For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್, ದ್ವಿತೀಯ ಪಂದ್ಯ, 5ನೇ ದಿನ Live ಸ್ಕೋರ್, ಶಮಿ, ಬೂಮ್ರಾ ಭರ್ಜರಿ ಹೋರಾಟ

England vs India, 2nd Test Match, Day 5, Live Score

ಲಂಡನ್, ಆಗಸ್ಟ್ 16: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್‌ ಪಂದ್ಯದ ಅಂತಿದ ದಿನದಾಟ ನಡೆಯುತ್ತಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ದ್ವಿತೀಯ ಪಂದ್ಯ ಇದಾಗಿದ್ದು ಇಂದು ಈ ಪಂದ್ಯದ ಕೊನೆಯ ದಿನವಾಗಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ವೈಫಲ್ಯವನ್ನು ಅನುಭವಿಸಿದ್ದರೂ ಅಂತಿಮ ಹಂತದಲ್ಲಿ ಬಾಲಂಗೋಚಿಗಳಿಂದ ಅದ್ಭುತವಾದ ಹೋರಾಟ ವ್ಯಕ್ತವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 27 ರನ್‌ಗಳ ಹಿನ್ನಡೆ ಅನುಭವಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸುತ್ತಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಂತ್ಯಕ್ಕೆ 181 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ರಿಷಭ್ ಪಂತ್ ಹಾಗೂ ಇಶಾಂತ್ ಶರ್ಮಾ ಅವರ ವಿಕೆಟ್ ಭಾರತ ಕಳೆದುಕೊಂಡಿದ್ದರೂ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಅದ್ಭುತ ಹೋರಾಟ ನಡೆಸುವ ಮೂಲಕ ಭಾರತ ಸಾಲಿನ ಮೊತ್ತದ ಗುರಿಯನ್ನು ನೀಡುವಂತಾಗಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಅದರಲ್ಲೂ ಆರಂಭಿಕ ಆಟಗಾರರಿಂದ ಹಾಗೂ ಸ್ವತಃ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಕಳಪೆ ಪ್ರದರ್ಶನ ನೀಡಿರುವುದು ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ. ಆದರೆ ಸತತವಾಗಿ ವೈಫಲ್ಯವನ್ನು ಅನುಭವಿತ್ತಾ ಬಂದಿರುವ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಈ ಇನ್ನಿಂಗ್ಸ್‌ನಲ್ಲಿ ತಮಡದ ಕೆಲ ಕಾಲ ಆಧಾರವಾದರು. ಈ ಮೂಲಕ ತಂಡವನ್ನು ಭಾರೀ ಕುಸಿತದಿಂದ ಪಾರು ಮಾಡಿದ್ದರು. ಈ ಜೋಡಿ ನಾಲ್ಕನೇ ವಿಕೆಟ್‌ಗೆ 100 ರನ್‌ಗಳ ಜೊತೆಯಾಟವನ್ನು ನೀಡಿತು.

ಪೂಜಾರ ಹಾಗೂ ರಹಾನೆ ಜೋಡಿ ಬೇರ್ಪಟ್ಟ ನಂತರ ಮತ್ತೊಮ್ಮೆ ಭಾರತದ ಕುಸಿತ ಆರಂಭವಾಯಿತು. ಪೂಜಾರ ವಿಕೆಟ್ ಕಳೆದುಕೊಂಡ ಕೆಲವೇ ಸಮಯಗಳ ಅಂತರದಲ್ಲಿ ಅಜಿಂಕ್ಯ ರಹಾನೆ ಕೂಡ ಔಟಾದರು. ಬಳಿಕ ರವೀಂದ್ರ ಜಡೇಜಾ ಕೇವಲ 3 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಅಂತಿಮ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ರಿಷಬ್ ಪಂತ್ ಕೂಡ 22 ರನ್‌ಗಳಿಗೆ ತಮ್ಮ ಆಟವನ್ನು ಮುಗಿಸಿದ್ದಾರೆ. ಭಾರತ 200 ರನ್‌ಗಳ ಮುನ್ನಡೆಯನ್ನು ಸಾಧಿಸಿ ಮುನ್ನುಗ್ಗುತ್ತಿದೆ.

Live ಸ್ಕೋರ್‌ ಕಾರ್ಡ್ ಮಾಹಿತಿ ಇಲ್ಲಿದೆ:

1
49713

ಭಾರತ ಆಡುವ ಬಳಗ:
ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

Mohammed Siraj ತಮ್ಮ celebration ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ | Oneindia Kannada

ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜೋ ರೂಟ್ (ನಾಯಕ), ಹಸೀಬ್ ಹಮೀದ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆ್ಯಂಡರ್ಸನ್, ಮಾರ್ಕ್ ವುಡ್.
ಬೆಂಚ್: ಝ್ಯಾಕ್ ಕ್ರಾಲಿ, ಕ್ರೇಗ್ ಓವರ್‌ಟನ್, ಡೇನಿಯಲ್ ಲಾರೆನ್ಸ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

Story first published: Monday, August 16, 2021, 17:00 [IST]
Other articles published on Aug 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+