ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, ದ್ವಿತೀಯ ಟೆಸ್ಟ್‌ ಪಂದ್ಯ, Live ಸ್ಕೋರ್

England vs India, 2nd Test Match, Day 4, Live Score

ಲಂಡನ್‌: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ದ್ವಿತೀಯ ಪಂದ್ಯವಿದು. ಟೀಮ್ ಇಂಡಿಯಾ ಈಗ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 27 ರನ್‌ಗಳ ಹಿನ್ನಡೆ ಅನುಭವಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 12 ಓವರ್‌ಗೂ ಮುನ್ನವೇ ಭಾರತ ಆರಂಭಿಕ ವಿಕೆಟ್ ಗಳನ್ನು ಕಳೆದುಕೊಂಡಿದೆ. ಕೆಎಲ್ ರಾಹುಲ್ 5 ರನ್ ಬಾರಿಸಿ ನಿರ್ಗಮಿಸಿದ್ದಾರೆ. ಮತ್ತೊಬ್ಬ ಓಪನರ್ ರೋಹಿತ್ ಶರ್ಮಾ ಕೂಡ 21 ರನ್‌ಗೆ ವಿಕೆಟ್ ಒಪ್ಪಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಒಲಿಂಪಿಕ್ಸ್ ಸಾಧಕರು: ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಪ್ರಶಂಸೆ75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಒಲಿಂಪಿಕ್ಸ್ ಸಾಧಕರು: ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ಪ್ರಶಂಸೆ

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತ್ತು. ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿತ್ತು. ಭಾರತದ ಪರ ಕೆಎಲ್ ರಾಹುಲ್ ಶತಕ ಬಾರಿಸಿದರೆ, ಇಂಗ್ಲೆಂಡ್ ಪರ ನಾಯಕ ಜೋ ರೂಟ್ ಅಜೇಯ ಶತಕ ಬಾರಿಸಿ ತಂಡದ ಮುನ್ನಡೆಗೆ ಕಾರಣರಾಗಿದ್ದಾರೆ.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌ ಪಂದ್ಯ, Live ಸ್ಕೋರ್

1
49713

ಭಾರತದ ಆರಂಭಿಕ ಇನ್ನಿಂಗ್ಸ್‌ ಸ್ಕೋರ್
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದಿಂದ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8 ರನ್‌ ಬಾರಿಸಿದರು. ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತು. ರಾಹುಲ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಾರಿಸಿದ 6ನೇ ಶತಕವಿದು. ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಪ್ರಮುಖ 5 ವಿಕೆಟ್‌ ಉರುಳಿಸಿ ಗಮನ ಸೆಳೆದರು. 29 ಓವರ್‌ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದರು. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್‌ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು. ಇನ್ನು ಆಲಿ ರಾಬಿನ್ಸನ್ 73 ರನ್‌ಗೆ 2, ಮಾರ್ಕ್ ವುಡ್ 91 ರನ್‌ಗೆ 2, ಮೊಯೀನ್ ಅಲಿ 53 ರನ್‌ ಗೆ 1 ವಿಕೆಟ್ ಪಡೆದರು. ಈಗ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಆಡುತ್ತಿದೆ. ಅಂದ್ಹಾಗೆ ಭಾರತ ತಂಡ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 300+ ರನ್‌ ಗಳಿಸಿದವತ್ತು ಪಂದ್ಯ ಸೋತಿದ್ದೇ ಇಲ್ಲ. ಹೀಗಾಗಿ ದ್ವಿತೀಯ ಟೆಸ್ಟ್‌ನಲ್ಲಿ ಭಾರತ ಗೆಲ್ಲುವ ನಿರೀಕ್ಷೆಯಿದೆ.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ ಸ್ಕೋರ್‌
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 49, ಡೊಮಿನಿಕ್ ಸಿಬ್ಲಿ 11, ಹಸೀಬ್ ಹಮೀದ್ 0, ಜೋ ರೂಟ್ 180, ಜಾನಿ ಬೈರ್‌ಸ್ಟೊವ್ 57, ಜೋಸ್ ಬಟ್ಲರ್ 23, ಮೊಯೀನ್ ಅಲಿ 27, ಸ್ಯಾಮ್ ಕರನ್ , ಒಲ್ಲಿ ರಾಬಿನ್ಸನ್ 6, ಮಾರ್ಕ್ ವುಡ್ 5 ರನ್ ಬಾರಿಸಿದರು. ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಇಶಾಂತ್ ಶರ್ಮಾ 3, ಮೊಹಮ್ಮದ್ ಶಮಿ 2, ಮೊಹಮ್ಮದ್ ಸಿರಾಜ್ 4 ವಿಕೆಟ್‌ನಿಂದ ಗಮನ ಸೆಳೆದರು.

ಕಾಲೆಳೆದ ಆಂಗ್ಲರಿಗೆ ಶಮಿ ಬುಮ್ರಾ ಮೈದಾನದಲ್ಲೇ ತಿರುಗೇಟು ಕೊಟ್ಟ ವಿಡಿಯೊ ವೈರಲ್ | Oneindia Kannada

ಇಂಗ್ಲೆಂಡ್ ಪ್ಲೇಯಿಂಗ್ XI/ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Story first published: Sunday, August 15, 2021, 16:42 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X