ಬೌಲಿಂಗ್ ಅಲ್ಲ ಭರ್ಜರಿ ಬ್ಯಾಟಿಂಗ್: ಟೆಸ್ಟ್‌ನಲ್ಲಿ 2ನೇ ಅರ್ಧ ಶತಕ ಚಚ್ಚಿದ ಮೊಹಮ್ಮದ್ ಶಮಿ!

ಲಂಡನ್: ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಟೆಸ್ಟ್ ವೃತ್ತಿ ಬದುಕಿನಲ್ಲಿ ಎರಡನೇ ಅರ್ಧ ಶತಕ ಬಾರಿಸಿದ್ದಾರೆ. ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಅಂಗವಾಗಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶಮಿ ಈ ಸಾಧನೆ ಮಾಡಿದ್ದಾರೆ. 9ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಶಮಿ ಭರ್ಜರಿ ಬ್ಯಾಟಿಂಗ್‌ಗಾಗಿ ಬೆರಗು ಮೂಡಿಸಿದ್ದರು.
9ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಮೊಹಮ್ಮದ್ ಶಮಿ ಮತ್ತು 10ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಮತ್ತೊಬ್ಬ ವೇಗಿ ಜಸ್‌ಪ್ರೀತ್ ಬೂಮ್ರಾ ಅದ್ಭುತ ಜೊತೆಯಾಟ ನೀಡಿದ್ದಾರೆ. ಇಬ್ಬರೂ 78+ ಜೊತೆಯಾಟ ನೀಡಿದ್ದರಿಂದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಮೊತ್ತ 300ರ ಸಮೀಪಕ್ಕೆ ಬಂದಿದೆ. ಪಂದ್ಯದಲ್ಲಿ ಅಜಿಂಕ್ಯ ರಹಾನೆ ಬಾರಿಸಿದ 61 ರನ್ ಬಿಟ್ಟರೆ, ಶಮಿ ಬಾರಿಸಿರುವ 56 ರನ್ ದೊಡ್ಡದೆನಿಸಿದೆ.
ಭಾರತ vs ಇಂಗ್ಲೆಂಡ್, ದ್ವಿತೀಯ ಟೆಸ್ಟ್, Live ಸ್ಕೋರ್‌ಕಾರ್ಡ್

ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ ಭರ್ಜರಿ ಆಟ
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಪೇರಿಸಿತ್ತು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿತ್ತು. ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಂದ ಅಂಥ ಕೊಡುಗೆ ಬಾರದಿದ್ದರಿಂದ ಭಾರತ ಕೊಂಚ ಒತ್ತಡದಲ್ಲಿತ್ತು. ಆದರೆ ಬೌಲರ್‌ಗಳಾದ ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಶಮಿ ಅದ್ಭುತ ಜೊತೆಯಾಟ ಭಾರತದ ರನ್ ಹೆಚ್ಚಿಸಿದೆ. ಇಬ್ಬರೂ ಪಂದ್ಯದಲ್ಲಿ 90 ರನ್ ಕೊಡುಗೆ ನೀಡಿದ್ದಾರೆ. ಸೋಮವಾರ (ಆಗಸ್ಟ್ 16) ಐದನೇ ದಿನದಾಟದಲ್ಲಿ ಲಂಚ್ ವೇಳೆಗೆ ದ್ವಿತೀಯ ಇನ್ನಿಂಗ್ಸ್ ಆಡುತ್ತಿದ್ದ ಭಾರತ, 109.3ನೇ ಓವರ್‌ಗೆ 8 ವಿಕೆಟ್ ಕಳೆದು 298 ರನ್ ಗಳಿಸಿತ್ತು. ಇಂಗ್ಲೆಂಡ್ ಗೆಲುವಿಗೆ ಇನ್ನು 272 ರನ್ ಬೇಕಿದೆ.

ದಾಖಲೆ ಬರೆದ ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ
ಲಾರ್ಡ್ಸ್ ಸ್ಟೇಡಿಯಂನಲ್ಲಿ ಈ ಪಂದ್ಯದೊಂದಿಗೆ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ. ಟೆಸ್ಟ್‌ನಲ್ಲಿ ಅತ್ಯಧಿಕ ರನ್ ಆಗಿ ಶಮಿ ಇಲ್ಲಿ ಬಾರಿಸಿರುವ 56+ ರನ್ ಗುರುತಿಸಿಕೊಂಡಿದ್ದರೆ. ಶಮಿ ಮತ್ತು ಜಸ್‌ಪ್ರೀತ್ ಬೂಮ್ರಾ ಅವರ 90 ರನ್ ಜೊತೆಯಾಟವೂ ವಿಶೇಷ ಅನ್ನಿಸಿದೆ. ಅಷ್ಟೇ ಅಲ್ಲ, 2018ರಲ್ಲಿ ಇಂಗ್ಲೆಂಡ್‌ಗೆ ಪ್ರವಾಸ ಹೋಗಿದ್ದಾಗ ಭಾರತದ 9, 10, 11ನೇ ಬ್ಯಾಟಿಂಗ್ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಐದು ಟೆಸ್ಟ್ ಪಂದ್ಯಗಳಲ್ಲಿ 74 ರನ್ ಬಾರಿಸಿದ್ದರು. ಆದರೆ ಇವತ್ತು (ಆಗಸ್ಟ್ 16) ಶಮಿ ಮತ್ತು ಬೂಮ್ರಾ ಇಬ್ಬರೇ 90 ರನ್ ಬಾರಿಸಿ ಆ ದಾಖಲೆ ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿನ ಅರ್ಧ ಶತಕದೊಂದಿಗೆ ಶಮಿ ವೃತ್ತಿ ಬದುಕಿನಲ್ಲಿ ಎರಡನೇ ಅರ್ಧ ಶತಕ ಬಾರಿಸಿದಂತಾಗಿದೆ. ಇದಕ್ಕೂ ಮುನ್ನ ಶಮಿ 2014ರಲ್ಲಿ ನ್ಯಾಟಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಇದೇ ಇಂಗ್ಲೆಂಡ್ ವಿರುದ್ಧ 51 ರನ್ ಬಾರಿಸಿದ್ದರು.

ಘಟಾನುಘಟಿಗಳನ್ನು ಹಿಂದಿಕ್ಕಿದ ಶಮಿ
ಲಾರ್ಡ್ಸ್ ಸ್ಟೇಡಿಯಂನಲ್ಲಿ ಮೊಹಮ್ಮದ್ ಶಮಿ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಘಟಾನುಘಟಿ ಬ್ಯಾಟ್ಸ್‌ಮನ್‌ಗಳಿಗಿಂತಲೂ ಹೆಚ್ಚಿಗೆ ರನ್ ಗಳಿಸಿದ ವಿಶೇಷ ದಾಖಲೆಗೆ ಶಮಿ ಪಾತ್ರರಾಗಿದ್ದಾರೆ. ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶಮಿ ಬಾರಿಸಿರುವ 56 ರನ್, ಲಾರ್ಡ್ಸ್‌ನಲ್ಲಿ ಇನ್ನಿಂಗ್ಸ್ ಒಂದರಲ್ಲಿ ಸಚಿನ್ ತೆಂಡೂಲ್ಕರ್ (ಭಾರತ), ವಿರಾಟ್ ಕೊಹ್ಲಿ (ಭಾರತ), ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ), ಜ್ಯಾಕ್ ಕ್ಯಾಲೀಸ್ (ದಕ್ಷಿಣ ಆಫ್ರಿಕಾ), ಎಬಿ ಡಿ ವಿಲಿಯರ್ಸ್ (ದಕ್ಷಿಣ ಆಫ್ರಿಕಾ), ಚೇತೇಶ್ವರ್ ಪೂಜಾರ (ಭಾರತ) ಬಾರಿಸಿರುವ ರನ್‌ಗಿಂತ ಹೆಚ್ಚೆನಿಸಿದೆ. 53 ಟೆಸ್ಟ್ ಪಂದ್ಯಗಳನ್ನಾಡಿರುವ 584 ರನ್, 191 ವಿಕೆಟ್ ದಾಖಲೆ ಹೊಂದಿದ್ದಾರೆ. ಸೋಮವಾರದ ಪಂದ್ಯದಲ್ಲಿ ಶಮಿಯ 56 (70 ಎಸೆತ) ರನ್‌ನಲ್ಲಿ 6 ಫೋರ್ಸ್, 1 ಸಿಕ್ಸರ್ ಕೂಡ ಸೇರಿತ್ತು. ಮತ್ತೊಬ್ಬ ಬೌಲರ್ ಬೂಮ್ರಾ ಕೂಡ 64 ಎಸೆತಗಳಲ್ಲಿ 34 ರನ್ ಕೊಡುಗೆ ನೀಡಿದ್ದರು.

ಭಾರತದ ಎರಡು ಇನ್ನಿಂಗ್ಸ್‌ಗಳಲ್ಲಿ ರನ್ ಬಾರಿಸಿದವರು
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದಿಂದ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ಚೇತೇಶ್ವರ್ ಪೂಜಾರ 9, ವಿರಾಟ್ ಕೊಹ್ಲಿ 42, ಅಜಿಂಕ್ಯ ರಹಾನೆ 1, ರಿಷಭ್ ಪಂತ್ 37, ರವೀಂದ್ರ ಜಡೇಜಾ 40, ಮೊಹಮ್ಮದ್ ಶಮಿ ೦, ಇಶಾಂತ್ ಶರ್ಮಾ 8 ರನ್ ಬಾರಿಸಿದರು. ಭಾರತ 126.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 364 ರನ್ ಗಳಿಸಿತ್ತು. ಭಾರತದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ ಪ್ರಮುಖ 5 ವಿಕೆಟ್ ಉರುಳಿಸಿ ಗಮನ ಸೆಳೆದರು. 29 ಓವರ್ ಎಸೆದಿದ್ದ ಆ್ಯಂಡರ್ಸನ್ 62 ರನ್ ನೀಡಿ 5 ವಿಕೆಟ್ ಮುರಿದಿದ್ದರು. ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಮತ್ತು ಜಸ್‌ಪ್ರೀತ್ ಬೂಮ್ರಾ ವಿಕೆಟ್ ಗಳನ್ನು ಆ್ಯಂಡರ್ಸನ್ ಕೆಡವಿದರು. ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಬಿಟ್ಟು ಯಾರಿಂದಲೂ ಗಮನಾರ್ಹ ರನ್ ಬರಲಿಲ್ಲ. ಕೆಎಲ್ ರಾಹುಲ್ 5, ರೋಹಿತ್ ಶರ್ಮಾ 21, ಚೇತೇಶ್ವರ್ 45, ನಾಯಕ ವಿರಾಟ್ ಕೊಹ್ಲಿ 20, ಅಜಿಂಕ್ಯ ರಹಾನೆ 61, ರವೀಂದ್ರ ಜಡೇಜಾ 3, ರಿಷಭ್ ಪಂತ್ 22, ಇಶಾಂತ್ ಶರ್ಮಾ 16, ಮೊಹಮ್ಮದ್ ಶಮಿ 56, ಜಸ್‌ಪ್ರೀತ್ ಬೂಮ್ರಾ 34 ರನ್‌ನೊಂದಿಗೆ 109.3 ಓವರ್‌ಗೆ 8 ವಿಕೆಟ್ ಕಳೆದು 298 ರನ್ ಗಳಿಸಿದೆ.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಜೋ ರೂಟ್ ಭರ್ಜರಿ ಆಟ
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ರೋರಿ ಬರ್ನ್ಸ್ 49, ಡೊಮಿನಿಕ್ ಸಿಬ್ಲಿ 11, ಹಸೀಬ್ ಹಮೀದ್ 0, ಜೋ ರೂಟ್ 180, ಜಾನಿ ಬೈರ್‌ಸ್ಟೊವ್ 57, ಜೋಸ್ ಬಟ್ಲರ್ 23, ಮೊಯೀನ್ ಅಲಿ 27, ಸ್ಯಾಮ್ ಕರನ್ , ಒಲ್ಲಿ ರಾಬಿನ್ಸನ್ 6, ಮಾರ್ಕ್ ವುಡ್ 5 ರನ್ ಬಾರಿಸಿದರು. ಇಂಗ್ಲೆಂಡ್ 128 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದು 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಇಶಾಂತ್ ಶರ್ಮಾ 3, ಮೊಹಮ್ಮದ್ ಶಮಿ 2, ಮೊಹಮ್ಮದ್ ಸಿರಾಜ್ 4 ವಿಕೆಟ್‌ನಿಂದ ಗಮನ ಸೆಳೆದಿದ್ದರು.
ಇಂಗ್ಲೆಂಡ್ ಪ್ಲೇಯಿಂಗ್ XI/ಭಾರತ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ಡಬ್ಲ್ಯೂ), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.
ಬೆಂಚ್: ಝ್ಯಾಕ್ ಕ್ರಾಲಿ, ಡೇನಿಯಲ್ ಲಾರೆನ್ಸ್, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಓಲ್ಲಿ ಪೋಪ್, ಜ್ಯಾಕ್ ಲೀಚ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications