಮಳೆಗೆ ಆಹುತಿಯಾಗಿತ್ತು. ಮಳೆಯಿಂದಾಗಿ ಪಂದ್ಯ ಆಗಾಗ ನಿಲುಗಡೆಯಾಗಿದ್ದರಿಂದ ಪಂದ್ಯ ಡ್ರಾದೊಂದಿಗೆ ಅಂತ್ಯ ಕಂಡಿತ್ತು. ದ್ವಿತೀಯ ಪಂದ್ಯವೂ ಕೂಡ ಮಳೆಯಿಂದಾಗಿ ಟಾಸ್ ತಡವಾಗಿ ನಡೆದಿತ್ತು. ಪಂದ್ಯದ ಆರಂಭವೂ ವಿಳಂಬವಾಗಿತ್ತು. ಆದರೆ ದ್ವಿತೀಯ ದಿನದಾಟ ಎಂದಿನಂತೆ ಭಾರತೀಯ ಕಾಲಮಾನ 3.30 PMಗೆ ಆರಂಭವಾಗಿತ್ತು. ದ್ವಿತೀಯ ಟೆಸ್ಟ್‌ ಪಂದ್ಯದಿಂದ ಇಂಗ್ಲೆಂಡ್‌ ತಂಡದಿಂದ ಸ್ಟುವರ್ಟ್ ಬ್ರಾಡ್ ಹೊರ ಬಿದ್ದಿದ್ದಾರೆ. ಗಾಯದ ಭೀತಿಯಲ್ಲಿದ್ದ ಜೇಮ್ಸ್ ಆ್ಯಂಡರ್ಸನ್ ಮೈದಾನಕ್ಕಿಳಿದಿದ್ದು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಭಾರತ ತಂಡದಲ್ಲಿ ಅನುಭವಿ ಸ್ಪಿನ್ನರ್ ಆರ್‌ ಅಶ್ವಿನ್ ಬೆಂಚ್‌ನಲ್ಲಿದ್ದು, ಅವರ ಜಾಗಕ್ಕೆ ಅನುಭವಿ ವೇಗಿ ಇಶಾಂತ್ ಶರ್ಮಾ ಬಂದಿದ್ದಾರೆ.

ಐಪಿಎಲ್ 2021: ದುಬೈಗೆ ಹಾರಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರುಐಪಿಎಲ್ 2021: ದುಬೈಗೆ ಹಾರಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು

ಒಂದನೇ ದಿನದಾಟದ ಅಂತ್ಯಕ್ಕೆ ಭಾರತ 276 ರನ್
ಗುರುವಾರ (ಆಗಸ್ಟ್ 12) ಮೊದಲನೇ ದಿನದಾಟದ ಅಂತ್ಯಕ್ಕೆ ಭಾರತ 90 ಓವರ್‌ಗೆ ಮೂರು ವಿಕೆಟ್ ಕಳೆದು 276 ರನ್ ಗಳಿಸಿತ್ತು. ಇಂಗ್ಲೆಂಡ್‌ನಿಂದ ಜೇಮ್ಸ್ ಆ್ಯಂಡರ್ಸನ್ 52 ರನ್‌ಗೆ 2 ವಿಕೆಟ್, ಆಲಿ ರಾಬಿನ್ಸನ್ 47 ರನ್‌ಗೆ 1 ವಿಕೆಟ್ ಪಡೆದಿದ್ದರು. ದಿನದಾಟದ ಅಂತ್ಯಕ್ಕೆ ಕೆಎಲ್ ರಾಹುಲ್ 248 ಎಸೆತಗಳಲ್ಲಿ 127 ರನ್ ಬಾರಿಸಿದ್ದರು. ಇದರಲ್ಲಿ 12 ಫೋರ್ಸ್, 1 ಸಿಕ್ಸರ್ ಸೇರಿತ್ತು. ರಾಹುಲ್ ಜೊತೆ ಉಪನಾಯಕ ಅಜಿಂಕ್ಯ ರಹಾನೆ ಆಡುತ್ತಿದ್ದರು. ನಾಯಕ ವಿರಾಟ್ ಕೊಹ್ಲಿ 103 ಎಸೆತಗಳಲ್ಲಿ 42 ರನ್ ಕೊಡುಗೆ ನೀಡಿದ್ದರು. ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಶೇಷ ದಾಖಲೆ ಕಾರಣರಾಗಿದ್ದಾರೆ. ಇಂಗ್ಲೆಂಡ್‌ಗೆ ಪ್ರವಾಸ ಬಂದು ಟೆಸ್ಟ್ ಪಂದ್ಯ ಆಡುವಾಗ ಮೊದಲ ಇನ್ನಿಂಗ್ಸ್‌ನಲ್ಲಿ ಅತೀ ಹೆಚ್ಚಿಗೆ ಆರಂಭಿಕ ಜೊತೆಯಾಟ ನೀಡಿದ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಗುರುತಿಸಿಕೊಂಡಿದ್ದಾರೆ. 126 ರನ್ ಸಾಧನೆಯೊಂದಿಗೆ ರೋಹಿತ್, ರಾಹುಲ್ ಈ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಮತ್ತು ಮಾರ್ಕ್ ಟೇಲರ್ ಇದ್ದಾರೆ. 1993ರಲ್ಲಿ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 128 ರನ್ ಗಳಿಸಿದ್ದರು.

 ಮಾಧ್ಯಮಗೋಷ್ಠಿಯಲ್ಲಿ ರೋಹಿತ್ ಶರ್ಮಾ ಸೆಲ್ಯೂಟ್ ಮಾಡಿದ್ದೇಕೆ ಗೊತ್ತಾ!: ವಿಡಿಯೋ ಮಾಧ್ಯಮಗೋಷ್ಠಿಯಲ್ಲಿ ರೋಹಿತ್ ಶರ್ಮಾ ಸೆಲ್ಯೂಟ್ ಮಾಡಿದ್ದೇಕೆ ಗೊತ್ತಾ!: ವಿಡಿಯೋ

ಭಾರತ ಸರಣಿ ಗೆದ್ದರೆ ಇತಿಹಾಸ ನಿರ್ಮಾಣ
ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿಯೊಂದನ್ನು ಗೆಲ್ಲದೆ ಭಾರತ ಬಹಳ ವರ್ಷಗಳನ್ನು ಕಳೆದಿದೆ. ತಂಡ ಬರೋಬ್ಬರಿ 14 ವರ್ಷಗಳನ್ನು ಕಳೆದಿದೆ. ಕಳೆದ ಬಾರಿ ಭಾರತೀಯ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿ ಗೆದ್ದಿದ್ದೆಂದರೆ 2007ರಲ್ಲಿ. 2007ರಲ್ಲಿ ಇಂಗ್ಲೆಂಡ್‌ಗೆ ಪ್ರವಾಸ ಹೋಗಿದ್ದ ರಾಹುಲ್ ದ್ರಾವಿಡ್ ನಾಯಕತ್ವದ ತಂಡ ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0ಯಿಂದ ಗೆದ್ದಿತ್ತು. ಈ ವೇಳೆ ಎರಡು ಪಂದ್ಯಗಳು ಡ್ರಾ ಅನ್ನಿಸಿದ್ದವು. ದ್ವಿತೀಯ ಟೆಸ್ಟ್‌ನಲ್ಲಿ ಭಾರತ 7 ವಿಕೆಟ್ ಜಯ ಗಳಿಸಿತ್ತು. ಅದಾದ ಬಳಿಕ 2011, 2014 ಮತ್ತು 2018ರಲ್ಲಿ ಭಾರತ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿ ಆಡಿತ್ತು. ಇದರಲ್ಲಿ ಯಾವುದರಲ್ಲೂ ಗೆದ್ದಿಲ್ಲ. ಹೀಗಾಗಿ ಈ ಬಾರಿ ಗೆಲ್ಲಲು ತಂಡಕ್ಕೆ ಅವಕಾಶವಿದೆ. ಮುಂಬರಲಿರುವ ಟೆಸ್ಟ್‌ ಸರಣಿಯಲ್ಲಾದರೂ ವಿರಾಟ್ ಕೊಹ್ಲಿ ಪಡೆ ಗೆಲ್ಲುತ್ತಾ ಕಾದು ನೋಡಬೇಕಿದೆ. ಒಂದು ಪಂದ್ಯ ಈಗಾಗಲೇ ಡ್ರಾ ಅನ್ನಿಸಿರುವುದರಿಂದ ಇನ್ನುಳಿದ ಪಂದ್ಯಗಳನ್ನು ಭಾರತ ಗೆಲ್ಲಬೇಕು. ದ್ವಿತೀಯ ಪಂದ್ಯಕ್ಕೆ ಮಳೆ ಅಡ್ಡಿಯಾಗದಿದ್ದರೆ ಭಾರತ ಗೆಲ್ಲುವ ನಿರೀಕ್ಷೆಯಿದೆ. ಸ್ಟುವರ್ಟ್ ಬ್ರಾಡ್, ಬೆನ್ ಸ್ಟೋಕ್ಸ್ ತಂಡದಲ್ಲಿ ಇಲ್ಲದಿರುವುದರಿಂದ ಭಾರತ ಹೆಚ್ಚು ಅನುಕೂಲ ಪಡೆಯಬಹುದಾಗಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI
ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

IND vs ENG 2nd Test : Rohit Sharma ಅವರ ಸೆಲ್ಯೂಟ್ ಹಿಂದಿನ ಕಾರಣವೇನು | Oneindia Kannada

ಭಾರತ ಪ್ಲೇಯಿಂಗ್ XI
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

For Quick Alerts
ALLOW NOTIFICATIONS
For Daily Alerts
Story first published: Friday, August 13, 2021, 15:54 [IST]
Other articles published on Aug 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X