ಭಾರತ vs ಇಂಗ್ಲೆಂಡ್: 3ನೇ ಟೆಸ್ಟ್ 3ನೇ ದಿನ, Live ಸ್ಕೋರ್

ಲೀಡ್ಸ್, ಆಗಸ್ಟ್, 27: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್‌ನ ಮೂರನೇ ದಿನದಾಟ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಬರೊಬ್ಬರಿ 432 ರನ್‌ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ 354 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 423 ರನ್‌ಗಳನ್ನು ಗಳಿಸಿ 8 ವಿಕೆಟ್ ಕಳೆದುಕೊಂಡಿತ್ತು. ಈ ಮೊತ್ತಕ್ಕೆ 9 ರನ್‌ಗಳನ್ನು ಸೇರಿಸಿದ ಇಂಗ್ಲೆಂಡ್ ಮೂರನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ಮುಕ್ತಾಯಗೊಳಿಸಿದೆ.
ಭಾರತ ತಂಡಕ್ಕೆ ಎದುರಾಗಿರುವ ಈ ಅಗ್ನಿ ಪರೀಕ್ಷೆಯನ್ನು ಯಾವ ರೀತಿಯಲ್ಲಿ ಎದುರಿಸಲಿದೆ ಎಂಬುದು ಕುತೂಹಲಕಾರಿಯಾಗಿದೆ. ಬಹುತೇಕ ಮೂರು ದಿನಗಳ ಆಟ ಇನ್ನೂ ಬಾಕಿಯಿದ್ದು ಟೀಮ್ ಇಂಡಿಯಾಗೆ ಸಂಕಷ್ಟದ ಪರಿಸ್ಥಿತಿ ಉಂಟಾಗಿದೆ. ಟೀಮ್ ಇಂಡಿಯಾ ಈ ಪಂದ್ಯವನ್ನು ಉಳಿಸಿಕೊಳ್ಳಲು ನಿರೀಕ್ಷೆಗೂ ಮೀರಿದ ಪ್ರದರ್ಶನವನ್ನು ನೀಡಬೇಕಾಗಿದೆ ಮೊದಲ ಇನ್ನಿಂಗ್ಸ್‌ನಲ್ಲಿ 354 ರನ್‌ಗಳ ಮುನ್ನಡೆ ಸಾಧಿಸಿರುವ ಇಂಗ್ಲೆಂಡ್ ಮೂರನೇ ಪಂದ್ಯದಲ್ಲಿ ಸುಸ್ಥಿತಿಯಲ್ಲಿದೆ. ಈ ಮೂಲಕ ಭಾರತ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸುವ ಯೋಜನೆಯಲ್ಲಿದೆ ಜೋ ರೂಟ್ ಪಡೆ. ಲಾರ್ಡ್ಸ್ ಅಂಗಳದಲ್ಲಿನ ಸೋಲಿಗೆ ಇನ್ನಿಂಗ್ಸ್ ಅಂತರದಿಂದ ಗೆದ್ದು ಪ್ರತಿಕಾರ ತೀರಿಸಲು ಇಂಗ್ಲೆಂಡ್ ತಂಡ ಸಿದ್ಧವಾದಂತೆ ಕಂಡು ಬರುತ್ತಿದೆ.
ಲೀಡ್ಸ್‌ನ ಹೆಡಿಂಗ್ಲೆ ಅಂಗಳದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 354 ರನ್‌ಗಳ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಪಂದ್ಯವನ್ನು ಸಂಪೂರ್ಣವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ ಬೌಲರ್‌ಗಳು ಕೇವಲ 78 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ ಆಘಾತವನ್ನು ಅನುಭವಿಸಿದೆ.
ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ನಾಯಕ ಜೋ ರುಟ್ ಸಿಡಿಸಿದ ಭರ್ಜರಿ ಶತಕದ ನೆರವಿವಿನಿಂದ ಇಂಗ್ಲೆಂಡ್ ತಂಡ 432 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಈ ಮೂಲಕ ಭಾರತ ತಂಡದ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ ಇಂಗ್ಲೆಂಡ್.
ಆದರೆ ಇಂಗ್ಲೆಂಡ್ ತಂಡಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಪ್ರತಿರೋಧ ವ್ಯಕ್ತವಾಗುತ್ತಿದೆ. ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರತಿಕ್ರಿಯೆ ನೀಡುವ ಲಕ್ಷಣ ತೋರಿಸಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ ವಿಕೆಟ್‌ಅನ್ನು ಟೀಮ್ ಇಂಡಿಯಾ ಅಗ್ಗಕ್ಕೆ ಕಳೆದುಕೊಂಡಿದೆಯಾದರೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ಅದ್ಭುತ ಪ್ರದರ್ಶನ ನಿಡುತ್ತಿದ್ದಾರೆ. ಟೀ ವಿರಾಮದ ಸಂದರ್ಭದಲ್ಲಿ ಭಾರತ 116 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿತ್ತು. ರೋಹಿತ್ ಶರ್ಮಾ 59 ರನ್‌ಗಳಿಸಿದ್ದರೆ ಚೇತೇಶ್ವರ್ ಪೂಜಾರ 44 ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು. ಟೀ ವಿರಾಮದ ಅಂತ್ಯದಲ್ಲಿ ಭಾರತ 238 ರನ್‌ಗಳ ಹಿನ್ನೆಡೆಯನ್ನು ಅನುಭವಿಸುತ್ತಿತ್ತು.
ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ ಟೀಮ್ ಇಂಡಿಯಾ ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ ಆಡುವ ಬಳಗ: ಜೋ ರೂಟ್ (ನಾಯಕ), ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೊವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications