ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌, Live ಸ್ಕೋರ್, ಪ್ಲೇಯಿಂಗ್ XI

ಲಾರ್ಡ್ಸ್: ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿಂದು ದ್ವಿತೀಯ ಟೆಸ್ಟ್‌ ಪಂದ್ಯಕ್ಕಾಗಿ ಭಾರತ ಮತ್ತು ಇಂಗ್ಲೆಂಡ್‌ ತಂಡಗಳು ಕಣಕ್ಕಿಳಿದಿವೆ. ಆರಂಭಿಕ ಪಂದ್ಯ ಮಳೆಯಿಂದಾಗಿ ಡ್ರಾ ಎನಿಸಲ್ಪಟ್ಟಿತ್ತು. ದ್ವಿತೀಯ ಪಂದ್ಯಕ್ಕೂ ಮಳೆ ಸಮಸ್ಯೆಯಾಗುವ ನಿರೀಕ್ಷೆಯಿದೆ. ಮಳೆಯಿಂದಾಗಿ ದ್ವಿತೀಯ ಪಂದ್ಯದ ಟಾಸ್ ವಿಳಂಬಗೊಂಡಿತ್ತು. 3.20 PM ವೇಳೆಗೆ ಟಾಸ್ ನಡೆದಿದ್ದು, ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಪಂದ್ಯದ ಆರಂಭ ಕೂಡ ವಿಳಂಬಗೊಂಡಿತ್ತು. 3.30 PMಗೆ ಶುರುವಾಗಬೇಕಿದ್ದ ಪಂದ್ಯ 4 PM ಹೊತ್ತಾದರೂ ಆರಂಭವಾಗಿರಲಿಲ್ಲ.

ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಹೆಚ್ಚು ಪಂದ್ಯ ಗೆದ್ದಿರುವರಾರು ಗೊತ್ತಾ?ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಹೆಚ್ಚು ಪಂದ್ಯ ಗೆದ್ದಿರುವರಾರು ಗೊತ್ತಾ?

ನ್ಯಾಟಿಂಗ್‌ಹ್ಯಾಮ್ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 65.4 ಓವರ್‌ಗೆ 183 ರನ್ ಗಳಿಸಿದ್ದರೆ, ಭಾರತ ಮೊದಲನೇ ಇನ್ನಿಂಗ್ಸ್‌ನಲ್ಲಿ 84.5ನೇ ಓವರ್‌ಗೆ 278 ರನ್ ಗಳಿಸಿ ಮುನ್ನಡೆ ಸಾಧಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 85.5ನೇ ಓವರ್‌ಗೆ 303 ರನ್ ಗಳಿಸಿದ್ದರೆ, ಭಾರತ ದ್ವಿತೀಯ ಇನ್ನಿಂಗ್ಸ್‌ನಲ್ಲಿ 14 ಓವರ್‌ಗೆ 1 ವಿಕೆಟ್ ಕಳೆದು 52 ರನ್ ಗಳಿಸಿತ್ತು.

ಭಾರತ vs ಇಂಗ್ಲೆಂಡ್, 2ನೇ ಟೆಸ್ಟ್‌, Live ಸ್ಕೋರ್‌ಕಾರ್ಡ್

1
49713

ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಇತ್ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಗಾಯಕ್ಕೀಡಾಗಿ ಪಂದ್ಯದಿಂದ ಹೊರ ಬಿದ್ದಿದ್ದಾರೆ. ಆಲ್ ರೌಂಡರ್ ಬೆನ್ ಸ್ಟೋಕ್ಸ್, ಬೌಲಿಂಗ್‌ ಆಲ್ ರೌಂಡರ್ ಜೋಫ್ರಾ ಆರ್ಚರ್ ಅವರ ಬಲ ಕೂಡ ತಂಡಕ್ಕೆ ಇಲ್ಲವಾಗಿದೆ. ಆದರೆ ತಂಡದಿಂದ ಹೊರಗುಳಿಯುವ ಭೀತಿಯಲ್ಲಿದ್ದ ಜೇಮ್ಸ್ ಆ್ಯಂಡರ್ಸನ್ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಮೊಯೀನ್ ಅಲಿ ಕೂಡ ಇಂದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.

ಬಾಲಿವುಡ್ ತಾರೆ ಸಲ್ಮಾನ್ ಖಾನ್ ಭೇಟಿಯಾಗಿ ಕನಸು ನನಸು ಮಾಡಿಕೊಂಡ ಮೀರಾ ಬಾಯಿ ಚಾನುಬಾಲಿವುಡ್ ತಾರೆ ಸಲ್ಮಾನ್ ಖಾನ್ ಭೇಟಿಯಾಗಿ ಕನಸು ನನಸು ಮಾಡಿಕೊಂಡ ಮೀರಾ ಬಾಯಿ ಚಾನು

ಭಾರತ ತಂಡದಲ್ಲಿ ಬಹುತೇಕ ಹಿಂದಿನ ಪಂದ್ಯದ ಆಟಗಾರರೇ ಇವತ್ತೂ ಆಡುತ್ತಿದ್ದಾರೆ. ಭಾರತ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಸರಣಿ ಗೆದ್ದು ಬಹಳ ವರ್ಷಗಳಾಗಿವೆ. 2007ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದ ಟೀಮ್ ಇಂಡಿಯಾ ಟೆಸ್ಟ್‌ ಸರಣಿ ಗೆದ್ದಿದ್ದೇ ಕೊನೆ. ಆ ಬಳಿಕ ಇಲ್ಲೀವರೆಗೂ ಟೆಸ್ಟ್‌ ಸರಣಿ ಗೆದ್ದಿದ್ದಿಲ್ಲ. ವಿರಾಟ್ ಕೊಹ್ಲಿ ಪಡೆಗೆ ಈ ಬಾರಿ ಸರಣಿ ಗೆಲ್ಲಲು ಅವಕಾಶವಿದೆ. ಆದರೆ ಸರಣಿಗೆ ಮಳೆ ಅಡಚಣೆಯಾಗಿದೆ. 20 ಓವರ್‌ ಮುಕ್ತಾಯದ ಒಳಗೆ ಪಂದ್ಯ ಒಂದೆರಡು ಬಾರಿ ಮಳೆಯಿಂದ ನಿಲುಗಡೆಯಾಗಿತ್ತು.

ಇಂಗ್ಲೆಂಡ್ ಪ್ಲೇಯಿಂಗ್ XI
ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

ಲಾರ್ಡ್ಸ್ ಅಂಗಳದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಟಾಪ್ 3 ಪ್ರದರ್ಶನಲಾರ್ಡ್ಸ್ ಅಂಗಳದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಟಾಪ್ 3 ಪ್ರದರ್ಶನ

Virat Kohli ಅದೃಷ್ಟ ನೋಡಿ Rootಗೆ ನಗು ಬಂತು | Oneindia Kannada

ಭಾರತ ಪ್ಲೇಯಿಂಗ್ XI
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, August 12, 2021, 15:43 [IST]
Other articles published on Aug 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X