For Quick Alerts
ALLOW NOTIFICATIONS  
For Daily Alerts
 

4ನೇ ಟೆಸ್ಟ್‌: ಇಂಗ್ಲೆಂಡ್ ವಿರುದ್ಧ 171 ರನ್ ಮುನ್ನಡೆಯಲ್ಲಿ ಟೀಮ್ ಇಂಡಿಯಾ

England vs India, 4th Test Match, 3rd day, Live Update

ಲಂಡನ್‌: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ vs ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದ್ದು, ಶನಿವಾರ (ಸೆಪ್ಟೆಂಬರ್‌ 4) ಮೂರನೇ ದಿನದಾಟದ ಅಂತ್ಯಕ್ಕೆ 171 ರನ್ ಮುನ್ನಡೆಯಲ್ಲಿತ್ತು. ನಾಯಕ ವಿರಾಟ್‌ ಕೊಹ್ಲಿ (22 ರನ್), ರವೀಂದ್ರ ಜಡೇಜಾ (9) ಆಡುತ್ತಿದ್ದಾರೆ. ಟಾಸ್ ಸೋತಿದ್ದ ಭಾರತ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿತ್ತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ಆರಂಭಿಕ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 11, ಕೆಎಲ್ ರಾಹುಲ್ 17, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 50, ಅಜಿಂಕ್ಯ ರಹಾನೆ 14, ರಿಷಭ್ ಪಂತ್ 9, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್ 57, ಉಮೇಶ್ ಯಾದವ್ 10, ಮೊಹಮ್ಮದ್ ಸಿರಾಜ್ 1 ರನ್‌ನೊಂದಿಗೆ 61.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 191 ರನ್ ಗಳಿಸಿತ್ತು.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್‌ ಪಂದ್ಯ, Live ಸ್ಕೋರ್‌ಕಾರ್ಡ್

1
49715

ಮೊದಲ ಇನ್ನಿಂಗ್ಸ್‌ಗೆ ಇಳಿದ ಇಂಗ್ಲೆಂಡ್, ರೋರಿ ಬರ್ನ್ಸ್ 5, ಹಸೀಬ್ ಹಮೀದ್ 0, ಡೇವಿಡ್ ಮಲನ್ 31, ಜೋ ರೂಟ್ 21, ಆಲಿ ಪೋಪ್ 81, ಜಾನಿ ಬೈರ್‌ಸ್ಟೋ 37, ಮೊಯೀನ್ ಅಲಿ 35, ಕ್ರಿಸ್ ವೋಕ್ಸ್ 50, ಕ್ರೇಗ್ ಓವರ್‌ಟನ್ 1, ಆಲಿ ರಾಬಿನ್ಸನ್ 5, ಜೇಮ್ಸ್ ಆಂಡರ್ಸನ್ 1 ರನ್‌ನೊಂದಿಗೆ 84 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 290 ರನ್ ಗಳಿಸಿ 99 ರನ್ ಮುನ್ನಡೆ ಸಾಧಿಸಿತ್ತು.

ಭಾರತ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್‌ ನೀಡಿತು. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 127, ಕೆಎಲ್ ರಾಹುಲ್ 46, ಚೇತೇಶ್ವರ್ ಪೂಜಾರ 61 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಶನಿವಾರ ಮೂರನೇ ದಿನದಾಟದ ಅಂತ್ಯಕ್ಕೆ ಭಾರತ 92 ಓವರ್‌ ಮುಕ್ತಾಯಕ್ಕೆ 3 ವಿಕೆಟ್‌ ಕಳೆದು 270 ರನ್ ಬಾರಿಸಿ 171 ರನ್ ಮುನ್ನಡೆಯಲ್ಲಿತ್ತು.

ರೋಹಿತ್ ಶರ್ಮಾ ವಿಶೇಷ ದಾಖಲೆ
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಶತಕ (127 ರನ್) ಬಾರಿಸಿದ್ದರು. ಇದು ವಿಶೇಷ ಮೈಲಿಗಲ್ಲಾಗಿ ಗುರುತಿಸಿಕೊಂಡಿತ್ತು. ಶರ್ಮಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಟ್ಟು 8 ಶತಕಗಳನ್ನು ಬಾರಿಸಿದ್ದಾರೆ. ಆದರೆ ಇದರಲ್ಲಿ 7 ಶತಕಗಳು ತವರಿನಲ್ಲಿ ಅಂದರೆ ಭಾರತದಲ್ಲಿ ಬಾರಿಸಿದ ಶತಕಗಳಾಗಿತ್ತು. 8ನೇ ಶತಕ ದಾಖಲಾಗಿತ್ತು ಲಂಡನ್‌ನ ಓವಲ್‌ ಸ್ಟೇಡಿಯಂನಲ್ಲಿ. ಇದು ಶರ್ಮಾ ವಿದೇಶಿ ನೆಲದಲ್ಲಿ ಬಾರಿಸಿದ ಚೊಚ್ಚಲ ಟೆಸ್ಟ್ ಶತಕವಾಗಿ ಗುರುತಿಸಿಕೊಂಡಿದೆ.

ಇತ್ತಂಡಗಳ ಪ್ಲೇಯಿಂಗ್ XI
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Sunday, September 5, 2021, 1:55 [IST]
Other articles published on Sep 5, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+